ಭದ್ರಾವತಿ ನಗರದ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ ಸಂಗ್ರಹಗಾರ ಗಣೇಶ್‌ರವರು ದೇಶದ ಆರ್ಥಿಕ ಸುಧಾರಣೆಗಳ ಹರಿಕಾರ, ಮಾಜಿ ಪ್ರಧಾನಿ ಮನಮೋಹನ ಸಿಂಗ್‌ರವರ ನಿಧನಕ್ಕೆ ವಿಶೇಷವಾಗಿ ೧೦ ರು. ಮುಖಬೆಲೆ ನೋಟು ಮೂಲಕ ಸಂತಾಪ ಸೂಚಿಸಿದ್ದಾರೆ.
ಭದ್ರಾವತಿ : ನಗರದ ಹಿರಿಯ ನಾಣ್ಯ, ನೋಟು ಹಾಗು ಅಂಚೆ ಚೀಟಿ ಸಂಗ್ರಹಗಾರ ಗಣೇಶ್‌ರವರು ದೇಶದ ಆರ್ಥಿಕ ಸುಧಾರಣೆಗಳ ಹರಿಕಾರ, ಮಾಜಿ ಪ್ರಧಾನಿ ಮನಮೋಹನ ಸಿಂಗ್‌ರವರ ನಿಧನಕ್ಕೆ ವಿಶೇಷವಾಗಿ ೧೦ ರು. ಮುಖಬೆಲೆ ನೋಟು ಮೂಲಕ ಸಂತಾಪ ಸೂಚಿಸಿದ್ದಾರೆ.
ಸಿಂಗ್‌ರವರ ಜನ್ಮದಿನ ಹಾಗು ನಿಧನ ಹೊಂದಿದ ದಿನದ ದಿನಾಂಕ ಹೊಂದಿರುವ ೧೦ ರು. ಮುಖಬೆಲೆಯ ನೋಟುಗಳ ಮೂಲಕ ಸಂತಾಪ ಸೂಚಿಸಿದ್ದಾರೆ. ಗಣೇಶ್‌ರವರು ಸುಮಾರು ೫ ದಶಕ್ಕೂ ಹೆಚ್ಚು ಕಾಲದಿಂದ ನಾಣ್ಯ, ನೋಟು ಹಾಗು ಅಂಚೆ ಚೀಟಿ ಸಂಗ್ರಹ ಹವ್ಯಾಸದಲ್ಲಿ ತೊಡಗಿಸಿಕೊಂಡಿದ್ದು, ಗಣ್ಯ ವ್ಯಕ್ತಿಗಳ ಹುಟ್ಟು, ನಿಧನ ಹೊಂದಿದ ದಿನ ಹಾಗು ಪ್ರಮುಖ ಐತಿಹಾಸಿಕ ಘಟನೆಗಳ ಸಂದರ್ಭದಲ್ಲಿ ನೋಟುಗಳ ಮೂಲಕ ಶುಭ ಹಾರೈಕೆ, ಸಂತಾಪ ಸೂಚಿಸುವ ಮೂಲಕ ವಿಶೇಷವಾಗಿ ಗಮನ ಸೆಳೆಯುತ್ತಿದ್ದಾರೆ.
No comments:
Post a Comment