ಆರೋಪಿ ವಿರುದ್ಧ ಕಾನೂನು ಕ್ರಮ : ಎಂ.ವಿ ಆಶೀಶ್ ರೆಡ್ಡಿ
ಆಶೀಶ್ ರೆಡ್ಡಿ
ಭದ್ರಾವತಿ: ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಎನ್.ಆರ್ ಪುರ ತಾಲೂಕಿನ ಭೈರಾಪುರ ಸರ್ವೆ ನಂ.೪೪, ಭೈರಾಪುರ ಕಿರು ಅರಣ್ಯದ ೩ ಎಕರೆ ೭ ಗುಂಟೆ ಒತ್ತುವರಿ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆಯಿಂದ ಇಟ್ಟಿಗೆ ತಯಾರಿಸಿ ಮಾರಾಟ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ವಿ ಆಶೀಶ್ ರೆಡ್ಡಿ ತಿಳಿಸಿದರು.
ಈ ಕುರಿತು ಮಂಗಳವಾರ ಮಾಹಿತಿ ನೀಡಿದ ಅವರು, ಭದ್ರಾವತಿ ಅರಣ್ಯ ವಿಭಾಗ, ಎನ್.ಆರ್‌ಮರ ತಾಲೂಕು ಭೈರಾಪುರ ಸರ್ವೆ ನಂ.೪೪ ಭೈರಾಪುರ ಕಿರು ಅರಣ್ಯದಲ್ಲಿ ಚಿತ್ರಪ್ಪ ಯರಬಾಳು ಎಂಬುವರು ೩ ಎಕರೆ ೭ ಗುಂಟೆ ಒತ್ತುವರಿ ಮಾಡಿ ಅಕ್ರಮವಾಗಿ ಮಣ್ಣು ಗಣಿಗಾರಿಕೆಯಿಂದ ಇಟ್ಟಿಗೆ ತಯಾರಿಸಿ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ದೂರಿನ ಮೇರೆಗೆ ಸ್ಥಳ ತನಿಖೆ ಮಾಡಲಾಗಿ ದೂರು ಸತ್ಯವಾಗಿರುವುದು ಕಂಡು ಬಂದಿರುತ್ತದೆ ಈ ಒತ್ತುವರಿ ಪ್ರದೇಶ ಭದ್ರಾ ಹುಲಿ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿದ್ದು, ಅಲ್ಲದೆ ಪರಿಸರ ಸೂಕ್ಷ್ಮ ವಲಯದ ಒಳಗೆ ಬರುತ್ತದೆ. ಈ ಹಿನ್ನಲೆಯಲ್ಲಿ ಅ.೨೮ ರಂದು ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿರುತ್ತದೆ ಎಂದರು.
ಈ ಒತ್ತುವರಿ ಪ್ರದೇಶದಿಂದ ೨ ಟ್ರ್ಯಾಕ್ಟರ್ ಲೋಡ್ ಇಟ್ಟಿಗೆ ವಲಯ ಕಛೇರಿ ಆವರಣಕ್ಕೆ ಸಾಗಿಸಿ ಉಳಿದ ಸುಮಾರು ೧೦ ಟ್ರ್ಯಾಕ್ಟರ್ ಲೋಡ್ ಇಟ್ಟಿಗೆ ಸ್ಥಳದಲ್ಲಿಯೇ ಮಹಜರ್ ನಡೆಸಿ ಸರ್ಕಾರದ ಪರವಾಗಿ ಅಮಾನತ್ತು ಪಡಿಸಿಕೊಳ್ಳಲಾಗಿರುತ್ತದೆ. ಈ ಇಟ್ಟಿಗೆ ನಿಯಾಮಾನುಸಾ ವಿಲೇಗೊಳಿಸಲು ನ್ಯಾಯಲಯದ ಅನುಮತಿ ಪಡೆದುಕೊಳ್ಳಲಾಗಿರುತ್ತದೆ ಎಂದರು.
ಸುಮಾರು ೧ ರಿಂದ ೨ ವರ್ಷ ಒತ್ತುವರಿ ಪ್ರದೇಶದಲ್ಲಿ ಅಕ್ರಮವಾಗಿ ಗಣಿಗಾರಿಕೆಯಿಂದ ಮಣ್ಣನ್ನು ತೆಗೆದು ಇಟ್ಟಿಗೆಗಳನ್ನು ತಯಾರಿಸಿ ಮಾರಾಟ ಮಾಡುತ್ತಿರುವುದು ಕಂಡುಬಂದಿರುತ್ತದೆ. ಅಲ್ಲದೆ ಯಾವುದೆ ಪರವಾನಿಗೆ ಇಲ್ಲದೆ ಸರ್ಕಾರಕ್ಕೆ ಯಾವುದೇ ರಾಜಸ್ವ ಪಾವತಿಸದೆ ಗಣಿಗಾರಿಗೆ ಚಟುವಟಿಕೆ ನಡೆಸಿರುವುದು ಸಹ ವಿಚಾರಣೆ ತಿಳಿದು ಬಂದಿರುತ್ತದೆ. ಇದರಿಂದ ಪರಿಸರಕ್ಕೆ ಹಾನಿಯಾಗಿರುವುದಲ್ಲದೇ ಸರ್ಕಾರಕ್ಕೆ ಲಕ್ಷಾಂತರ ರು. ನಷ್ಟವಾಗಿರುತ್ತದೆ ಎಂದು ದೂರಿದರು.
ಈ ಪ್ರಕರಣದ ಕುರಿತು ವಿಚಾರಣೆಗಾಗಿ ನ.೪ ರಂದು ವಲಯ ಕಛೇರಿಗೆ ಹಾಜರಾಗಲು ನೋಟಿಸ್ ನೀಡಲಾಗಿರುತ್ತದೆ. ಈ ಪ್ರಕರಣದಲ್ಲಿ ಆರೋಪಿ ಚಿತ್ರಪ್ಪ ಯರಬಾಳು ದೂರುತ್ತಿರುವ ಹಾಗೆ ಅವರ ತಂದೆಯ ಮೇಲೆ ಇಲಾಖಾ ಸಿಬ್ಬಂದಿಗಳು ಹಲ್ಲೆ ಅಥವಾ ಜಾತಿ ನಿಂದನೆ ಮಾಡಿರುವುದಿಲ್ಲ. ವಾಸ್ತವಾಗಿ ಅ.೨೮ ರಂದು ಸ್ಥಳ ತನಿಖೆ ಸಂದರ್ಭದಲ್ಲಿ ಆರೋಪಿತರ ಕಡೆಯವರು ಇಲಾಖಾ ಸಿಬ್ಬಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುತ್ತಾರೆ. ಇದರ ವೀಡಿಯೋ ಚಿತ್ರಿಕರಣ ಲಭ್ಯವಿರುತ್ತದೆ ಎಂದರು.
ಭೈರಾಪುರ ಸ.ನಂ.೪೪, ಭೈರಾಪುರ ಕಿರು ಅರಣ್ಯದಲ್ಲಿ ಬೂವಣ್ಣ ಎಂಬುವರ ಮತ್ತೊಂದು ಪ್ರಕರಣದಲ್ಲಿ ಅರಣ್ಯ ಒತ್ತುವರಿಯನ್ನು ಭೂಕಬಳಿಕೆ ವಿಶೇಷ ನ್ಯಾಯಲಯದ ತೀರ್ಪಿನಂತೆ ತೆರವುಗೊಳಿಸಿ ಇಲಾಖಾ ಸುಪರ್ದಿಗೆ ತೆಗೆದುಕೊಳ್ಳಲಾಗಿರುತ್ತದೆ. ಅಲ್ಲದೆ ಆರೋಪಿ ಅರಣ್ಯ ಒತ್ತುವರಿಯ ವಿರುದ್ಧ ೬೪ ಏ ನಡಾವಳಿಯ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಮತ್ತು ನ್ಯಾಯಲಯದಲ್ಲಿ ದೋಷಾರೋಪಣಾ ಪಟ್ಟಿ ಸಲ್ಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
No comments:
Post a Comment