ಪ್ರಿಯಾಂಕ ಖರ್ಗೆ ಅಭಿಮಾನಿಗಳ ಬಳಗ ಭದ್ರಾವತಿ ತಾಲೂಕು ಶಾಖೆ ವತಿಯಿಂದ ಪಂಚಾಯತ್ ರಾಜ್ ಮತ್ತು ಗ್ರಾಮೀಣ ಅಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆರವರ ಹುಟ್ಟುಹಬ್ಬದ ಪ್ರಯುಕ್ತ ೨೫೦ಕ್ಕೂ ಹೆಚ್ಚು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿಗಳ ವಿತರಣೆ ಕಾರ್ಯಕ್ರಮ ಶುಕ್ರವಾರ ಆಯೋಜಿಸಲಾಗಿತ್ತು.
ಭದ್ರಾವತಿ: ಸರ್ಕಾರಿ ಶಾಲೆಗೆ ಬರುವ ಮಕ್ಕಳು ಆರ್ಥಿಕವಾಗಿ ಹಿಂದುಳಿದ ಮಕ್ಕಳಾಗಿರುತ್ತಾರೆ. ಅವರ ಶಿಕ್ಷಣಕ್ಕೆ ಪೂರಕವಾಗುವ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ನೆರವಾಗಬೇಕೆಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ಹೇಳಿದರು.
ಪ್ರಿಯಾಂಕ ಖರ್ಗೆ ಅಭಿಮಾನಿಗಳ ಬಳಗ ತಾಲೂಕು ಶಾಖೆ ವತಿಯಿಂದ ಪಂಚಾಯತ್ ರಾಜ್ ಮತ್ತು ಗ್ರಾಮೀಣ ಅಭಿವೃದ್ಧಿ ಹಾಗೂ ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆರವರ ಹುಟ್ಟುಹಬ್ಬದ ಪ್ರಯುಕ್ತ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ೨೫೦ಕ್ಕೂ ಹೆಚ್ಚು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ಹಾಗೂ ಲೇಖನ ಸಾಮಗ್ರಿಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಈ ರೀತಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಉತ್ತಮ ಬೆಳವಣಿಗೆಯಾಗಿದ್ದು, ಮುಂದಿನ ದಿನಗಳಲ್ಲಿ ಈ ರೀತಿಯ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕೆಂದರು.
ತರೀಕೆರೆ ಎಆರ್‌ಟಿಓ ಎನ್. ಮಂಜುನಾಥ್ ಮಾತನಾಡಿ, ಯುವರಾಜಕಾರಣಿಯಾಗಿರುವ ಪ್ರಿಯಾಂಕ್ ಖರ್ಗೆಯವರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಅವರು ಬಸವ, ಅಂಬೇಡ್ಕರ್ ಅವರ ಅನುಯಾಯಿಯಾಗಿ ಅವರ ಸಿದ್ಧಾಂತಗಳ ಪ್ರಕಾರ ಪ್ರಬುದ್ಧ ರಾಜಕೀಯ ಮತ್ತು ಜನಸೇವೆ ಮಾಡುತ್ತಿದ್ದಾರೆ. ಅವರ ಹುಟ್ಟು ಹಬ್ಬದ ಪ್ರಯುಕ್ತ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಪೂರಕವಾಗಿರುವ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ ಹಾಗೂ ಲೇಖನ ಸಾಮಗ್ರಿ ವಿತರಣೆ ಕಾರ್ಯಕ್ರಮ ಹಮ್ಮಿಕೊಂಡಿರುವುದು ಸಂತಸ ತಂದಿದೆ ಎಂದರು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಯು. ಮಹದೇವಪ್ಪ, ಕರ್ನಾಟಕ ಜಾನಪದ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಆರ್ ರೇವಣ್ಣಪ್ಪ, ನಿವೃತ್ತ ಮುಖ್ಯ ಶಿಕ್ಷಕ ಡಿ. ಕರಿಯಪ್ಪ, ದಲಿತ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಿ. ಚನ್ನಪ್ಪ, ಪ್ರಿಯಾಂಕ ಖರ್ಗೆ ಅಭಿಮಾನಿ ಬಳಗದ ತಾಲೂಕು ಅಧ್ಯಕ್ಷ ಆದರ್ಶ ಸಿ ಪಾಟೀಲ್ ಹಾಗೂ ತಾಲೂಕ ಪ್ರಧಾನ ಕಾರ್ಯದರ್ಶಿ ಸುನಿಲ್ ಕೋಠಿ, ಭೂತನಗುಡಿ ಶಾಲೆ ಮುಖ್ಯ ಶಿಕ್ಷಕರಾದ ಹಿರೇಮಠ, ಸುಜಾತ ಶಿಕ್ಷಕರಾದ ಪ್ರಕಾಶ್, ಮೀನಾಕ್ಷಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment