Tuesday, December 3, 2024

ಸಿಲಿಂಡರ್ ಸೋರಿಕೆಯಿಂದ ಗಾಯಗೊಂಡಿದ್ದ ಗೋಬಿ ಮಂಚೂರಿ ಅಂಗಡಿ ಮಾಲೀಕ ಕೇಶವಮೂರ್ತಿ ಮೃತ

ಕೇಶವಮೂರ್ತಿ 
    ಭದ್ರಾವತಿ: ಕಾಳಿಕಾಂಬ ದೇವಸ್ಥಾನ ರಸ್ತೆ ನಿವಾಸಿ ಹಾಗೂ ಹೊಸಮನೆ ಮೇಘನಾ ಗೋಬಿ ಮಂಚೂರಿ ಅಂಗಡಿ ಮಾಲೀಕ ಕೇಶವಮೂರ್ತಿ(೬೧) ಮಂಗಳವಾರ ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. 
    ಶುಕ್ರವಾರ ಸಂಜೆ ಕೇಶವಮೂರ್ತಿ ಮನೆಯಲ್ಲಿ ಸಿಲಿಂಡರ್ ಸೋರಿಕೆಯಿಂದ ಗಂಭೀರವಾಗಿ ಗಾಯಗೊಂಡು ಶಿವಮೊಗ್ಗ ನಾರಾಯಣ ಹೃದಯಾಲಯ ಹಾಗೂ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಮೆಡ್‌ಕೇರ್ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 
   ಪತ್ನಿ ಕನಕಲಕ್ಷ್ಮಿ, ಪುತ್ರ ಹಾಗು ಇಬ್ಬರು ಪುತ್ರಿಯರಿದ್ದಾರೆ.  ಅಂತ್ಯಕ್ರಿಯೆ ಬುಧವಾರ ಹೊಳೆಹೊನ್ನೂರು ರಸ್ತೆಯ ಹಿಂದೂ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಕೇಶವಮೂರ್ತಿ ಅವರು ನಗರದ ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹಾಗು ಹಳೇನಗರದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ದಾಸೋಹ ಅನ್ನ ಸಂತರ್ಪಣೆ ಸಮಿತಿ ಅಧ್ಯಕ್ಷರಾಗಿ ಮತ್ತು ತಾಲೂಕು ಬ್ರಾಹ್ಮಣ ಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು.  
   ಶಾಸಕ ಬಿ.ಕೆ ಸಂಗಮೇಶ್ವರ್, ತಾಲೂಕು ಬ್ರಾಹ್ಮಣ ಸಂಘ, ಶ್ರೀ ಕನ್ಯಕಾ ಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘ, ಗಾಯತ್ರಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ,  ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನದ ದಾಸೋಹ ಅನ್ನಸಂತರ್ಪಣೆ ಸಮಿತಿ, ಹಳೇನಗರದ ಶ್ರೀ ರಾಮೇಶ್ವರ ಮತ್ತು ಶ್ರೀ ರಾಘವೇಂದ್ರ ಸ್ವಾಮಿ ದೇವಸ್ಥಾನ ದ ಅಡಳಿತ ಮಂಡಳಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಸಂತಾಪ ಸೂಚಿಸಿವೆ. 

No comments:

Post a Comment