ಭದ್ರಾವತಿ ನಗರದ ಹೊಸಮನೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿ.ಎ ವಿದ್ಯಾರ್ಥಿನಿ ಎಸ್. ವಂದನಾ ಶಿವಮೊಗ್ಗದಲ್ಲಿ ಜರುಗಿದ ೩೭ನೇ ಕುವೆಂಪು ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಕ್ರೀಡಾ ಕೂಟದಲ್ಲಿ ಭಾಗವಹಿಸಿ ಕ್ರೀಡಾಕೂಟದ ಅತ್ಯುತ್ತಮ ಕ್ರೀಡಾ ಪಟು ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.
ಭದ್ರಾವತಿ: ನಗರದ ಹೊಸಮನೆ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿ.ಎ ವಿದ್ಯಾರ್ಥಿನಿ ಎಸ್. ವಂದನಾ ಶಿವಮೊಗ್ಗದಲ್ಲಿ ಜರುಗಿದ ೩೭ನೇ ಕುವೆಂಪು ವಿಶ್ವವಿದ್ಯಾನಿಲಯದ ಅಂತರ ಕಾಲೇಜು ಕ್ರೀಡಾ ಕೂಟದಲ್ಲಿ ಭಾಗವಹಿಸಿ ಕ್ರೀಡಾಕೂಟದ ಅತ್ಯುತ್ತಮ ಕ್ರೀಡಾ ಪಟು ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ.
ವಂದನಾ ೧೦೦ ಮೀ. ಮತ್ತು ೨೦೦ ಮೀ. ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದು, ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಡಾ. ಮಂಜುನಾಥ ಸಕಲೇಶ್, ಐಕ್ಯೂಎಸಿ ಸಂಚಾಲಕ ಡಾ. ಪ್ರಸನ್ನ, ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎ. ಪ್ರವೀಣ ಸೇರಿದಂತೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ವರ್ಗದವರು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರು, ಸದಸ್ಯರು ವಿದ್ಯಾರ್ಥಿನಿ ಎಸ್. ವಂದನಾರನ್ನು ಅಭಿನಂದಿಸಿದ್ದಾರೆ.
No comments:
Post a Comment