ಭದ್ರಾವತಿ: ತಾಲೂಕಿನ ಅಂತರಗಂಗೆ ಕ್ಯಾಂಪ್ ಚಾನಲ್ ಬಳಿ ಗುಡ್ಡದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದು, ಲಾರಿಗೆ ಜೆಸಿಬಿ ಮೂಲಕ ಕಲ್ಲು ತುಂಬಿಕೊಂಡು ಹೋಗುತ್ತಿರುವುದು.
ಭದ್ರಾವತಿ: ತಾಲೂಕಿನ ಅಂತರಗಂಗೆ ಕ್ಯಾಂಪ್ ಚಾನಲ್ ಬಳಿ ಗುಡ್ಡದಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಶನಿವಾರ ರಾತ್ರಿ ತಹಸೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿರುವ ಘಟನೆ ನಡೆದಿದೆ.
ಚಾನಲ್ ಬಳಿ ಜಮೀನಿನಲ್ಲಿರುವ ಗುಡ್ಡದಲ್ಲಿ ಜೆಸಿಬಿ ಹಾಗು ಟ್ರ್ಯಾಕ್ಟರ್ ಬಳಸಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸಿ ಕಲ್ಲುಗಳನ್ನು ಲಾರಿ ಮೂಲಕ ಬೇರೆಡೆಗೆ ಸಾಗಾಟ ಮಾಡಲಾಗುತ್ತಿದ್ದು, ಖಚಿತ ಮಾಹಿತಿ ಮೇರೆಗೆ ತಹಸೀಲ್ದಾರ್ ಕೆ.ಆರ್ ನಾಗರಾಜು, ಪೇಪರ್‌ಟೌನ್ ಪೊಲೀಸ್ ಠಾಣೆ ನಿರೀಕ್ಷಕಿ ನಾಗಮ್ಮ ಹಾಗು ಭೂ ಇಲಾಖೆ ಅಧಿಕಾರಿಗಳನ್ನೊಳಗೊಂಡ ತಂಡ ದಾಳಿ ನಡೆಸಿದೆ. ದಾಳಿ ವೇಳೆ ಲಾರಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗಿದೆ.
No comments:
Post a Comment