ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್ ಮನವಿ
ಭದ್ರಾವತಿ ನಗರದ ರಂಗಪ್ಪ ವೃತ್ತದಲ್ಲಿ ಭಾನುವಾರ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದೆ ಕಾನೂನು ಉಲ್ಲಂಘಿಸಿದ ಪ್ರಕರಣದಲ್ಲಿ ವಶಪಡಿಸಿಕೊಳ್ಳಲಾಗಿದ ಸೈಲೆನ್ಸರ್ ಹಾಗು ಕಳಪೆ ಗುಣಮಟ್ಟದ ಮತ್ತು ಅರ್ಧ ಹೆಲ್ಮೆಟ್‌ಗಳನ್ನು ಬುಲ್ಡೋಜರ್ ಬಳಸಿ ನಾಶಪಡಿಸಲಾಯಿತು.
ಭದ್ರಾವತಿ: ರಸ್ತೆ ಸುರಕ್ಷತಾ ನಿಯಮಗಳನ್ನು ಪ್ರತಿಯೊಬ್ಬರು ಪಾಲಿಸುವ ಮೂಲಕ ಅಪಘಾತಗಳನ್ನು ನಿಯಂತ್ರಿಸುವಲ್ಲಿ ಸಹಕರಿಸಬೇಕೆಂದು ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಜಿ.ಕೆ ಮಿಥುನ್‌ಕುಮಾರ್ ಮನವಿ ಮಾಡಿದರು.
ಅವರು ಭಾನುವಾರ ನಗರದ ರಂಗಪ್ಪ ವೃತ್ತದಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸದೆ ಕಾನೂನು ಉಲ್ಲಂಘಿಸಿದ ಪ್ರಕರಣದಲ್ಲಿ ವಶಪಡಿಸಿಕೊಳ್ಳಲಾಗಿದ ಸೈಲೆನ್ಸರ್ ಹಾಗು ಕಳಪೆ ಗುಣಮಟ್ಟದ ಮತ್ತು ಅರ್ಧ ಹೆಲ್ಮೆಟ್‌ಗಳನ್ನು ಬುಲ್ಡೋಜರ್ ಬಳಸಿ ನಾಶಪಡಿಸಿದ ನಂತರ ಮಾತನಾಡಿದರು.
ವಾಹನ ಸವಾರರು ಮದ್ಯಪಾನ ಮಾಡಿ ವಾಹನ ಚಲಾಯಿಸಬಾರದು. ರಸ್ತೆ ಸುರಕ್ಷತಾ ನಿಯಮಗಳನ್ನು ತಿಳಿದುಕೊಂಡು ಅವುಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇತ್ತೀಚೆಗೆ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ ಎಂದರು.
ಸಂಚಾರಿ ಪೊಲೀಸ್ ಠಾಣೆ ನೇತೃತ್ವದಲ್ಲಿ ನಗರದ ವಿವಿಧೆಡೆ ವಶಪಡಿಸಿಕೊಳ್ಳಲಾಗಿದ್ದ ಸುಮಾರು ೨೦ಕ್ಕೂ ಹೆಚ್ಚು ಸೈಲೆನ್ಸರ್, ಸುಮಾರು ೩೦೦೦ಕ್ಕೂ ಹೆಚ್ಚು ಕಳಪೆ ಗುಣಮಟ್ಟದ ಮತ್ತು ಅರ್ಧ ಹೆಲ್ಮೆಟ್‌ಗಳನ್ನು ನಾಶಪಡಿಸಲಾಯಿತು.
ಹೆಚ್ಚುವರಿ ಜಿಲ್ಲಾ ಪೊಲೀಸ್ ರಕ್ಷಣಾಧಿಕಾರಿ ಅನಿಲ್‌ಕುಮಾರ್ ಭೂಮಾರೆಡ್ಡಿ, ಪೊಲೀಸ್ ಉಪ ಅಧೀಕ್ಷಕ ಕೆ.ಆರ್ ನಾಗರಾಜು, ಗ್ರಾಮಾಂತರ ವೃತ್ತ ನಿರೀಕ್ಷಕ ಜಗದೀಶ ಹಂಚಿನಾಳ್, ಸಂಚಾರಿ ಪೊಲೀಸ್ ಠಾಣೆ ಉಪ ನಿರೀಕ್ಷಕಿ ಶಾಂತಲ, ನ್ಯೂಟೌನ್ ಪೊಲೀಸ್ ಠಾಣೆ ಉಪ ನಿರೀಕ್ಷಕಿ ಭಾರತಿ, ಪೇಪರ್‌ಟೌನ್ ಪೊಲೀಸ್ ಠಾಣೆ ಠಾಣಾಧಿಕಾರಿ ನಾಗಮ್ಮ, ಸೇರಿದಂತೆ ವಿವಿಧ ಠಾಣೆಗಳ ಉಪ ನಿರೀಕ್ಷಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
No comments:
Post a Comment