ಭದ್ರಾವತಿ ನಗರಸಭೆಯಲ್ಲಿ ೭ ದಿನಗಳ ಕಾಲ ಪೌರಾಯುಕ್ತರ ಹುದ್ದೆಗೆ ಪರೀಕ್ಷಾರ್ಥ ಕರ್ತವ್ಯಕ್ಕೆ ನಿಯೋಜಿನೆ ಮಾಡಲಾಗಿದ್ದ ಉತ್ತರ ಪ್ರದೇಶ ಮೂಲದ ದೃಷ್ಟಿ ಜೈಸ್ವಾಲ್ ಐಎಎಸ್ ಅವರನ್ನು ನಗರಸಭೆ ವತಿಯಿಂದ ಅಭಿನಂದಿಸಲಾಯಿತು.
ಭದ್ರಾವತಿ: ನಗರಸಭೆಯಲ್ಲಿ ೭ ದಿನಗಳ ಕಾಲ ಪೌರಾಯುಕ್ತರ ಹುದ್ದೆಗೆ ಪರೀಕ್ಷಾರ್ಥ ಕರ್ತವ್ಯಕ್ಕೆ ನಿಯೋಜಿನೆ ಮಾಡಲಾಗಿದ್ದ ಉತ್ತರ ಪ್ರದೇಶ ಮೂಲದ ದೃಷ್ಟಿ ಜೈಸ್ವಾಲ್ ಐಎಎಸ್ ಅವರನ್ನು ನಗರಸಭೆ ವತಿಯಿಂದ ಅಭಿನಂದಿಸಲಾಯಿತು.
ಮಂಗಳವಾರ ನಗರಸಭೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ದೃಷ್ಟಿ ಜೈಸ್ವಾಲ್ ಅವರನ್ನು ಪರಿಚಯಿಸುವ ಮೂಲಕ ೭ ದಿನಗಳ ಕರ್ತವ್ಯದ ಅವಧಿಯಲ್ಲಿ ರಜಾ ಅವಧಿ ಕಳೆದ ೨ ದಿನ ಮಾತ್ರ ದೃಷ್ಟಿ ಜೈಸ್ವಾಲ್ ಕರ್ತವ್ಯ ನಿರ್ವಹಿಸಿದ್ದು, ಈ ಸಂದರ್ಭದಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ವೀಕ್ಷಿಸಿದ್ದಾರೆ. ನಗರಸಭೆ ವಿವಿಧ ವಿಭಾಗಗಳ ಅಧಿಕಾರಿಗಳಿಂದ ಮಾಹಿತಿಗಳನ್ನು ಪಡೆದು ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎಂದರು.
ನಗರಸಭೆ ಸದಸ್ಯರಾದ ಟಿಪ್ಪುಸುಲ್ತಾನ್, ಚನ್ನಪ್ಪ, ಲತಾ ಚಂದ್ರಶೇಖರ್, ಬಿ.ಟಿ ನಾಗರಾಜ್, ಅನುಸುಧಾ ಮೋಹನ್ ಪಳನಿ ಸೇರಿದಂತೆ ಇನ್ನಿತರರು ಮಾತನಾಡಿದರು. ನಗರಸಭೆ ಅಧ್ಯಕ್ಷ ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್ ಮತ್ತು ನಗರ ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್ ಉಪಸ್ಥಿತರಿದ್ದರು. ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು.
No comments:
Post a Comment