ವಿಶಿಷ್ಟ ಕೊಡುಗೆ ನೀಡಿದ ಪ್ರಭಾವಿ, ಜನಮೆಚ್ಚಿದ ನಾಯಕ : ವೇದಿಕೆ ಸಂತಾಪ
ಭದ್ರಾವತಿ ನಗರದ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ ಸಂಗ್ರಹಗಾರ ಗಣೇಶ್‌ರವರು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣರವರ ನಿಧನಕ್ಕೆ ವಿಶೇಷವಾಗಿ ೧೦ ರು. ಮುಖಬೆಲೆ ನೋಟು ಮೂಲಕ ಸಂತಾಪ ಸೂಚಿಸಿದ್ದಾರೆ.
ಭದ್ರಾವತಿ : ನಗರದ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ ಸಂಗ್ರಹಗಾರ ಗಣೇಶ್‌ರವರು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣರವರ ನಿಧನಕ್ಕೆ ವಿಶೇಷವಾಗಿ ೧೦ ರು. ಮುಖಬೆಲೆ ನೋಟು ಮೂಲಕ ಸಂತಾಪ ಸೂಚಿಸಿದ್ದಾರೆ.
ಕೃಷ್ಣರವರ ಜನ್ಮದಿನ ಹಾಗು ನಿಧನ ಹೊಂದಿದ ದಿನದ ದಿನಾಂಕ ಹೊಂದಿರುವ ೧೦ ರು. ಮುಖಬೆಲೆಯ ನೋಟುಗಳ ಮೂಲಕ ಸಂತಾಪ ಸೂಚಿಸಿದ್ದಾರೆ. ಗಣೇಶ್‌ರವರು ಸುಮಾರು ೫ ದಶಕ್ಕೂ ಹೆಚ್ಚು ಕಾಲದಿಂದ ನಾಣ್ಯ, ನೋಟು ಹಾಗು ಅಂಚೆ ಚೀಟಿ ಸಂಗ್ರಹ ಹವ್ಯಾಸದಲ್ಲಿ ತೊಡಗಿಸಿಕೊಂಡಿದ್ದು, ಗಣ್ಯ ವ್ಯಕ್ತಿಗಳ ಹುಟ್ಟು, ನಿಧನ ಹೊಂದಿದ ದಿನ ಹಾಗು ಪ್ರಮುಖ ಐತಿಹಾಸಿಕ ಘಟನೆಗಳ ಸಂದರ್ಭದಲ್ಲಿ ನೋಟುಗಳ ಮೂಲಕ ಶುಭ ಹಾರೈಕೆ, ಸಂತಾಪ ಸೂಚಿಸುವ ಮೂಲಕ ವಿಶೇಷವಾಗಿ ಗಮನ ಸೆಳೆಯುತ್ತಿದ್ದಾರೆ.
ಚುಂಚಾದ್ರಿ ಮಹಿಳಾ ವೇದಿಕೆ ಸಂತಾಪ:
ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣರವರ ನಿಧನಕ್ಕೆ ನಗರದ ಚುಂಚಾದ್ರಿ ಮಹಿಳಾ ವೇದಿಕೆ ಸಂತಾಪ ಸೂಚಿಸಿದೆ. ರಾಜ್ಯದ ವಿಧಾನಸಭೆ ಅಧ್ಯಕ್ಷರಾಗಿ, ಮುಖ್ಯಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಮತ್ತು ಕೇಂದ್ರ ಸಚಿವರಾಗಿ ಹಾಗು ಮಹಾರಾಷ್ಟ್ರ ರಾಜ್ಯಪಾಲರಾಗಿ ಹಾಗು ಇನ್ನಿತರ ಅನೇಕ ಹುದ್ದೆಯನ್ನು ದಕ್ಷತೆಯಿಂದ, ಪ್ರಾಮಾಣಿಕತೆಯಿಂದ ನಿರ್ವಹಿಸಿ ರಾಜ್ಯಕ್ಕೆ, ದೇಶಕ್ಕೆ ತಮ್ಮದೇ ಆದ ಕೊಡುಗೆಯನ್ನು ನೀಡಿರುವ ಒಕ್ಕಲಿಗರ ಜನಾಂಗದ ಪ್ರಭಾವಿ ಹಾಗು ಜನಮೆಚ್ಚಿದ ನಾಯಕರಾದ ಎಸ್.ಎಂ ಕೃಷ್ಣ ಅವರ ನಿಧನ ತುಂಬಲಾರದ ನಷ್ಟವನ್ನುಂಟು ಮಾಡಿದೆ.
ಇವರ ಆತ್ಮಕ್ಕೆ ಭಗವಂತ ಶಾಂತಿ ಕರುಣಿಸಲಿ ಹಾಗು ಕುಟುಂಬ ವರ್ಗಕ್ಕೆ , ಹಿತೈಷಿಗಳಿಗೆ, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಭಗವಂತ ಕುರುಣಿಸಲಿ ಎಂದು ವೇದಿಕೆ ಗೌರವಾಧ್ಯಕ್ಷೆ ಅನುರಾಧ ಪಟೇಲ್, ಅಧ್ಯಕ್ಷೆ ಎಂ.ಎಸ್ ಸುಧಾಮಣಿ ವೆಂಕಟೇಶ್ ಹಾಗೂ ಪದಾಧಿಕಾರಿಗಳು, ನಿರ್ದೇಶಕರು ಸಂತಾಪ ಸೂಚಿಸಿದ್ದಾರೆ.
No comments:
Post a Comment