ಭದ್ರಾವತಿ ನ್ಯೂಟೌನ್ ಸೈಂಟ್ ಚಾರ್ಲ್ಸ್ ಶಾಲೆಯ ಯು.ಕೆ.ಜಿ ವಿದ್ಯಾರ್ಥಿ ಎಂ.ಕೆ ಸ್ಟೀಫನ್ ಗುರುವಾರ ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ವೇಷಭೂಷಣ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರುರವರ ವೇಷ ಧರಿಸಿದ್ದು ಎಲ್ಲರ ಗಮನ ಸೆಳೆಯಿತು.
ಭದ್ರಾವತಿ : ನ್ಯೂಟೌನ್ ಸೈಂಟ್ ಚಾರ್ಲ್ಸ್ ಶಾಲೆಯ ಯು.ಕೆ.ಜಿ ವಿದ್ಯಾರ್ಥಿ ಎಂ.ಕೆ ಸ್ಟೀಫನ್ ಗುರುವಾರ ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ವೇಷಭೂಷಣ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಜವಾಹರಲಾಲ್ ನೆಹರುರವರ ವೇಷ ಧರಿಸಿದ್ದು ಎಲ್ಲರ ಗಮನ ಸೆಳೆಯಿತು.
ಅಲ್ಲದೆ ಮಕ್ಕಳ ದಿನಾಚರಣೆ ವಿಷಯವಾಗಿ ಮಾತನಾಡಿ ಶಿಕ್ಷಕರ ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರರಾಗಿದ್ದು, ಸ್ಟೀಫನ್ ಹಳೇನಗರ ಭೂತನಗುಡಿ ನಿವಾಸಿ ಪತ್ರಕರ್ತ ಕಿರಣ್‌ಕುಮಾರ್-ರೀನಾ ದಂಪತಿ ಪುತ್ರ. ಶಾಲೆಯಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ವಿಭಿನ್ನ ಕಾರ್ಯಕ್ರಮಗಳನ್ನು ಪ್ರತಿವರ್ಷ ಆಯೋಜಿಸಿಕೊಂಡು ಬರಲಾಗುತ್ತಿದ್ದು, ಈ ಶಾಲೆ ನಗರದ ಪ್ರತಿಷ್ಠಿತ ಶಾಲೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ.
No comments:
Post a Comment