ಭದ್ರಾವತಿ ನ್ಯೂಟೌನ್ ಜಯಶ್ರೀ ವೃತ್ತದ ಛಲವಾದಿಗಳ ಸಮಾಜ(ಪ.ಜಾ)ದಲ್ಲಿ ಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೬೮ನೇ ಮಹಾಪರಿನಿರ್ವಾಣ ದಿನ ಆಚರಿಸಲಾಯಿತು.
ಭದ್ರಾವತಿ: ನ್ಯೂಟೌನ್ ಜಯಶ್ರೀ ವೃತ್ತದಲ್ಲಿರುವ ತಾಲೂಕು ಛಲವಾದಿ ಸಮಾಜ(ಪ.ಜಾ) ಹಾಗು ಜೆಪಿಎಸ್ ಕಾಲೋನಿ ಮೆಸ್ಕಾಂ ಕಛೇರಿ ಸೇರಿದಂತೆ ನಗರದ ವಿವಿಧೆಡೆ ಸಂವಿಧಾನ ಶಿಲ್ಪಿ, ವಿಶ್ವಜ್ಞಾನಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೬೮ನೇ ಮಹಾಪರಿನಿರ್ವಾಣ ದಿನ ಆಚರಿಸಲಾಯಿತು.
ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಪಿಸಲಾಯಿತು. ಅಂಬೇಡ್ಕರ್‌ರವರ ಆಶಯ, ಸಂವಿಧಾನ ಮಹತ್ವ ಕುರಿತು ತಿಳಿಸಲಾಯಿತು.
ಜೆಪಿಎಸ್ ಮೆಸ್ಕಾಂ ಕಛೇರಿ:
ಮೆಸ್ಕಾಂ ವಿಭಾಗೀಯ ಕಛೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಾಶ್ ಬಳ್ಳಾಪುರ, ಲೆಕ್ಕಾಧಿಕಾರಿ ಅಶ್ವಿನ್‌ಕುಮಾರ್, ಆಂತರಿಕ ಲೆಕ್ಕಾಧಿಕಾರಿ ಮಲ್ಲೇಶ್ ನಾಯ್ಕ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ಗಳಾದ ಗಿರೀಶ್, ಬೀರಪ್ಪ ಮತ್ತು ಮುನಾಫ್, ಹೇಮಣ್ಣ, ಗುರುಪ್ರಸಾದ್ ಸೇರಿದಂತೆ ಉಪವಿಭಾಗದ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
ತಾಲೂಕು ಛಲವಾದಿಗಳ ಸಮಾಜ:
ತಾಲೂಕು ಛಲವಾದಿಗಳ ಸಮಾಜ(ಪ.ಜಾ)ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಾಜದ ಅಧ್ಯಕ್ಷ ಚನ್ನಪ್ಪ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಎಸ್.ಎಸ್ ಭೈರಪ್ಪ, ಡಿ. ನರಸಿಂಹಮೂರ್ತಿ, ಬದರಿನಾರಾಯಣ ಸೇರಿದಂತೆ ಸಮಾಜದ ಇನ್ನಿತರರು ಪಾಲ್ಗೊಂಡಿದ್ದರು.
ಭದ್ರಾವತಿ ಜೆಪಿಎಸ್ ಕಾಲೋನಿ ಮೆಸ್ಕಾಂ ಕಛೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ೬೮ನೇ ಮಹಾಪರಿನಿರ್ವಾಣ ದಿನ ಆಚರಿಸಲಾಯಿತು
No comments:
Post a Comment