ತಾಲೂಕು ಕಚೇರಿ ಮುಂಭಾಗ ಬ್ಲಾಕ್ ಕಾಂಗ್ರಸ್ ಪ್ರತಿಭಟನೆ
ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಲೋಕಸಭೆ ಅಧಿವೇಶನದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಬಗ್ಗೆ ಹಗುರವಾಗಿ ಹಾಗೂ ಬೇಜವಾಬ್ದಾರಿತನದಿಂದ ಮಾತನಾಡಿದ್ದಾರೆಂದು ಆರೋಪಿಸಿ ಗುರುವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಭದ್ರಾವತಿ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ: ಕೇಂದ್ರ ಗೃಹ ಸಚಿವ ಅಮಿತ್ ಶಾರವರು ಲೋಕಸಭೆ ಅಧಿವೇಶನದಲ್ಲಿ ಸಂವಿಧಾನ ಶಿಲ್ಪಿ, ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಬಗ್ಗೆ ಹಗುರವಾಗಿ ಹಾಗೂ ಬೇಜವಾಬ್ದಾರಿತನದಿಂದ ಮಾತನಾಡಿದ್ದಾರೆಂದು ಆರೋಪಿಸಿ ಗುರುವಾರ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಬಗ್ಗೆ ಮಾಡಿರುವ ಅಪಮಾನದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ ಮುಖಂಡರು ಕೇಂದ್ರ ಗೃಹ ಸಚಿವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸಬೇಕೆಂದು ಆಗ್ರಹಿಸಿದರು.
ತಕ್ಷಣ ಅಮಿತ್ ಶಾರವರು ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ ಪ್ರತಿಭಟನಾಕಾರರು ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್. ಕುಮಾರ್ ಪ್ರತಿಭಟನೆ ನೇತೃತ್ವ ವಹಿಸಿದ್ದರು. ನಗರಸಭೆ ಅಧ್ಯಕ್ಷ ಮಣೆ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಹಿರಿಯ ಸದಸ್ಯ ಬಿ.ಕೆ.ಮೋಹನ್ ಕುವೆಂಪು ವಿವಿ ಸಿಂಡಿಕೇಟ್ ಸದಸ್ಯರಾದ ಎಂ. ಶಿವಕುಮಾರ್, ಮುಸ್ವೀರ್ ಬಾಷಾ, ಮುಖಂಡರಾದ ಮಂಜುನಾಥ್, ಸಿ.ಜಯಪ್ಪ, ಈಶ್ವರಪ್ಪ, ಜುಂಜಾನಾಯ್ಕ, ಮಹಮ್ಮದ್ ರಫಿ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
No comments:
Post a Comment