ಭದ್ರಾವತಿ ನಗರಸಭೆ ವ್ಯಾಪ್ತಿಯ ಸುರಗಿತೋಪು ಅರಳಿಕಟ್ಟೆ ಶ್ರೀ ವರಸಿದ್ದಿ ವಿನಾಯಕ ಸೇವಾ ಸಮಿತಿ ವತಿಯಿಂದ ಶ್ರೀ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಶನಿವಾರ ಹೋಮ-ಹವನ, ಅನ್ನಸಂತರ್ಪಣೆ ನೆರವೇರಿತು.
ಭದ್ರಾವತಿ : ನಗರಸಭೆ ವ್ಯಾಪ್ತಿಯ ಸುರಗಿತೋಪು ಅರಳಿಕಟ್ಟೆ ಶ್ರೀ ವರಸಿದ್ದಿ ವಿನಾಯಕ ಸೇವಾ ಸಮಿತಿ ವತಿಯಿಂದ ಶ್ರೀ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಶನಿವಾರ ಹೋಮ-ಹವನ, ಅನ್ನಸಂತರ್ಪಣೆ ನೆರವೇರಿತು.
ಕಳೆದ ಕೆಲವು ವರ್ಷಗಳಿಂದ ಸೇವಾ ಸಮಿತಿ ವತಿಯಿಂದ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಮಾಡುವ ಮೂಲಕ ವಿನಾಯಕ ಚತುರ್ಥಿ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ವಿಶೇಷವಾಗಿ ಈ ಬಾರಿ ಅಶ್ವಧಾರಿಯಾಗಿ ವಿಜಯ ಯಾತ್ರೆಗೆ ಹೊರಟ ವಿನಾಯಕ ಮೂರ್ತಿ ಪ್ರತಿಷ್ಠಾಪಿಸಿದ್ದು, ಭಕ್ತರ ಕಣ್ಮನ ಸೆಳೆದಿದೆ.
ಬೆಳಿಗ್ಗೆ ಹೋಮ-ಹವನದೊಂದಿಗೆ ವಿಶೇಷ ಪೂಜೆ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಮಧ್ಯಾಹ್ನ ಅನ್ನಸಂತರ್ಪಣೆ ನೆರವೇರಿತು.
No comments:
Post a Comment