ಭದ್ರಾವತಿ ತಾಲೂಕು ದಂಡಾಧಿಕಾರಿಯಾಗಿ ಕಳೆದ ಸುಮಾರು ೧ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಗ್ರೇಡ್-೧ ತಹಸೀಲ್ದಾರ್ ಕೆ.ಆರ್ ನಾಗರಾಜು ಶಿವಮೊಗ್ಗಕ್ಕೆ ವರ್ಗಾವಣೆಗೊಂಡಿದ್ದು, ಇವರನ್ನು ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಅಭಿನಂದಿಸಲಾಯಿತು.
ಭದ್ರಾವತಿ: ತಾಲೂಕು ದಂಡಾಧಿಕಾರಿಯಾಗಿ ಕಳೆದ ಸುಮಾರು ೧ ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಗ್ರೇಡ್-೧ ತಹಸೀಲ್ದಾರ್ ಕೆ.ಆರ್ ನಾಗರಾಜು ಶಿವಮೊಗ್ಗಕ್ಕೆ ವರ್ಗಾವಣೆಗೊಂಡಿದ್ದು, ಇವರನ್ನು ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಅಭಿನಂದಿಸಲಾಯಿತು.
ಕಳೆದ ಕೆಲವು ದಿನಗಳ ಹಿಂದೆ ಇವರ ವರ್ಗಾವಣೆ ಆದೇಶ ಹೊರಬಿದ್ದಿದ್ದು, ಈ ಹಿನ್ನಲೆಯಲ್ಲಿ ಇವರನ್ನು ಸಮಿತಿ ಅಧ್ಯಕ್ಷ ಬಿ.ಎನ್ ರಾಜು ನೇತೃತ್ವದಲ್ಲಿ ತಹಸೀಲ್ದಾರ್ ಕಛೇರಿಗೆ ತೆರಳಿ ಸಂವಿಧಾನ ಶಿಲ್ಪಿ, ವಿಶ್ವಜ್ಞಾನಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವಚಿತ್ರ ನೀಡಿ ಸನ್ಮಾನಿಸಿ ಅಭಿನಂದಿಸಲಾಯಿತು. ಡಿಎಸ್‌ಎಸ್ ಮುಖಂಡ ಈಶ್ವರಪ್ಪ ಹಾಗು ಸಮಿತಿ ಪ್ರಮುಖರು ಉಪಸ್ಥಿತರಿದ್ದರು.
ತಾಲೂಕು ಕಛೇರಿಯಲ್ಲಿ ಗ್ರೇಡ್-೨ ತಹಸೀಲ್ದಾರ್ ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಂಗಮ್ಮ ಅವರಿಂದ ತೆರವಾದ ಹುದ್ದೆ ಕೆಲವು ತಿಂಗಳುಗಳಿಂದ ಖಾಲಿ ಇದ್ದು, ಈ ಹುದ್ದೆಗೆ ಇದೀಗ ಸರ್ಕಾರ ಹೊಸದಾಗಿ ಗ್ರೇಡ್-೨ ತಹಸೀಲ್ದಾರ್ ನೇಮಕಗೊಳಿಸಿ ಆದೇಶ ಹೊರಡಿಸಿದೆ.
No comments:
Post a Comment