ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಎಚ್ ಪಟೇಲ್‌ರವರ ೨೪ನೇ ಪುಣ್ಯಸ್ಮರಣೆ ಗುರುವಾರ ಭದ್ರಾವತಿ ನಗರದ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಜರುಗಿತು.
ಭದ್ರಾವತಿ: ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಎಚ್ ಪಟೇಲ್‌ರವರ ೨೪ನೇ ಪುಣ್ಯಸ್ಮರಣೆ ಗುರುವಾರ ನಗರದ ಬೈಪಾಸ್ ರಸ್ತೆ, ಮಿಲ್ಟ್ರಿಕ್ಯಾಂಪ್ ಲೋಕೋಪಯೋಗಿ ಪ್ರವಾಸಿ ಮಂದಿರದಲ್ಲಿ ಜರುಗಿತು.
ಜೆ.ಎಚ್ ಪಟೇಲ್ ಅಭಿಮಾನಿ ಬಳಗದಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪಟೇಲ್‌ರವರ ಭಾವಚಿತ್ರಕ್ಕೆ ಪುಷ್ಪ ನಮನದೊಂದಿಗೆ ಗೌರವ ಸಲ್ಲಿಸುವ ಮೂಲಕ ಅವರ ಆದರ್ಶತನ ಹಾಗು ನಾಡಿಗೆ ನೀಡಿರುವ ಕೊಡುಗೆಗಳನ್ನು ಸ್ಮರಿಸಲಾಯಿತು.
ವಿದ್ಯಾರ್ಥಿ ಸಂಘಟನೆಯ ಯುವ ಮುಖಂಡ ಶಿವಮೊಗ್ಗ ವಿನಯ್ ರಾಜಾವತ್ ಅಧ್ಯಕ್ಷತೆವಹಿಸಿದ್ದರು. ನಗರಸಭೆ ಮಾಜಿ ಸದಸ್ಯ ಆಂಜನಪ್ಪ ಕಾರ್ಯಕ್ರಮ ಉದ್ಘಾಟಿಸಿದರು.
ಜೆ.ಎಚ್ ಪಟೇಲ್ ಅಭಿಮಾನಿ, ಮುಖಂಡ ಶಶಿಕುಮಾರ್ ಗೌಡ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್, ಹಿರಿಯ ಮುಖಂಡರಾದ ನಿಂಗೇಗೌಡ, ಸಿದ್ದಲಿಂಗಯ್ಯ, ಕೆ.ಎಸ್ ವಿಜಯ್ ಕುಮಾರ್ ಸೇರಿದಂತೆ ಅಭಿಮಾನಿಗಳು ಉಪಸ್ಥಿತರಿದ್ದರು.
No comments:
Post a Comment