Saturday, December 21, 2024

ಡಿ.೨೩ರಂದು ವಿದ್ಯುತ್ ವ್ಯತ್ಯಯ


    ಭದ್ರಾವತಿ: ಮೆಸ್ಕಾಂ ಶಿವಮೊಗ್ಗ ಎಂ.ಆರ್.ಎಸ್ ವಿದ್ಯುತ್ ಸ್ವೀಕರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಡಿ.೨೩ರ ಸೋಮವಾರ ಬೆಳಿಗ್ಗೆ ೯.೩೦ ರಿಂದ ಸಂಜೆ ೬ ಗಂಟೆವರೆಗೆ  ಮಂ.ವಿ.ಸ.ಕಂ ನಗರ ಹಾಗೂ ಗ್ರಾಮೀಣ ಉಪವಿಭಾಗಗಳ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಲು ಕೋರಲಾಗಿದೆ.
    ಹಳೇನಗರ, ತಾಲೂಕು ಕಛೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ ಏರಿಯಾ, ಕಂಚಿನಬಾಗಿಲು, ಶ್ರೀ ಹಳದಮ್ಮ ದೇವಿ ಬೀದಿ, ಖಾಜಿಮೊಹಲ್ಲಾ, ಭೂತನಗುಡಿ, ಹೊಸಮನೆ, ಎನ್.ಎಂ.ಸಿ ರಸ್ತೆ, ಭೋವಿ ಕಾಲೋನಿ, ಸಂತೆ ಮೈದಾನ, ಕೇಶವಪುರ, ಬಾಬಳ್ಳಿ ರಸ್ತೆ, ಸತ್ಯ ಸಾಯಿ ನಗರ, ಶಿವಾಜಿ ವೃತ್ತ, ಹನುಮಂತ ನಗರ, ತಮ್ಮಣ್ಣ ಕಾಲೋನಿ, ಸುಭಾಷ್ ನಗರ, ವಿಜಯನಗರ, ಕುವೆಂಪುನಗರ, ನೃಪತುಂಗ ನಗರ, ಸೈಯ್ಯದ್ ಕಾಲೋನಿ, ಸೀಗೇಬಾಗಿ, ಹಳೇ ಸೀಗೇಬಾಗಿ, ಅಶ್ವತ್ಥನಗರ, ಕಬಳಿಕಟ್ಟೆ, ಭದ್ರಾಕಾಲೋನಿ, ಕಣಕಟ್ಟೆ, ಚನ್ನಗಿರಿ ರಸ್ತೆ, ಗೌರಾಮರ, ಕೃ.ಉ.ಮಾ.ಸ.(ಎ.ಪಿ.ಎಮ್.ಸಿ). ಗಾಂಧಿ ವೃತ್ತ, ಕೋಡಿಹಳ್ಳಿ, ಹೊಸ ಸೇತುವೆ ರಸ್ತೆ, ಸಿದ್ದಾರೂಢನಗರ, ಶಂಕರಮಠ, ಕನಕನಗರ, ಸ್ಮಶಾನ ಪ್ರದೇಶ, ಕ.ರಾ.ರ.ಸಾ.ನಿ. ಘಟಕ, ಹೊಳೆ ಹೊನ್ನೂರು ರಸ್ತೆ, ಖಲಂದರನಗರ, ಜಟ್‌ಪಟ್‌ನಗರ, ಅನ್ವರ್‌ಕಾಲೋನಿ, ಮೊಮಿನ್‌ಮೊಹಲ್ಲಾ, ಅಮೀರ್‌ಜಾನ್ ಕಾಲೋನಿ, ಮಜ್ಜಿಗೇನಹಳ್ಳಿ, ಗೌಡರಹಳ್ಳಿ, ಬಾಬಳ್ಳಿ, ವೀರಾಪುರ, ಶ್ರೀರಾಮನಗರ ಮತ್ತು ಲಕ್ಷ್ಮೀಪುರ ಸೇರಿದಂತೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ನಗರ ಉಪವಿಭಾಗ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ. 

No comments:

Post a Comment