ಭದ್ರಾವತಿ ನಗರದ ಬಿ.ಎಚ್ ರಸ್ತೆ, ಎಸ್.ಎಸ್ ಕಾಂಪ್ಲೆಕ್ಸ್(ನಮ್ಮ ಬಜಾರ್) ಮೊದಲನೇ ಮಹಡಿಯಲ್ಲಿ ನೂತನವಾಗಿ ಆರಂಭಗೊಂಡಿರುವ ಜೀವ ಸಂಜೀವಿನಿ ಸ್ವಯಂಪ್ರೇರಿತ ರಕ್ತ ಕೇಂದ್ರ ಗುರುವಾರ ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಶ್ರೀ ಡಾ. ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು.
ಭದ್ರಾವತಿ : ನಗರದ ಬಿ.ಎಚ್ ರಸ್ತೆ, ಎಸ್.ಎಸ್ ಕಾಂಪ್ಲೆಕ್ಸ್(ನಮ್ಮ ಬಜಾರ್) ಮೊದಲನೇ ಮಹಡಿಯಲ್ಲಿ ನೂತನವಾಗಿ ಆರಂಭಗೊಂಡಿರುವ ಜೀವ ಸಂಜೀವಿನಿ ಸ್ವಯಂಪ್ರೇರಿತ ರಕ್ತ ಕೇಂದ್ರ ಗುರುವಾರ ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಶ್ರೀ ಡಾ. ಪಂಡಿತರಾಧ್ಯ ಶಿವಾಚಾರ್ಯ ಸ್ವಾಮೀಜಿ ಉದ್ಘಾಟಿಸಿದರು.
ನಗರದಲ್ಲಿ ತುರ್ತು ಸಂದರ್ಭದಲ್ಲಿ ರಕ್ತ ಕೇಂದ್ರದ ಅವಶ್ಯಕತೆ ಇದ್ದು, ಪ್ರಸ್ತುತ ಶಿವಮೊಗ್ಗದಲ್ಲಿರುವ ವಿವಿಧ ರಕ್ತ ನಿಧಿ ಕೇಂದ್ರಗಳಿಂದ ತುರ್ತು ಸಂದರ್ಭದಲ್ಲಿ ರಕ್ತ ಪೂರೈಕೆ ಮಾಡಿಕೊಳ್ಳಲಾಗುತ್ತಿದೆ. ಇದೀಗ ಸಿರಿ ವೆಲ್‌ಫೇರ್ ಫೌಂಡೇಷನ್‌ರವರು ರಕ್ತ ಕೇಂದ್ರದ ಘಟಕ ಆರಂಭಿಸಿದ್ದು, ರಕ್ತ ಮತ್ತು ರಕ್ತದ ಅಂಶಗಳು ಸುಲಭವಾಗಿ ಲಭ್ಯವಾಗಲಿವೆ.
ಶಿವಮೊಗ್ಗ-ಚಿಕ್ಕಮಗಳೂರು ಬಸವಕೇಂದ್ರದ ಶ್ರೀ ಬಸವ ಮರುಳಸಿದ್ದಸ್ವಾಮೀಜಿ, ಮುಸ್ಲಿಂ ಧರ್ಮಗುರು ಶಾಹುಲ್ ಹಮೀದ್ ಮಡಾಡಿ, ನಗರಸಭೆ ಸದಸ್ಯರಾದ ಬಿ.ಕೆ ಮೋಹನ್, ಬಷೀರ್ ಅಹಮದ್, ತಾಲೂಕು ಬಗರ್‌ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ಎಸ್.ಎಸ್ ಕಾಂಪ್ಲೆಕ್ಸ್ ಮಾಲೀಕ ಶಶಿಕುಮಾರ್, ಮುಖಂಡರಾದ ಜೆಬಿಟಿ ಬಾಬು, ಕೇಸರಿಪಡೆ ಗಿರೀಶ್ ಹಾಗು ರಕ್ತ ಕೇಂದ್ರದ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಉದ್ಘಾಟನೆ ಅಂಗವಾಗಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
No comments:
Post a Comment