ಯೂನಿವರ್ಸಿಟಿ ಆಫ್ ಸೆಂಟ್ರಲ್ ಅಮೆರಿಕ ವಿಶ್ವವಿದ್ಯಾಲಯ ಭದ್ರಾವತಿ ನಗರದ ಜನ್ನಾಪುರ ನಿವಾಸಿ, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯರವರಿಗೆ ಡಾಕ್ಟರ್ ಆಫ್ ಲೆಟರ್‍ಸ್-ಡಿ.ಲಿಟ್ ಗೌರವ ಪದವಿ ನೀಡಿದೆ. ಈ ಹಿನ್ನಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಟ್ಟಡ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ: ಯೂನಿವರ್ಸಿಟಿ ಆಫ್ ಸೆಂಟ್ರಲ್ ಅಮೆರಿಕ ವಿಶ್ವವಿದ್ಯಾಲಯ ನಗರದ ಜನ್ನಾಪುರ ನಿವಾಸಿ, ಶ್ರೀ ಸತ್ಯಸಾಯಿ ಸೇವಾ ಸಂಸ್ಥೆಗಳ ರಾಜ್ಯ ಸಂಯೋಜಕ ಡಿ. ಪ್ರಭಾಕರ ಬೀರಯ್ಯರವರಿಗೆ ಡಾಕ್ಟರ್ ಆಫ್ ಲೆಟರ್‍ಸ್-ಡಿ.ಲಿಟ್ ಗೌರವ ಪದವಿ ನೀಡಿದೆ. ಈ ಹಿನ್ನಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಟ್ಟಡ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಸಮಿತಿ ಅಧ್ಯಕ್ಷರಾದ ಡಾ. ವಿಜಯಾದೇವಿ ನೇತೃತ್ವದಲ್ಲಿ ಪದಾಧಿಕಾರಿಗಳು ಹಾಗು ಸದಸ್ಯರು ಸನ್ಮಾನಿಸಿ ಗೌರವಿಸಿದರು. ಪ್ರಭಾಕರ ಬೀರಯ್ಯರವರು ಕಟ್ಟಡ ಸಮಿತಿ ಉಪಾಧ್ಯಕ್ಷರಾಗಿದ್ದು, ಅವರ ಬಹುಮುಖ ಸಾಮಾಜಿಕ ಸೇವೆಯನ್ನು ಗುರುತಿಸಿ ಗೌರವ ಡಿ ಲಿಟ್ ಪದವಿ ನೀಡಿರುವುದು ಹೆಮ್ಮೆಯ ವಿಷಯವಾಗಿದೆ. ಅಲ್ಲದೆ ಇದು ಸಮಿತಿಗೆ ಸಂದ ಗೌರವಾಗಿದ್ದು, ಪ್ರಭಾಕರ ಬೀರಯ್ಯರವರು ಮತ್ತಷ್ಟು ಸೇವಾ ಕಾರ್ಯಗಳನ್ನು ಕೈಗೊಳ್ಳಲು ಸ್ಪೂರ್ತಿ ನೀಡಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಸನ್ಮಾನ ಸ್ವೀಕರಿಸಿದ ಪ್ರಭಾಕರ ಬೀರಯ್ಯರವರು ಅಭಿನಂದನಾ ನುಡಿಗಳನ್ನಾಡಿ, ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಸಮಿತಿ ಪ್ರಮುಖರಾದ ಸಿ. ಜಯಪ್ಪ ಹೆಬ್ಬಳಗೆರೆ, ಕಸಾಪ ಕಾರ್ಯದರ್ಶಿ ಎಂ.ಈ ಜಗದೀಶ್, ಮೋಹನ್ ಕುಮಾರ್, ಅಖಿಲ ಭಾರತ ವೀರಶೈವ ಲಿಂಗಾಯತ ಸಮಾಜದ ನಿರ್ದೇಶಕ ಬಿ.ಎಸ್ ಪ್ರಕಾಶ್, ಕರ್ನಾಟಕ ಸಾಹಿತ್ಯ ಸಾಂಸ್ಕೃತಿ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ, ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆಯ ಪ್ರಮುಖರಾದ ಜಂಟಿ ಕಾರ್ಯದರ್ಶಿ ಸೌಮ್ಯ ಡಿ. ಪ್ರಭಾಕರ ಬೀರಯ್ಯ, ನಿರ್ದೇಶಕ ಜಿ. ಸುರೇಶ್, ಶಿಕ್ಷಣ ಸಂಯೋಜಕ ಪರಮೇಶ್ವರಪ್ಪ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.