Sunday, November 10, 2024

ನ.೧೪ರಂದು ಕಾರುಣ್ಯ ದಾರಿದೀಪ ಉದ್ಘಾಟನೆ

ಭದ್ರಾವತಿ: ನಗರದ ಜನ್ನಾಪುರ ಕಾರುಣ್ಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೂತನವಾಗಿ ಕಾರುಣ್ಯ ದಾರಿದೀಪ ಯೋಜನೆ ಜಾರಿಗೆ ತರಲಾಗುತ್ತಿದ್ದು, ನ.೧೪ರ ಮಕ್ಕಳ ದಿನಾಚರಣೆಯಂದು ಬೆಳಿಗ್ಗೆ ೯.ಕ್ಕೆ ಉದ್ಘಾಟನೆಗೊಳ್ಳುತ್ತಿದೆ. ಅಲ್ಲದೆ ಪ್ರೇರಕ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಮಾರ್ಗದರ್ಶಕರೊಂದಿಗೆ ಸಂವಾದ ಕಾರ್ಯಕ್ರಮ ಸಹ ಹಮ್ಮಿಕೊಳ್ಳಲಾಗಿದೆ. 
ಕಳೆದ ಮೂರು ವರ್ಷಗಳಿಂದ ಟ್ರಸ್ಟ್ ವತಿಯಿಂದ ಅನಾಥಶ್ರಮ ಮತ್ತು ವೃದ್ದಾಶ್ರಮ ನಡೆಸಿಕೊಂಡು ಬರುತ್ತಿದ್ದು, ಇದರ ಜೊತೆಗೆ ವೈಜ್ಞಾನಿಕಾ ಜಾಗೃತಿ ಕಾರ್ಯಕ್ರಮಗಳನ್ನು ಸಹ ನಡೆಸಿಕೊಂಡು ಬರಲಾಗುತ್ತಿದೆ. ಇದೀಗ ಹೊಸದೊಂದು ಯೋಜನೆ ಅನುಷ್ಠಾನಗೊಳಿಸಲು ಮುಂದಾಗಿದೆ. ತಾಲೂಕಿನಲ್ಲಿರುವ ಸರ್ಕಾರಿ ಶಾಲೆಗಳನ್ನು ಅಧ್ಯಯನ ಮಾಡಿ ಸರ್ಕಾರಿ ಶಾಲೆಯಲ್ಲಿರುವ ಮಕ್ಕಳ ಅಗತ್ಯತೆಗಳನ್ನು ಮನಗಂಡು ಕಾರುಣ್ಯ ದಾರಿದೀಪ ಎಂಬ ಯೋಜನೆಯನ್ನು ಜಾರಿಗೂಳಿಸಲಾಗುತ್ತಿದೆ. ಈ ಯೋಜನೆಗೆ ತಾಲೂಕಿನಲ್ಲಿರುವ ೩೩ ಪ್ರೌಢಶಾಲೆಗಳನ್ನು ಆಯ್ಕೆ ಮಾಡಲಾಗಿದ್ದು, ಆಯ ಶಾಲೆಯ ನುರಿತ ಶಿಕ್ಷಕರನ್ನು ಪ್ರೇರಕ ಶಿಕ್ಷಕರನ್ನಾಗಿ ಗುರುತಿಸಲಾಗಿದೆ. 
ನೂತನ ಯೋಜನೆಯನ್ನು ವಿಐಎಸ್‌ಎಲ್ ಅತಿಥಿಗೃಹದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಟ್ರಸ್ಟ್ ಗೌರವಾಧ್ಯಕ್ಷ ಡಾ. ವಿಜಯ್. ಜಿ ದುಬೈ, ನಿರ್ದೇಶಕರಾದ ವಿ.ಟಿ ರಮೇಶ್ ಇನ್ನಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಟ್ರಸ್ಟ್ ಅಧ್ಯಕ್ಷ ಜಿ. ರಾಜು ಅಧ್ಯಕ್ಷತೆ ವಹಿಸಲಿದ್ದಾರೆ. 

ಉದ್ಯೋಗ ಖಾತ್ರಿ ಯೋಜನೆಯಡಿ ಭ್ರಷ್ಟಾಚಾರ, ಅಕ್ರಮ

ಸಿಂಗನಮನೆ ಗ್ರಾ.ಪಂ. ವಿರುದ್ಧ ಹೋರಾಟ ಅಂತ್ಯ 

ಭದ್ರಾವತಿ ಸಿಂಗನಮನೆ ಗ್ರಾಮ ಪಂಚಾಯಿತಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ(ನರೇಗಾ)ಯಡಿ ಭ್ರಷ್ಟಾಚಾರ, ಅಕ್ರಮ ನಡೆದಿದ್ದು, ಇದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ)ವತಿಯಿಂದ ಕಳೆದ ೫ ದಿನಗಳಿಂದ ನಡೆಯುತ್ತಿದ್ದ ಹೋರಾಟ ಭಾನುವಾರ ಅಂತ್ಯಗೊಂಡಿದೆ.
    ಭದ್ರಾವತಿ : ಸಿಂಗನಮನೆ ಗ್ರಾಮ ಪಂಚಾಯಿತಿ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ(ನರೇಗಾ)ಯಡಿ ಭ್ರಷ್ಟಾಚಾರ, ಅಕ್ರಮ ನಡೆದಿದ್ದು, ಇದರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ)ವತಿಯಿಂದ ಕಳೆದ ೫ ದಿನಗಳಿಂದ ನಡೆಯುತ್ತಿದ್ದ ಹೋರಾಟ ಭಾನುವಾರ ಅಂತ್ಯಗೊಂಡಿದೆ. 
    ಉದ್ಯೋಗ ಖಾತ್ರಿ ಯೋಜನೆಯಡಿ ನಡೆದಿರುವ ಭ್ರಷ್ಟಾಚಾರ, ಅಕ್ರಮ ಕುರಿತು ತನಿಖೆ ಕೈಗೊಳ್ಳುವುದು ಹಾಗು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನ.೫ ರಿಂದ ವೇದಿಕೆ ವತಿಯಿಂದ ಅನಿರ್ಧಿಷ್ಟಾವಧಿ ಹೋರಾಟ ಕೈಗೊಳ್ಳಲಾಗಿತ್ತು. ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಲಾಯಿತು. 
    ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಅಧಿಕಾರಿ ಜಯಲಕ್ಷ್ಮೀ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ, ಅಧಿಕಾರಿಗಳಾದ ಉಪೇಂದ್ರ ಬಾಬು, ಚೇತನ್ ಹಾಗು ಇನ್ನಿತರರು ಆಗಮಿಸಿ ಹೋರಾಟಗಾರ ದೂರುಗಳನ್ನು ಆಲಿಸಿ ಮನವಿ ಸ್ವೀಕರಿಸಿ ತಪ್ಪಿತಸ್ಥರ ವಿರುದ್ದ ಕ್ರಮಕೈಗೊಳ್ಳವುದಾಗಿ ಭರವಸೆ ನೀಡಿದರು. ಈ ಹಿನ್ನಲೆಯಲ್ಲಿ ಹೋರಾಟ ಅಂತ್ಯಗೊಂಡಿತು. 
    ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಜಿಲ್ಲಾಧ್ಯಕ್ಷರಾದ ರಾಘವೇಂದ್ರ ಹೆಬ್ಬಾರ್, ಉಪಾಧ್ಯಕ್ಷರಾದ ಈಶ್ವರ್, ಕಾರ್ಯಕರ್ತರಾದ ನರಸಿಂಹ ರಾಜು, ಎಸ್.ಆರ್ ರವಿಕುಮಾರ್, ಮೋಹನ್ ಕುಮಾರ್, ಆಟೋ ಆನಂದ್, ಯೋಗ ಮಾಸ್ಟರ್ ಗಣೇಶ್, ಮುರುಗೇಶ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.  

ನಿವೃತ್ತ ಇಂಜಿನಿಯರ್ ಕೆ. ರವೀಂದ್ರ ಘೋಡ್ಕೆ ನಿಧನ

ಕೆ. ರವೀಂದ್ರ ಘೋಡ್ಕೆ 
    ಭದ್ರಾವತಿ: ನಗರದ ಮೈಸೂರು ಕಾಗದ ಕಾರ್ಖಾನೆ ನಿವೃತ್ತ ಇಂಜಿನಿಯರ್ ಕೆ. ರವೀಂದ್ರ ಘೋಡ್ಕೆ(೬೪) ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದರು. 
    ಪತ್ನಿ, ಪುತ್ರಿ ಹಾಗು ಸಹೋದರರು ಇದ್ದಾರೆ. ಇವರು ಅನಾರೋಗ್ಯಕ್ಕೆ ಒಳಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಎಂಪಿಎಂ ಕಾರ್ಖಾನೆ ಸಿವಿಲ್ ವಿಭಾಗದಲ್ಲಿ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದರು. ಇವರ ಅಂತ್ಯಕ್ರಿಯೆ ಶಿವಮೊಗ್ಗದಲ್ಲಿ ನೆರವೇರಿತು. ಕಾರ್ಮಿಕ ವರ್ಗದವರು ಇವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 

ಭದ್ರಾವತಿ ವಿಧಾನಸಭಾ ಕ್ಷೇತ್ರ ಪ್ರವಾಸಿಗರ ತಾಣ ಮನವಿಗೆ : ಸಂಸದ ಬಿ.ವೈ ರಾಘವೇಂದ್ರ ಸ್ಪಂದನೆ

ಸಚಿವ ಎಚ್.ಕೆ ಪಾಟೀಲ್‌ರಿಗೆ ಪತ್ರ ಬರೆದು ಕ್ರಮ ಕೈಗೊಳ್ಳಲು ಒತ್ತಾಯ 

ಭದ್ರಾವತಿ ವಿಧಾನಸಭಾ ಕ್ಷೇತ್ರವನ್ನು ಆಕರ್ಷಣೀಯ ಪ್ರವಾಸಿಗರ ತಾಣ ಮಾಡುವ ಸಂಬಂಧ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ದೊರಕಿಸಿಕೊಡಬೇಕೆಂದು ಭದ್ರಾವತಿ ನಗರದ ಜನ್ನಾಪುರ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ವತಿಯಿಂದ  ಸಲ್ಲಿಸಲಾಗಿದ್ದ ಮನವಿಗೆ ಸಂಸದ ಬಿ.ವೈ ರಾಘವೇಂದ್ರರವರು ಸ್ಪಂದಿಸಿ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ ಪಾಟೀಲ್‌ರವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. 
    ಭದ್ರಾವತಿ: ಭದ್ರಾವತಿ ವಿಧಾನಸಭಾ ಕ್ಷೇತ್ರವನ್ನು ಆಕರ್ಷಣೀಯ ಪ್ರವಾಸಿಗರ ತಾಣ ಮಾಡುವ ಸಂಬಂಧ ರಾಜ್ಯ ಸರ್ಕಾರದಿಂದ ಆರ್ಥಿಕ ನೆರವು ದೊರಕಿಸಿಕೊಡಬೇಕೆಂದು ನಗರದ ಜನ್ನಾಪುರ ಡಿ.ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್, ಸುವರ್ಣ ಮಹಿಳಾ ವೇದಿಕೆ ವತಿಯಿಂದ  ಸಲ್ಲಿಸಲಾಗಿದ್ದ ಮನವಿಗೆ ಸಂಸದ ಬಿ.ವೈ ರಾಘವೇಂದ್ರರವರು ಸ್ಪಂದಿಸಿ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗು ಪ್ರವಾಸೋದ್ಯಮ ಇಲಾಖೆ ಸಚಿವ ಎಚ್.ಕೆ ಪಾಟೀಲ್‌ರವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ. 



    ಟ್ರಸ್ಟ್ ಛೇರ್ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್ ರವರು ಭದ್ರಾವತಿ ವಿಧಾನಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಕಳೆದ ಸುಮಾರು ೫೦ ವರ್ಷಗಳಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ. ನಗರಸಭೆ ವ್ಯಾಪ್ತಿ ಸರ್ವೆ ನಂ.೧೧೨ರ ಹೊಸಮನೆ ತಮ್ಮಣ್ಣ ಕಾಲೋನಿ ಸಮೀಪವಿರುವ ಸುಮಾರು ೮೦೦ ವರ್ಷಗಳ ಇತಿಹಾಸವಿರುವ ಸುಮಾರು ೫೦ ಎಕರೆ ೨೦ ಗುಂಟೆ ವಿಸ್ತೀರ್ಣವುಳ್ಳ ಸರ್ಕಾರಿ ಹಿರೇಕೆರೆ ಹಾಗೂ ಹಳೇನಗರದ ಪುರಾಣ ಪ್ರಸಿದ್ದ ಕ್ಷೇತ್ರಪಾಲಕ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನ, ಕಲ್ಲಹಳ್ಳಿ ಗ್ರಾಮ ಪಂಚಾಯತಿ ಸಿರಿಯೂರು ಗ್ರಾಮದಲ್ಲಿರುವ ಸಿರಿಯೂರು ಸರ್ಕಾರಿ ಕೆರೆ, ನಾಗತಿಬೆಳಗಲು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಸ್ಥಾನ ಸಮೀಪವಿರುವ ಸರ್ಕಾರಿ ಕೆರೆ ಮತ್ತು ಅರಳಿಕೊಪ್ಪ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗೊಂದಿ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ ಸಮೀಪವಿರುವ ವಿಶಾಲವಾದ ಖಾಲಿ ಜಾಗ ಆಕರ್ಷಣೀಯ ಪ್ರವಾಸಿಗರ ತಾಣವನ್ನಾಗಿಸುವುದು. 
ಗೊಂದಿ ಜಲಾಶಯ ಆಕರ್ಷಣಿಯ ಪ್ರವಾಸಿಗರ ತಾಣವನ್ನಾಗಿಸುವ ಜೊತೆಗೆ ಭದ್ರಾ ಜಲಾಶಯ ಕೆಳಭಾಗದಲ್ಲಿರುವ ನೂರಾರು ಎಕರೆ ವಿಶಾಲವಾದ ಖಾಲಿ ಜಾಗದಲ್ಲಿ ಕೆಆರ್‌ಎಸ್ ಮಾದರಿಯಲ್ಲಿ ಆಕರ್ಷಣೀಯ ತಾಣವನ್ನಾಗಿಸುವುದು ಹಾಗು ಬಿಳಕಿ ಗ್ರಾಮಪಂಚಾಯತಿ ವ್ಯಾಪ್ತಿಯ ಬೆಳಕಿ ಸರ್ಕಾರಿ ಕೆರೆಯನ್ನು ಆಕರ್ಷಣೀಯ ಪ್ರವಾಸಿಗರ ತಾಣವನ್ನಾಗಿ ಮಾಡುವಂತೆ ಒತ್ತಾಯಿಸುವ ಮೂಲಕ ಅಗತ್ಯವಿರುವ ಆರ್ಥಿಕ ನೆರವು ರಾಜ್ಯ ಸರ್ಕಾರದಿಂದ ಬಿಡುಗಡೆಗೊಳಿಸಿಕೊಡುವಂತೆ ಇತ್ತೀಚಿಗೆ ಸಂಸದರಿಗೆ ಮನವಿ ಸಲ್ಲಿಸಿದ್ದರು. 
    ಮನವಿಗೆ ಸ್ಪಂದಿಸಿರುವ ಸಂಸದರು, ಹೆಚ್.ಕೆ.ಪಾಟೀಲ್‌ರವರಿಗೆ ಪತ್ರ ಬರೆದು ಭದ್ರಾವತಿ ವಿಧಾನಸಭಾ ಕ್ಷೇತ್ರವನ್ನು ಕೇಂದ್ರ ಸರ್ಕಾರದಿಂದ ಪ್ರವಾಸಿ ತಾಣವನ್ನಾಗಿಸಲು ಕ್ರಮವಹಿಸಲಾಗಿದೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರದಿಂದಲೂ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆಂದು ಟ್ರಸ್ಟ್ ಪ್ರಧಾನಕಾರ್ಯದರ್ಶಿ
ಬಿ.ವಿ.ಗಿರಿನಾಯ್ಡು ತಿಳಿಸಿದ್ದಾರೆ.