ಭದ್ರಾವತಿ : ಸಿದ್ಧರೂಢನಗರದ ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ೬೯ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ನ.೨೭ರ ಬುಧವಾರ ಸಂಗೀತ ನೃತ್ಯ ಸಂಭ್ರಮ, ವಿವಿಧ ಕ್ಷೇತ್ರಗಳ ಗಣ್ಯರಿಗೆ ಸನ್ಮಾನ ಹಾಗು ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಿಗ್ಗೆ ೯ ಗಂಟೆಗೆ ಉದ್ಯಮಿಗಳಾದ ಎ. ಮಾಧು ಮತ್ತು ಮಾದೇವಪ್ಪ ದ್ವಜಾರೋಹರಣ ನೆರವೇರಿಸಲಿದ್ದು, ನಿವೃತ್ತ ಸಹಾಯಕ ಪೊಲೀಸ್ ನಿರೀಕ್ಷಕ ಕೃಷ್ಣಮೂರ್ತಿ, ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಸದಸ್ಯರಾದ ಎ. ಸಚ್ಚಿದಾನಂದ ಗುಪ್ತ, ಎಚ್.ಪಿ ಶಿವಪ್ಪ ಮತ್ತು ಸರ್ಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಎಸ್.ಆರ್ ನಾಗರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
ಸಂಜೆ ೫ ಗಂಟೆಯಿಂದ ಮಕ್ಕಳಿಗೆ ವೇಷಭೂಷಣ ಸ್ಪರ್ಧೆ ಹಾಗು ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿದೆ. ೬ರಿಂದ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದಾರೆ. ಡಾ. ಪುನೀತ್ ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಿದ್ದಲಿಂಗಯ್ಯ ಅಧ್ಯಕ್ಷತೆ ವಹಿಸಲಿದ್ದು, ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು, ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಬಗರ್ ಹುಕುಂ ಸಮಿತಿ ತಾಲೂಕು ಅಧ್ಯಕ್ಷ ಎಸ್. ಮಣಿಶೇಖರ್, ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಘಟಕದ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಯುವ ಮುಖಂಡರಾದ ಬಿ.ಎಸ್ ಗಣೇಶ್, ಬಿ.ಎಸ್ ಬಸವೇಶ್, ಗೋಪಾಲ್, ವೈ. ರೇಣುಕಮ್ಮ, ಆರ್. ಶ್ರೇಯಸ್ಸು, ಬಿ.ಎಂ ಸಂತೋಷ್, ಕಾಂತರಾಜ್, ಎಚ್. ರವಿಕುಮಾರ್, ಬಿ. ಸಿದ್ದಬಸಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
No comments:
Post a Comment