ಭದ್ರಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ದಿವಂಗತ ಎಂ. ಮಲ್ಲಿಕಾರ್ಜುನ ಕೋಠಿ ದತ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ನ್ಯೂಟೌನ್ ಸಿದ್ದಾರ್ಥ ಅಂಧರ ಕೇಂದ್ರದಲ್ಲಿ ದಿವಂಗತ ಎಂ. ಮಲ್ಲಿಕಾರ್ಜುನ ಕೋಠಿ ದತ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ನಗರದ ಬೈಪಾಸ್ ರಸ್ತೆ, ವಿಶ್ವೇಶ್ವರಾಯ ನಗರದ ಸ್ಪೂರ್ತಿ ಇಂಟರ್‌ನ್ಯಾಷನಲ್ ಶಿಕ್ಷಣ ಸಂಯೋಜಕಿ ಬಿ. ಮಮತ ನವೀನ್ ವಚನ ಸಾಹಿತ್ಯ ದತ್ತಿ ವಿಷಯ ಕುರಿತು ಉಪನ್ಯಾಸ ನಡೆಸಿಕೊಟ್ಟರು. ಕಸಾಪ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ ಅಧ್ಯಕ್ಷತೆವಹಿಸಿದ್ದರು.
ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಎಂ.ಆರ್ ರೇವಣಪ್ಪ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಸಿದ್ದಾರ್ಥ ಅಂಧರ ಕೇಂದ್ರದ ಅಧ್ಯಕ್ಷ ಶಿವಬಸಪ್ಪ, ಕಸಾಪ ಕಾರ್ಯದರ್ಶಿ ಟಿ. ತಿಮ್ಮಪ್ಪ, ಕಮಲಾಕರ್, ದತ್ತಿದಾನಿ ನಾಗರತ್ನ ವಾಗೀಶ್ ಕೋಠಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment