ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಡೆದ ೨೭ನೇ ರಾಜ್ಯಮಟ್ಟದ ಚುಂಚಾದ್ರಿ ಕಲೋತ್ಸವದಲ್ಲಿ ಭದ್ರಾವತಿ ತಾಲೂಕಿನ ಕಾರೇಹಳ್ಳಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ (ಬಿಜಿಎಸ್) ಕ್ರೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆಯೊಂದಿಗೆ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಭದ್ರಾವತಿ : ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಡೆದ ೨೭ನೇ ರಾಜ್ಯಮಟ್ಟದ ಚುಂಚಾದ್ರಿ ಕಲೋತ್ಸವದಲ್ಲಿ ತಾಲೂಕಿನ ಕಾರೇಹಳ್ಳಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ (ಬಿಜಿಎಸ್) ಕ್ರೇಂದ್ರೀಯ ವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಸಾಧನೆಯೊಂದಿಗೆ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಹಿರಿಯ ಪ್ರಾಥಮಿಕ ಶಾಲೆ ವಿಭಾಗ ಜಾನಪದ ಗೀತೆ ಮತ್ತು ನೃತ್ಯ ದ್ವೀತಿಯ ಸ್ಥಾನ ಪಡೆದುಕೊಂಡಿದೆ. ಹನಿಗವನ/ಚುಟುಕು ಭೂಮಿಕ ಎಂ. ರಾವ್ ಪ್ರಥಮ ಹಾಗೂ ಲಿಖಿತ ಕೃಷ್ಣ ಪಿ ತೃತೀಯ ಸ್ಥಾನ ಪಡೆದಿರುತ್ತಾರೆ.
ಪ್ರೌಢಶಾಲಾ ವಿಭಾಗದಲ್ಲಿ ಯಶಸ್ವಿನಿ. ಕೆ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದು, ಜೀವಿತ ಟಿ.ಆರ್ ಜನಪದಗೀತೆ ಪ್ರಥಮ ಹಾಗು ನೃತ್ಯ ಮತ್ತು ಚಿತ್ರಕಲೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ನಿಹಾರಿಕ ಎಂ ರಾವ್ ಹನಿಗವನ/ಚುಟುಕು ಪ್ರಥಮ ಸ್ಥಾನ ಹಾಗು ಓಂ ಶ್ರೇಯಸ್ .ಎಚ್ ಕವಿತಾವಾಚನ ಪ್ರಥಮ ಸ್ಥಾನ ಪಡೆದುಕೊಂಡು ಶಾಲೆಗೆ ಕೀರ್ತಿ ತಂದಿರುತ್ತಾರೆ. ಈ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಬೋಧಕ ಹಾಗು ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
No comments:
Post a Comment