ಭದ್ರಾವತಿ : ನಗರದ ಅಪೇಕ್ಷ ನೃತ್ಯ ಕಲಾವೃಂದ ಮತ್ತು ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ವತಿಯಿಂದ ಶಿವಮೊಗ್ಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವ ಅಂಗವಾಗಿ ಡಿ.೧ರಂದು ಬೆಳಿಗ್ಗೆ ೧೦.೩೦ಕ್ಕೆ ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾ ಭವನದಲ್ಲಿ ಡಾ. ವಿಷ್ಣುವರ್ಧನ್ ಪ್ರಶಸ್ತಿ ಹಾಗು ಅಪೇಕ್ಷ ರಾಜ್ಯ ಪ್ರಶಸ್ತಿ ವಿತರಣೆ ಮತ್ತು ಸಂಗೀತ ನೃತ್ಯ ಸಂಭ್ರಮ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಸಮಾರಂಭ ಉದ್ಘಾಟಿಸಲಿದ್ದು, ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಡಾ. ವಿಷ್ಣುವರ್ಧನ್ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಅಪೇಕ್ಷ ನೃತ್ಯ ಕಲಾ ವೃಂದ ಅಧ್ಯಕ್ಷೆ ಭಾರತಿ ಗೋವಿಂದ ಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ.
ಶ್ರೀ ಬಸವೇಶ್ವರ ಸಭಾ ಭವನ ಸಂಸ್ಥಾಪಕ ಶಿವಕುಮಾರ್ ಉಪಸ್ಥಿತರಿರುವರು. ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್ ದಿವಂಗತ ವೀರಯೋಧ ಮುರಳಿ ಪ್ರಶಸ್ತಿ ಹಾಗು ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಎಸ್. ಕುಮಾರ್ ದಿವಂಗತ ಜಯಶೀಲನ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್ ಅಪೇಕ್ಷ ರಾಜ್ಯ ಪ್ರಶಸ್ತಿ ಹಾಗು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಕನ್ನಡ ಕುವರ-ಕುವರಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಅಪೇಕ್ಷ ನೃತ್ಯ ಕಲಾ ವೃಂದ ಕಾರ್ಯದರ್ಶಿ ಡಾ. ಅಪೇಕ್ಷ ಮಂಜುನಾಥ್ ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದು, ನಂಬಿರಾಜ್, ಉಮೇಶ್ ಹಾಲಾಡಿ, ಕಾಂತರಾಜ್, ಬಿ.ಟಿ ನಾಗರಾಜ್, ಸ್ನೇಹ ಜೀವಿ ಉಮೇಶ್, ಜ್ಯೋತಿ ಸೋಮಶೇಖರ್, ಸಿದ್ದಲಿಂಗಯ್ಯ, ಸೆಲ್ವರಾಜ್, ಎಸ್.ಆರ್ ನಾಗರಾಜ್ ಮತ್ತು ನಾಗೇಶ್ ಕಬಳಿಕಟ್ಟೆ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅಪೇಕ್ಷ ಮಂಜುನಾಥ್ ಕೋರಿದ್ದಾರೆ.
No comments:
Post a Comment