ಸಂಸದರಿಗೆ ಗುತ್ತಿಗೆ ಕಾರ್ಮಿಕರ ನಿಯೋಗ ಮನವಿ
ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ಕೆಲಸ ನೀಡುವ ನಿಟ್ಟಿನಲ್ಲಿ ಹಾಗು ಕಾರ್ಖಾನೆ ಅಭಿವೃದ್ಧಿಗೆ ಗಮನ ಹರಿಸುವಂತೆ ಸೋಮವಾರ ಗುತ್ತಿಗೆ ಕಾರ್ಮಿಕರ ನಿಯೋಗ ಸಂಸದ ಬಿ.ವೈ ರಾಘವೇಂದ್ರರನ್ನು ಭೇಟಿ ಮಾಡಿ ಮನವಿ ಮಾಡಿದೆ.
ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಗುತ್ತಿಗೆ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ಕೆಲಸ ನೀಡುವ ನಿಟ್ಟಿನಲ್ಲಿ ಹಾಗು ಕಾರ್ಖಾನೆ ಅಭಿವೃದ್ಧಿಗೆ ಗಮನ ಹರಿಸುವಂತೆ ಸೋಮವಾರ ಗುತ್ತಿಗೆ ಕಾರ್ಮಿಕರ ನಿಯೋಗ ಸಂಸದ ಬಿ.ವೈ ರಾಘವೇಂದ್ರರನ್ನು ಭೇಟಿ ಮಾಡಿ ಮನವಿ ಮಾಡಿದೆ.
ಗುತ್ತಿಗೆ ಕಾರ್ಮಿಕರ ನಿಯೋಗ ಶಿವಮೊಗ್ಗದಲ್ಲಿ ಬಿ.ವೈ ರಾಘವೇಂದ್ರರನ್ನು ಭೇಟಿ ಮಾಡಿ, ಗುತ್ತಿಗೆ ಕಾರ್ಮಿಕರಿಗೆ ಯಾವುದೇ ರೀತಿಯ ಕೆಲಸದ ದಿನಗಳನ್ನು ಹೆಚ್ಚಿಸಿರುವುದಿಲ್ಲ ಮತ್ತು ಕಾರ್ಖಾನೆ ಯಾವುದೇ ರೀತಿಯಲ್ಲೂ ಅಭಿವೃದ್ಧಿ ಹೊಂದುವ ಲಕ್ಷಣಗಳು ಕಂಡು ಬರುತ್ತಿಲ್ಲ. ಈ ಕುರಿತು ಗಮನ ಹರಿಸಬೇಕೆಂದು ಮನವಿ ಮಾಡಲಾಯಿತು.
ಇದಕ್ಕೆ ಸಂಸದರು ಪ್ರತಿಕ್ರಿಯಿಸಿ, ಮುಂದಿನ ಎರಡು ತಿಂಗಳಲ್ಲಿ ಗುತ್ತಿಗೆ ಕಾರ್ಮಿಕರಿಗೆ ಪೂರ್ಣ ಪ್ರಮಾಣದಲ್ಲಿ ಕೆಲಸ ಸಿಗುವಂತೆ ಮಾಡುತ್ತೇನೆ. ಅತಿಶೀಘ್ರದಲ್ಲಿ ಹೆಚ್ಚಿನ ಬಂಡವಾಳ ತೊಡಗಿಸುವಂತೆ ಪುನಃ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ಮೂಲಕ ಕಾರ್ಖಾನೆಯನ್ನು ಉತ್ಪಾದನೆಯತ್ತ ಕೊಂಡೊಯ್ಯಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು ಎಂದು ಗುತ್ತಿಗೆ ಕಾರ್ಮಿಕರ ನಿಯೋಗ ತಿಳಿಸಿದೆ.
ನಿಯೋಗದಲ್ಲಿ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್, ಪ್ರಧಾನ ಕಾರ್ಯದರ್ಶಿ ರಾಕೇಶ್ ಹಾಗು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment