ಸಿಟಿಜನ್ ಫಾರ್ ಸೋಷಿಯಲ್ ಜಸ್ಟೀಸ್ ಫೋರಂ ವತಿಯಿಂದ ಭದ್ರಾವತಿ ತಾಲೂಕಿನ ಕಾಗೆಕೋಡಮಗ್ಗೆ ಗ್ರಾಮ ಪಂಚಾಯಿತಿ ಜಯನಗರ ಗ್ರಾಮದಲ್ಲಿ ಸಾಮಾಜಿಕ ಸಾಮರಸ್ಯ ದಿನದ ಅಂಗವಾಗಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಣೆ ಸಲ್ಲಿಸಲಾಯಿತು.
ಭದ್ರಾವತಿ: ಸಿಟಿಜನ್ ಫಾರ್ ಸೋಷಿಯಲ್ ಜಸ್ಟೀಸ್ ಫೋರಂ ವತಿಯಿಂದ ತಾಲೂಕಿನ ಕಾಗೆಕೋಡಮಗ್ಗೆ ಗ್ರಾಮ ಪಂಚಾಯಿತಿ ಜಯನಗರ ಗ್ರಾಮದಲ್ಲಿ ಸಾಮಾಜಿಕ ಸಾಮರಸ್ಯ ದಿನದ ಅಂಗವಾಗಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ಸಮರ್ಪಣೆ ಸಲ್ಲಿಸಲಾಯಿತು.
ಪೋರಂ ಸಂಚಾಲಕ ಕೆ.ಎನ್ ಶ್ರೀಹರ್ಷ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಅವರು ಮಾತನಾಡಿ, ಸಂವಿಧಾನದ ಮಹತ್ವವನ್ನು ತಿಳಿಸಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನುಡಿನಮನಗಳನ್ನು ಅರ್ಪಿಸಿದರು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂವಿಧಾನದ ಮಹತ್ವ ಮತ್ತು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆ, ಸಂವಿಧಾನದ ಆಶಯವನ್ನು ಎತ್ತಿ ಹಿಡಿಯಲು ನಾವೆಲ್ಲರೂ ಶ್ರಮಿಸೋಣ ಎಂಬುದಾಗಿ ಮನವಿ ಮಾಡಿದರು.
ಎಸ್.ಸಿ ಮೋರ್ಚಾ ಅಧ್ಯಕ್ಷ ಹನುಮಂತ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಓಬಿಸಿ ಮೋರ್ಚಾ ಅಧ್ಯಕ್ಷ ರಾಜಶೇಖರ್ ಉಪ್ಪಾರ್ ಸಂವಿಧಾನ ಪ್ರತಿಜ್ಞಾ ವಿಧಿ ಭೋದಿಸಿದರು.
ಗ್ರಾಮದ ಪ್ರಮುಖರಾದ ಚಂದ್ರಪ್ಪ, ನಂಜೇಗೌಡ್ರು, ಅಶೋಕ, ಪಾಪಣ್ಣ, ಶಂಕ್ರನಾಯ್ಕ, ಸ್ವಾಮಿನಾಯ್ಕ, ರೆಡ್ಡಿನಾಯ್ಕ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಮೊಸರಳ್ಳಿ ಅಣ್ಣಪ್ಪ, ರವಿಕುಮಾರ್, ಶಿವಮೂರ್ತಿ, ನಟರಾಜ್, ಶಕುಂತಲಾ, ಲೋಲಾಕ್ಷಿ, ರಾಜಗುರು, ಉಮಾದೇವಿ, ಜಯಲಕ್ಷ್ಮಿ, ಕವಿತಾ ರಾವ್ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
No comments:
Post a Comment