ಭದ್ರಾವತಿಯಲ್ಲಿ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಹುಟ್ಟುಹಬ್ಬದ ಅಂಗವಾಗಿ ಸೋಮವಾರ ಪ್ರಕೃತಿ ಚಾರಿಟಬಲ್ ಟ್ರಸ್ಟ್ ವತಿಯಿಂದ ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ-ತಿಮ್ಲಾಪುರ ರಸ್ತೆಯಲ್ಲಿರುವ ಹೋಂ ಆಫ್ ಹೋಂ ಜನಸ್ನೇಹಿ ಸೇವಾ ಟ್ರಸ್ಟ್ ನಿರಾಶ್ರಿತರ ಆಶ್ರಮಕ್ಕೆ ದಿನಸಿ ಸಾಮಾಗ್ರಿಗಳನ್ನು ವಿತರಿಸಲಾಯಿತು.
ಭದ್ರಾವತಿ : ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಹುಟ್ಟುಹಬ್ಬ ಸೋಮವಾರ ನಗರದ ವಿವಿಧೆಡೆ ವಿವಿಧ ಸಂಘಟನೆಗಳಿಂದ, ಅಭಿಮಾನಿಗಳಿಂದ ಆಚರಿಸಲಾಯಿತು.
ಪ್ರಕೃತಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಹುಟ್ಟುಹಬ್ಬದ ಅಂಗವಾಗಿ ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ-ತಿಮ್ಲಾಪುರ ರಸ್ತೆಯಲ್ಲಿರುವ ಹೋಂ ಆಫ್ ಹೋಂ ಜನಸ್ನೇಹಿ ಸೇವಾ ಟ್ರಸ್ಟ್ ನಿರಾಶ್ರಿತರ ಆಶ್ರಮದಲ್ಲಿ ದಿನಸಿ ಸಾಮಾಗ್ರಿಗಳನ್ನು ವಿತರಿಸುವ ಮೂಲಕ ಆಚರಿಸಲಾಯಿತು. ಪ್ರಕೃತಿ ಜಾರಿಟಬಲ್ ಟ್ರಸ್ಟ್ ಅಧ್ಯಕ್ಷ ಕೃಷ್ಣನಾಯ್ಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.