ಭದ್ರಾವತಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-೧ರ ವತಿಯಿಂದ ವಿದ್ಯಾಮಂದಿರ ವಲಯದ ತಿಮ್ಲಾಪುರ ಕಾರ್ಯಕ್ಷೇತ್ರದಲ್ಲಿ ರೈತರಿಗೆ ಸಮಗ್ರ ಕೃಷಿ ನೀರಾವರಿ, ಹೈನುಗಾರಿಕೆ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು.
ಭದ್ರಾವತಿ: ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-೧ರ ವತಿಯಿಂದ ವಿದ್ಯಾಮಂದಿರ ವಲಯದ ತಿಮ್ಲಾಪುರ ಕಾರ್ಯಕ್ಷೇತ್ರದಲ್ಲಿ ರೈತರಿಗೆ ಸಮಗ್ರ ಕೃಷಿ ನೀರಾವರಿ, ಹೈನುಗಾರಿಕೆ ಮಾಹಿತಿ ಕಾರ್ಯಕ್ರಮ ನಡೆಸಲಾಯಿತು.
ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ರೈತರಿಗಾಗಿ ರೂಪಿಸಿರುವ ಯೋಜನೆಗಳನ್ನು ಸದ್ಭಳಕೆ ಮಾಡಿಕೊಳ್ಳುವ ಜೊತೆಗೆ ಮಾಹಿತಿ ಕಾರ್ಯಾಗಾರಗಳಲ್ಲಿ ಪಾಲ್ಗೊಂಡು ಲಾಭದಾಯಕ ಕೃಷಿ ಕೈಗೊಳ್ಳುವ ವಿಧಾನಗಳ ಕುರಿತು ಸಮಗ್ರವಾಗಿ ಯೋಜನಾಧಿಕಾರಿ ಪ್ರಕಾಶ್ ವೈ ನಾಯ್ಕ ವಿವರಿಸಿದರು. ಕಾರ್ಯಕ್ರಮದಲ್ಲಿ ತಿಮ್ಲಾಪುರ ಕಾರ್ಯಕ್ಷೇತ್ರದ ರೈತರು, ಜನಜಾಗೃತಿ ವೇದಿಕೆ ಸದಸ್ಯೆ ಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment