Saturday, October 12, 2024

ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ೫ ಕೋ. ರು. ವೆಚ್ಚದ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ

ಭದ್ರಾವತಿ ನ್ಯೂಟೌನ್ ವಿಐಎಸ್‌ಎಸ್‌ಜೆ  ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಸುಮಾರು ೫ ಕೋಟಿ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಗ್ರಂಥಾಲಯ, ಆಡಳಿತ ವಿಭಾಗ ಮತ್ತು ಯಾಂತ್ರಿಕ ವಿಭಾಗಗಳ ಕಟ್ಟಡಕ್ಕೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಶಂಕುಸ್ಥಾಪನೆ ನೆರವೇರಿಸಿದರು. 
    ಭದ್ರಾವತಿ: ನಗರದ ನ್ಯೂಟೌನ್ ವಿಐಎಸ್‌ಎಸ್‌ಜೆ  ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ಸುಮಾರು ೫ ಕೋಟಿ ರು. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಗ್ರಂಥಾಲಯ, ಆಡಳಿತ ವಿಭಾಗ ಮತ್ತು ಯಾಂತ್ರಿಕ ವಿಭಾಗಗಳ ಕಟ್ಟಡಕ್ಕೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಶಂಕುಸ್ಥಾಪನೆ ನೆರವೇರಿಸಿದರು. 
    ಅಲ್ಲದೆ ಪಾಲಿಟೆಕ್ನಿಕ್ ವಿವಿಧ ವಿಭಾಗಗಳಲ್ಲಿ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳು, ಬೋಧಕ ಹಾಗು ಬೋಧಕೇತರ ಸಿಬ್ಬಂದಿಗಳೊಂದಿಗೆ ಹಬ್ಬದ ಸಂಭ್ರಮ ಹಂಚಿಕೊಂಡರು. 
    ಪಾಲಿಟೆಕ್ನಿಕ್‌ನಲ್ಲಿ ಅಗತ್ಯವಿರುವ ೧೦೦೦ ಲೀಟರ್ ಸಾಮರ್ಥ್ಯದ ಶುದ್ದ ಕುಡಿಯುವ ನೀರಿನ ಘಟಕ ತುರ್ತಾಗಿ ಸ್ಥಾಪಿಸುವಂತೆ ನಗರಸಭೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
    ವಿಧಾನಪರಿಷತ್ ಸದಸ್ಯೆ ಬಲ್ಕಿಷ್‌ಬಾನು,  ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಪಾಲಿಟೆಕ್ನಿಕ್ ಪಾಂಶುಪಾಲರು, ಭೋಧಕ ಹಾಗು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.  

ನಾಡಹಬ್ಬ ದಸರಾ ಉತ್ಸವ ಮೆರವಣಿಗೆಗೆ ಶಾಸಕ ಬಿ.ಕೆ ಸಂಗಮೇಶ್ವರ್ ಚಾಲನೆ

    ಭದ್ರಾವತಿ : ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಉತ್ಸವ ಮೆರವಣೆಗೆಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಶನಿವಾರ ಚಾಲನೆ ನೀಡಿದರು. 
    ನಗರದ ಬಿ.ಎಚ್ ರಸ್ತೆ, ಲೋಯರ್ ಹುತ್ತಾ, ಶ್ರೀ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಬಳಿ ಸುಮಾರು ೪ ಗಂಟೆ ಸಮಯದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿ ಹಾಗು ನಂದಿ ಧ್ವಜಕ್ಕೆ ವಿಶೇಷ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಲಾಯಿತು. ನಗರಸಭೆ ಅಧ್ಯಕ್ಷ ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಆಶ್ರಯ ಸಮಿತಿ ಅಧ್ಯಕ್ಷ ಗೋಪಾಲ್, ಪೊಲೀಸ್ ನಗರ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 


ಭದ್ರಾವತಿ ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಉತ್ಸವ ಮೆರವಣೆಗೆಗೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಶನಿವಾರ ಚಾಲನೆ ನೀಡಿದರು. 
    ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ವಿವಿಧ ಕಲಾತಂಡಗಳು, ಶ್ರೀ ವಿವೇಕಾನಂದ ಸ್ವಾಮಿ ವಿದ್ಯಾಸಂಸ್ಥೆ, ಶ್ರೀ ಸತ್ಯ ಸಾಯಿಬಾಬಾ ಸಮಗ್ರ ಶಿಕ್ಷಣ ಸಂಸ್ಥೆ ಸೇರಿದಂತೆ ವಿವಿಧ ಶಾಲೆಗಳ ಸ್ಥಬ್ದ ಚಿತ್ರಗಳು, ಹಳೇನಗರದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ, ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ, ಶ್ರೀ ಆಂಜನೇಯ ಸ್ವಾಮಿ, ಶ್ರೀ ರಾಮೇಶ್ವರಸ್ವಾಮಿ, ಶ್ರೀ ಹಳದಮ್ಮ ದೇವಿ, ಶ್ರೀ ಕಾಳಿಕಾಂಬ ದೇವಿ, ಶ್ರೀ ಕೋಟೆ ಬಸವಣ್ಣ ಸ್ವಾಮಿ, ಭೋವಿ ಕಾಲೋನಿ ಶ್ರೀ ಪಿಳ್ಳಗಮ್ಮ ದೇವಿ, ಶ್ರೀ ಸವದತ್ತಿ ಯಲ್ಲಮ್ಮ, ಶ್ರೀ ಶೆಟ್ಟಮ್ಮದೇವಿ, ಶ್ರೀ ಲಕ್ಷ್ಮಮ್ಮ ದೇವಿ, ಶ್ರೀ ಸಿಗಂದೂರು ಚೌಡೇಶ್ವರಿ, ಶ್ರೀ ಕಾಲರಮ್ಮ ದೇವಿ, ಕುಕ್ಕುವಾಡೇಶ್ವರಿ ದೇವಿ, ಶ್ರೀ ಕೋಟೆ ಮಾರಿಯಮ್ಮ ದೇವಿ, ದಾನವಾಡಮ್ಮ, ತಮ್ಮಣ್ಣ ಕಾಲೋನಿ ಶ್ರೀ ಚೌಡೇಶ್ವರಿ ದೇವಿ, ಸಂತೇ ಮೈದಾನದ ಶ್ರೀ ಸುಂಕಲಮ್ಮ ದೇವಿ, ಜನ್ನಾಪುರ ಪ್ಲೇಗ್ ಮಾರಿಯಮ್ಮ, ಭೂತನಗುಡಿ ಶ್ರೀಶನೇಶ್ವರ ಸ್ವಾಮಿ, ವಿಜಯನಗರ ಶ್ರೀ ಶನಿದೇವರು, ಬಿ.ಎಚ್ ರಸ್ತೆ ಶ್ರೀ ವಿಶ್ವಸ್ವರೂಪಿಣಿ ಮಾರಿಯಮ್ಮ ದೇವಿ, ತಮ್ಮಣ್ಣ ಕಾಲೋನಿ ಮರದಮ್ಮ ದೇವಿ, ಚಾಮೇಗೌಡ ಏರಿಯಾ, ಮೀನುಗಾರರ ಬೀದಿ, ಜನ್ನಾಪುರ ಶ್ರೀ ಮಾರಿಯಮ್ಮ ದೇವಿ, ಚನ್ನಗಿರಿ ರಸ್ತೆ ಶ್ರೀ ಮಾರಿಕಾಂಬ ದೇವಿ, ನ್ಯೂಟೌನ್ ಶ್ರೀ ಮಾತಂಗಮ್ಮ ದೇವಿ, ಹಳೇನಗರ ಉಪ್ಪಾರಕೇರಿ ಶ್ರೀ ಅಂತರಘಟ್ಟಮ್ಮ, ಗೌಳಿಗರ ಬೀದಿ ಶ್ರೀ ರಾಮೇಶ್ವರ ಸ್ವಾಮಿ, ದೊಣಬಘಟ್ಟ ರಸ್ತೆ ಶ್ರೀ ರಂಗನಾಥ ಸ್ವಾಮಿ, ಶಿವರಾಮನಗರ ಶ್ರೀ ಯಲ್ಲಮ್ಮ ದೇವಿ, ಗೌಳಿಗರ ಬೀದಿ ಶ್ರೀ ಕರುಮಾರಿಯಮ್ಮ ದೇವಿ, ಬಸವೇಶ್ವರ ವೃತ್ತದ ಶ್ರೀ ಕುರುಪೇಶ್ವರಿ ದೇವಿ, ಶ್ರೀ ಕುಕ್ಕುವಾಡೇಶ್ವರಿ ದೇವಿ, ಹೊಸಮನೆ ಶ್ರೀ ಕೆರೆಕೋಡಮ್ಮ ದೇವಿ, ರಂಗಪ್ಪ ವೃತ್ತ ಗುಳ್ಳಮ್ಮ ದೇವಿ, ಅಂಬೇಡ್ಕರ್ ನಗರ(ಕಂಚಿನ ಬಾಗಿಲು ವೃತ್ತ) ದುರ್ಗಾಂಬಾ ದೇವಿ, ದುರ್ಗಿನಗರದ ಶ್ರೀ ದುರ್ಗಮ್ಮ ದೇವಿ, ಜೈಭೀಮ್ ನಗರದ ಶ್ರೀ ದೊಡ್ಡಮ್ಮ ದೇವಿ, ಕಂಚಿನಬಾಗಿಲು ಮತ್ತು ಬಿ.ಎಚ್ ರಸ್ತೆ ಶ್ರೀ ಚೌಡೇಶ್ವರಿ ದೇವಿ ಹಾಗು ತರೀಕೆರೆ ರಸ್ತೆಯ ಶ್ರೀ ಧರ್ಮಶಾಸ್ತ ಅಯ್ಯಪ್ಪಸ್ವಾಮಿ ಸೇರಿದಂತೆ ಸುಮಾರು ೫೦ ದೇವಸ್ಥಾನಗಳ ಅಲಂಕೃತಗೊಂಡ ದೇವಾನುದೇವತೆಗಳು ಮೆರವಣಿಗೆಯಲ್ಲಿ ಪಾಲ್ಗೊಂಡು ಕಣ್ಮನ ಸೆಳೆದವು.
    ನಾಡಹಬ್ಬ ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು, ಚುನಾಯಿತ ಹಾಗು ನಾಮನಿರ್ದೇಶಿತ ನಗರಸಭೆ ಸದಸ್ಯರು, ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು, ಪೌರ ಸೇವಾ ನೌಕರರ ಸೇವಾ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಪೌರಕಾರ್ಮಿಕರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ನೌಕರರು, ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು, ವಿವಿಧ ದೇವಸ್ಥಾನಗಳ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಅರ್ಚಕರು, ಗಣ್ಯರು ಸೇರಿದಂತೆ ಸ್ಥಳೀಯರು ಉತ್ಸವ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.   
 

ಭದ್ರಾವತಿ ನಾಡಹಬ್ಬ ದಸರಾ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಉತ್ಸವ ಮೆರವಣೆಗೆಯಲ್ಲಿ ನಗರದ ವಿವಿಧ ದೇವಸ್ಥಾನಗಳ ಅಲಂಕೃತಗೊಂಡ ದೇವಾನು ದೇವತೆಗಳು ಪಾಲ್ಗೊಂಡಿದ್ದವು. 

ಆಯುಧಪೂಜೆ ದಿನದಂದು ಧಾರಾಕಾರ ಮಳೆ : ಜನಜೀವನ ಅಸ್ತವ್ಯಸ್ತ

ಭದ್ರಾವತಿ ನಗರದಲ್ಲಿ ಶುಕ್ರವಾರ ಸಂಜೆಯಿಂದ ಧಾರಾಕಾರ ಮಳೆಯಾಗಿದ್ದು, ಚರಂಡಿಗಳಲ್ಲಿ ಕಸಕಡ್ಡಿ ಕಟ್ಟಿಕೊಂಡು ರಸ್ತೆ ಮೇಲೆ ನೀರು ಹರಿಯುತ್ತಿರುವುದು ಕಂಡು ಬಂದಿತು. ಅಲ್ಲದೆ ರಸ್ತೆ ಪಕ್ಕದ ಕೆಲವು ಮನೆಗಳಿಗೆ ಚರಂಡಿ ನೀರು ನುಗ್ಗಿದೆ. 
    ಭದ್ರಾವತಿ: ನಗರದಲ್ಲಿ ಶುಕ್ರವಾರ ಸಂಜೆಯಿಂದ ಧಾರಾಕಾರ ಮಳೆಯಾಗಿದ್ದು, ಇದರಿಂದಾಗಿ ಕೆಲವು ಗಂಟೆಗಳವರೆಗೆ ಜನಜೀವನ ಅಸ್ತವ್ಯಸ್ತಗೊಂಡಿತ್ತು.
    ಹಳ್ಳಕೊಳ್ಳಗಳ್ಳಲ್ಲಿ ನೀರು ತುಂಬಿಕೊಂಡಿದ್ದು, ಕೆಲವು ತಗ್ಗು ಪ್ರದೇಶಗಳಲ್ಲಿ  ಮನೆಗಳಿಗೆ ನೀರು ನುಗ್ಗಿದೆ. ಚರಂಡಿಗಳಲ್ಲಿ ಕಸಕಡ್ಡಿ ಕಟ್ಟಿಕೊಂಡು ರಸ್ತೆ ಮೇಲೆ ನೀರು ಹರಿಯುತ್ತಿರುವುದು ಕಂಡು ಬಂದಿತು. ಅಲ್ಲದೆ ರಸ್ತೆ ಪಕ್ಕದ ಕೆಲವು ಮನೆಗಳಿಗೆ ಚರಂಡಿ ನೀರು ನುಗ್ಗಿದೆ. ಆಯುಧಪೂಜೆ ದಿನದಂದು ಮಳೆಯಾಗಿರುವುದು ಕೆಲವು ಗಂಟೆಗಳವರೆಗೆ ಹಬ್ಬದ ಸಂಭ್ರಮ ಕುಸಿಯುವಂತೆ ಮಾಡಿತು.
    ವ್ಯಾಪಾರ ವಹಿವಾಟು ಸ್ಥಗಿತ :
    ಸಂಜೆ ಏಕಾಏಕಿ ಧಾರಕಾರವಾಗಿ ಮಳೆಯಾದ ಹಿನ್ನಲೆಯಲ್ಲಿ ಹೂ-ಹಣ್ಣು, ತರಕಾರಿ ವ್ಯಾಪಾರಸ್ಥರು, ಬೀದಿಬದಿ ವ್ಯಾಪಾರಿಗಳು ಕಂಗಾಲಾಗಿದ್ದಾರೆ. ನಗರದ ಪ್ರಮುಖ ವಾಣಿಜ್ಯ ರಸ್ತೆಗಳಲ್ಲಿ, ಮಾರುಕಟ್ಟೆಯಲ್ಲಿ ಬೆಳಿಗ್ಗೆಯಿಂದ ಭರ್ಜರಿ ವ್ಯಾಪಾರ ವಹಿವಾಟು ನಡೆದಿದ್ದು, ಸಂಜೆ ಧಾರಾಕಾರ ಮಳೆಯಿಂದ ವ್ಯಾಪಾರ ವಹಿವಾಟು ಸ್ಥಗಿತಗೊಂಡಿತು. ಜನರು ಮನೆಯಿಂದ ಹೊರಬಾರದೆ ಮನೆಗಳಲ್ಲಿ ಉಳಿದುಕೊಂಡಿದ್ದು, ಹೆಚ್ಚಿನ ವ್ಯಾಪಾರ ವಹವಾಟಿನ ನಿರೀಕ್ಷೆ ಹೊಂದಿದ್ದ ವ್ಯಾಪಾರಸ್ಥರು ಹಾಗು ವರ್ತಕರಲ್ಲಿ ನಿರಾಸೆ ಉಂಟು ಮಾಡಿತು. 
    ರಾತ್ರಿ ಕತ್ತಲಿನಲ್ಲಿ ಕಳೆದ ಜನರು : 
    ಧಾರಕಾರ ಮಳೆ ಹಿನ್ನಲೆಯಲ್ಲಿ  ಸಂಜೆ ವಿದ್ಯುತ್ ಸ್ಥಗಿತಗೊಂಡಿದ್ದು, ಮಧ್ಯರಾತ್ರಿವರೆಗೂ ಜನರು ಕತ್ತಲೆಯಲ್ಲಿ ಕಾಲ ಕಳೆಯುವಂತಾಯಿತು. ಅಲ್ಲಲ್ಲಿ ಸಣ್ಣಪುಟ್ಟ ವಿದ್ಯುತ್ ಸಮಸ್ಯೆಗಳು ಕಂಡು ಬಂದಿದ್ದು, ಶನಿವಾರ ಬೆಳಿಗ್ಗೆ ಕೆಲವು ತಾಸು ವಿದ್ಯುತ್ ವ್ಯತ್ಯಯ ಉಂಟಾಯಿತು. ಮೆಸ್ಕಾಂ ಸಿಬ್ಬಂದಿಗಳು ರಾತ್ರಿಯಿಂದಲೇ ಸಣ್ಣಪುಟ್ಟ ವಿದ್ಯುತ್ ಸಮಸ್ಯೆಗಳನ್ನು ಸರಿಪಡಿಸಿದರು. 

ಶ್ರೀ ಶ್ರೀನಿವಾಸ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರುಗಿದ ಸ್ವಾಮಿಯ ರಥೋತ್ಸವ


ಭದ್ರಾವತಿ ನಗರದ ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಶನಿವಾರ ಸ್ವಾಮಿಯ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. 
    ಭದ್ರಾವತಿ : ನಗರದ ಮಿಲ್ಟ್ರಿಕ್ಯಾಂಪ್ ಶ್ರೀ ಶ್ರೀನಿವಾಸ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಶನಿವಾರ ಸ್ವಾಮಿಯ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. 
    ರಥೋತ್ಸವ ಅಂಗವಾಗಿ ಬೆಳಿಗ್ಗೆ ಕಲಾ ಹೋಮ, ಮೂಲ ವಿಗ್ರಹಕ್ಕೆ ವಿಶೇಷ ಅಲಂಕಾರ ಕೈಗೊಳ್ಳಲಾಗಿತ್ತು. ಉತ್ಸವ ಮೂರ್ತಿ ಮೆರವಣಿಗೆ ನಡೆಯಿತು. ನಂತರ ರಥೋತ್ಸವ ನೆರವೇರಿತು. ವಿಶೇಷ ಪೂಜೆ, ಮಹಾಮಂಗಳಾರತಿ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು. ಮಧ್ಯಾಹ್ನ ಮಹಾಪ್ರಸಾದ ವ್ಯವಸ್ಥೆ ಕೈಗೊಳ್ಳಲಾಗಿತ್ತು. 
    ರಥೋತ್ಸವಕ್ಕೆ ನಗರ ವೃತ್ತ ನಿರೀಕ್ಷಕ ಶ್ರೀಶೈಲ ಕುಮಾರ್ ಚಾಲನೆ ನೀಡಿದರು. ದೇವಸ್ಥಾನದ ಪ್ರಧಾನ ಅರ್ಚಕ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಶ್ರೀಕಾಂತ್, ಅಭಿರಾಮ್, ಕೌಶಿಕ್, ಸುಬ್ರಮಣ್ಯ, ಕೃಷ್ಣಪ್ಪ, ಪ್ರದೀಪ್, ಮಲ್ಲಿಕಾರ್ಜುನ್, ಸಂತೋಷ್, ರಮಾಕಾಂತ್, ನರಸಿಂಹಚಾರ್ ಸೇರಿದಂತೆ ಇನ್ನಿತರರನ್ನೊಳಗೊಂಡ ತಂಡ ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಂಡಿತ್ತು. 
    ಉಪತಹಸೀಲ್ದಾರ್ ಮಂಜಾನಾಯ್ಕ, ಕಂದಾಯ ನಿರೀಕ್ಷಕ ಪ್ರಶಾಂತ್ ಸೇರಿದಂತೆ ವಿವಿಧ ನಗರದ ವಿವಿಧೆಡೆಗಳಿಂದ ಸಾವಿರಾರರು ಭಕ್ತಾಧಿಗಳು ರಥೋತ್ಸವ ಕಣ್ತುಂಬಿಕೊಳ್ಳುವ ಮೂಲಕ ಸ್ವಾಮಿಯ ಕೃಪೆಗೆ ಪಾತ್ರರಾದರು.