ಭದ್ರಾವತಿ: ನಗರದ ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ನ.೨೨ರಂದು ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಸಂಜೆ ೬ ಗಂಟೆಗೆ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.
ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್, ಸಂಘದ ಗೌರವಾಧ್ಯಕ್ಷ ಮೇಜರ್ ಡಾ. ವಿಕ್ರಮ್ ಕೆದ್ಲಾಯ ಸೇರಿದಂತೆ ಇನ್ನಿತರ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿಕೊಡುವಂತೆ ಸಂಘದ ಕಾರ್ಯದರ್ಶಿ ಕೋರಿದ್ದಾರೆ.
No comments:
Post a Comment