ಭದ್ರಾವತಿ: ನಗರದ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನ ಕಳವು ಮಾಡಿರುವ ಘಟನೆ ನಡೆದಿದೆ.
ತರಿಕೆರೆ ಕರಕುಚ್ಚಿ ಗ್ರಾಮದ ನಿವಾಸಿ ಎಸ್.ಸಿ ಮನೋಜ್ ಎಂಬುವರು ಅ.೩೦ರಂದು ಬೆಳಿಗ್ಗೆ ೯ ಗಂಟೆ ಸಮಯದಲ್ಲಿ ತಮ್ಮ ಹಿರೋ ಸ್ಲೆಂಡರ್ ಪ್ಲಸ್ ದ್ವಿಚಕ್ರ ವಾಹನ ಬಸ್ ನಿಲ್ದಾಣದ ಮಳಿಗೆಯೊಂದರ ಮುಂಭಾಗ ನಿಲ್ಲಿಸಿದ್ದು, ಸಂಜೆ ೫ ಗಂಟೆ ಸಮಯದಲ್ಲಿ ನೋಡಿದಾಗ ಕಳುವಾಗಿರುವುದು ಕಂಡು ಬಂದಿದೆ. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಸುಮಾರು ೪೦ ಸಾವಿರ ರು. ಮೌಲ್ಯದ ದ್ವಿಚಕ್ರ ವಾಹನ ಕಳವು ಮಾಡಲಾಗಿದ್ದು, ಪತ್ತೆ ಮಾಡಿ ಕೊಡುವಂತೆ ದೂರು ದಾಖಲಾಗಿದೆ.
No comments:
Post a Comment