ಭದ್ರಾವತಿ: ಅಂತರರಾಷ್ಟ್ರೀಯ ಲಯನ್ಸ್ ಸಂಸ್ಥೆ ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ನ.೮ರಂದು ಸಂಜೆ ೭ ಗಂಟೆಗೆ ನ್ಯೂಟೌನ್ ಉಂಬ್ಳೆಬೈಲು ರಸ್ತೆಯಲ್ಲಿರುವ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ, ದೀಪಾವಳಿ ಆಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ, ಉಪನ್ಯಾಸ ನೀಡಲಿದ್ದಾರೆ. ಲಯನ್ಸ್ ಕ್ಲಬ್ ಮಾಜಿ ಜಿಲ್ಲಾ ಗೌವರ್ನರ್ ದಿವಾಕರಶೆಟ್ಟಿ, ಪ್ರಾಂತೀಯ ಅಧ್ಯಕ್ಷ ಮಹೇಶ್ ಕುಮಾರ್, ಲಯನ್ಸ್ ಕ್ಲಬ್ ಕಾರ್ಯದರ್ಶಿ ಎನ್. ಶಿವಕುಮಾರ್ ಮತ್ತು ಖಜಾಂಚಿ ಕೆ.ಜಿ ರಾಜ್‌ಕುಮಾರ್ ಉಪಸ್ಥಿತರಿರುವರು.
ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಮೂರ್ತಿ ನಾಯ್ಡು ಅಧ್ಯಕ್ಷತೆ ವಹಿಸಲಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ.
No comments:
Post a Comment