![](https://blogger.googleusercontent.com/img/a/AVvXsEgnsc--TVS2t4GhNVLMvrzcAWtbaySITPPPr_aAmtBLHviBSoMXlIh6k2hvm94Mzy2X3cq1OFJihB-fF9nt1e8QJsxuk5IoyfLte1gLQ7EYBFF-wh_rxNoO7vgNT3biQYNP0L9g3TIhSlOeqD8LEVImLIY-yX0iplw09MyMDZ3_twN8AkGzuXJMs2okasaM=w299-h400-rw)
ಭದ್ರಾವತಿಯಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ವ್ಯಕ್ತಿಗೆ ನ್ಯಾಯಾಲಯದ ಸಂಖ್ಯೆ ಸಿಸಿ೬೭೩೦/೨೪ರ ಪ್ರಕರಣದಲ್ಲಿ ಅ.೨೩ರಂದು ೧೦,೦೦೦ ರು. ದಂಡ ವಸೂಲಾತಿ ಮಾಡಲಾಗಿದೆ. ವಾಹನ ಸವಾರರಿಗೆ ಎಚ್ಚರಿಸುವ ಉದ್ದೇಶದಿಂದ ಈ ಕುರಿತು ಜಿಲ್ಲಾ ಪೊಲೀಸ್ ತನ್ನ ಎಕ್ಸ್ ಖಾತೆಯಲ್ಲಿ ಸಾರ್ವಜನಿಕವಾಗಿ ಮಾಹಿತಿ ಹಂಚಿಕೊಂಡಿದೆ.
ಭದ್ರಾವತಿ: ನಗರದಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡಿದ ವ್ಯಕ್ತಿಯೊಬ್ಬರಿಗೆ ಸಂಚಾರಿ ಠಾಣೆ ಉಪನಿರೀಕ್ಷಕರು(ಪಿಎಸ್‌ಐ) ಗರಿಷ್ಠ ೧೦,೦೦೦ ರು. ದಂಡ ವಿಧಿಸಿ ವಸೂಲಿ ಮಾಡಿರುವ ಘಟನೆ ನಡೆದಿದೆ.
ನ್ಯಾಯಾಲಯದ ಸಂಖ್ಯೆ ಸಿಸಿ೬೭೩೦/೨೪ರ ಪ್ರಕರಣದಲ್ಲಿ ಅ.೨೩ರಂದು ೧೦,೦೦೦ ರು. ದಂಡ ವಸೂಲಾತಿ ಮಾಡಲಾಗಿದೆ. ವಾಹನ ಸವಾರರಿಗೆ ಎಚ್ಚರಿಸುವ ಉದ್ದೇಶದಿಂದ ಈ ಕುರಿತು ಜಿಲ್ಲಾ ಪೊಲೀಸ್ ತನ್ನ ಎಕ್ಸ್ ಖಾತೆಯಲ್ಲಿ ಸಾರ್ವಜನಿಕವಾಗಿ ಮಾಹಿತಿ ಹಂಚಿಕೊಂಡಿದೆ.
ದೇಶದಲ್ಲಿ ಯಾವುದೇ ವ್ಯಕ್ತಿ ಕುಡಿದು ವಾಹನ ಚಲಾವಣೆ ಮಾಡ್ತಿದ್ದರೆ ಸಂಚಾರಿ ಪೊಲೀಸರು ಆತನ ಮೇಲೆ ಸೆಕ್ಷನ್ ೧೮೫ ರಡಿ ದೂರು ದಾಖಲಿಸುತ್ತಾರೆ. ಬಿಎಸಿ ಪರೀಕ್ಷೆ ಮಾಡಿದ ನಂತರ ದಂಡ ವಿಧಿಸಬಹುದು. ವಾಹನವನ್ನು ಸಹ ಕಸ್ಟಡಿಗೆ ತೆಗೆದುಕೊಳ್ಳಬಹುದು. ಮೋಟಾರು ವಾಹನ ಕಾಯ್ದೆಯ ಸೆಕ್ಷನ್ ೨೦೭ ರ ಅಡಿಯಲ್ಲಿ ನಿಮ್ಮ ವಾಹನವನ್ನು ವಶಪಡಿಸಿಕೊಳ್ಳಲಾಗುತ್ತದೆ. ವಾಹನದ ಎಲ್ಲಾ ದಾಖಲೆಗಳನ್ನು ಸಹ ಸಂಚಾರ ಪೊಲೀಸರು ಸಂಗ್ರಹಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುತ್ತಾರೆ. ಏಳು ತಿಂಗಳವರೆಗೆ ಜೈಲು ಶಿಕ್ಷೆ ಅಥವಾ ೨,೦೦೦ ರೂಪಾಯಿಯಿಂದ ೧೦,೦೦೦ ರೂಪಾಯಿವರೆಗೆ ದಂಡ ವಿಧಿಸಲಾಗುತ್ತದೆ.
ಇನ್ನು ಬೆಂಗಳೂರಿನಲ್ಲಿ ಕುಡಿದು ವಾಹನ ಚಾಲನೆ ಮಾಡಿದರೆ ಮೊದಲ ಬಾರಿ ೧೦,೦೦೦ ರೂಪಾಯಿ ದಂಡ ಅಥವಾ ೬ ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಎರಡನೇ ಬಾರಿ ಅಪರಾಧಕ್ಕೆ ೧೫,೦೦೦ ರೂಪಾಯಿ ದಂಡ ಅಥವಾ ೨ ವರ್ಷಗಳವರೆಗೆ ಜೈಲು ಶಿಕ್ಷೆಯಾಗುತ್ತದೆ.