ಭದ್ರಾವತಿ ಹಿರಿಯ ಅಂತರಾಷ್ಟ್ರೀಯ ಯೋಗಪಟು, ನಗರದ ಶ್ರೀ ವಿವೇಕಾನಂದ ಯೋಗ ಕೇಂದ್ರದ ಯೋಗ ಶಿಕ್ಷಕ ಡಿ. ನಾಗರಾಜ್‌ರವರ ಸಾಧನೆಯನ್ನು ಪ್ರಶಂಸಿ ನಗರಸಭೆ ಸಭೆ ವತಿಯಿಂದ ಪ್ರೋತ್ಸಾಹ ಧನದ ಚೆಕ್ ನೀಡಿ ಗೌರವಿಸಲಾಯಿತು.
ಭದ್ರಾವತಿ : ಹಿರಿಯ ಅಂತರಾಷ್ಟ್ರೀಯ ಯೋಗಪಟು, ನಗರದ ಶ್ರೀ ವಿವೇಕಾನಂದ ಯೋಗ ಕೇಂದ್ರದ ಯೋಗ ಶಿಕ್ಷಕ ಡಿ. ನಾಗರಾಜ್‌ರವರ ಸಾಧನೆಯನ್ನು ಪ್ರಶಂಸಿ ನಗರಸಭೆ ಸಭೆ ವತಿಯಿಂದ ಪ್ರೋತ್ಸಾಹ ಧನದ ಚೆಕ್ ನೀಡಿ ಗೌರವಿಸಲಾಯಿತು.
ಡಿ. ನಾಗರಾಜ್‌ರವರು ಸುಮಾರು ೪ ದಶಕಗಳಿಂದ ಯೋಗ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದು, ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಹಾಗು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಹಲವಾರು ಪ್ರಶಸ್ತಿ, ಬಿರುದುಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರನ್ನು ರಾಜ್ಯ ಸರ್ಕಾರ, ಜಿಲ್ಲಾಡಳಿತ, ತಾಲೂಕು ಆಡಳಿತ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸನ್ಮಾನಿಸಿ ಗೌರವಿಸಿವೆ. ಇವರ ಸಾಧನೆಯನ್ನು ಪ್ರಶಂಸಿಸಿ ನಗರಸಭೆ ವತಿಯಿಂದ ಪ್ರೋತ್ಸಾಹ ಧನದ ಚೆಕ್ ನೀಡಲಾಯಿತು.
ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ ಚನ್ನಪ್ಪನವರ್, ಕಾಂಗ್ರೆಸ್ ಹಿಂದುಳಿದ ವಿಭಾಗಗಳ ತಾಲೂಕು ಅಧ್ಯಕ್ಷ ಬಿ. ಗಂಗಾಧರ್, ನಗರಸಭೆ ಹಿರಿಯ ಸದಸ್ಯ ವಿ.ಕದಿರೇಶ್ ಉಪಸ್ಥಿತರಿದ್ದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ