ಬುಧವಾರ, ನವೆಂಬರ್ 13, 2024

ವಿಐಎಸ್‌ಎಲ್ ಕಾರ್ಖಾನೆಯಲ್ಲಿ ಸೈಬರ್ ಅಪರಾಧಗಳ ಕುರಿತು ಜಾಗೃತಿ

ಶಿವಮೊಗ್ಗ ಸಿ.ಇ.ಎನ್  ಕ್ರೈಂ ಠಾಣೆವತಿಯಿಂದ ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಅಧಿಕಾರಿಗಳು ಹಾಗು ಕಾರ್ಮಿಕರಿಗೆ ಜಾಗೃತಿ ಮೂಡಿಸಲಾಯಿತು. 
    ಭದ್ರಾವತಿ : ಶಿವಮೊಗ್ಗ ಸಿ.ಇ.ಎನ್  ಕ್ರೈಂ ಠಾಣೆವತಿಯಿಂದ ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಅಧಿಕಾರಿಗಳು ಹಾಗು ಕಾರ್ಮಿಕರಿಗೆ ಜಾಗೃತಿ ಮೂಡಿಸಲಾಯಿತು. 
     ಸಿ.ಇ.ಎನ್ ಕ್ರೈಂ ಠಾಣೆ ಉಪಾಧೀಕ್ಷಕರ ನೇತೃತ್ವದಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಸೈಬರ್ ಅಪರಾಧಗಳು ಹಾಗು ಮುನ್ನಚ್ಚರಿಕೆ ಕ್ರಮಗಳ ಕುರಿತು ಅಧಿಕಾರಿಗಳು ಹಾಗು ಕಾರ್ಮಿಕರಿಗೆ ಜಾಗೃತಿ ಮೂಡಿಸಲಾಯಿತು. 
    ಕಾರ್ಖಾನೆಯ ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಬಂಧಕ ಎಲ್. ಪ್ರವೀಣ್‌ಕುಮಾರ್ ಹಾಗು ವಿವಿಧ ಇಲಾಖೆಗಳ ಅಧಿಕಾರಿಗಳು, ಕಾರ್ಮಿಕರು, ಭದ್ರತಾ ವಿಭಾಗದ ಅಧಿಕಾರಿಗಳು, ಸಿಬ್ಬಂದಿಗಳು, ಸಿ.ಎನ್.ಎನ್ ಕ್ರೈಂ ಠಾಣೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು. 

ಕ್ರೈಸ್ತ ಸಮುದಾಯದ ಧರ್ಮೋಪದೇಶ ಶಿಕ್ಷಕಿಯರ ದಿನಾಚರಣೆ

ಭದ್ರಾವತಿ ತಾಲೂಕಿನ ಕಾರೆಹಳ್ಳಿ ಗ್ರಾಮದ ಸಂತ ಅಂತೋಣಿಯವರ ಧರ್ಮ ಕೇಂದ್ರದಲ್ಲಿ ಧರ್ಮೋಪದೇಶ ಶಿಕ್ಷಕರ ದಿನಾಚರಣೆ ಮತ್ತು ಮಕ್ಕಳ ದಿನಾಚರಣೆ ಆಚರಿಸಲಾಯಿತು. 
    ಭದ್ರಾವತಿ: ಕ್ರೈಸ್ತ ಸಮುದಾಯದ ಶಿವಮೊಗ್ಗ ಧರ್ಮ ಕ್ಷೇತ್ರದ ಧರ್ಮೋಪದೇಶ ಶಿಕ್ಷಕಿಯರ ದಿನಾಚರಣೆ ಶಿವಮೊಗ್ಗ ಧರ್ಮಕ್ಷೇತ್ರಾದ್ಯಂತ ಎಲ್ಲಾ ಕ್ರೈಸ್ತ ಸಮುದಾಯದ ದೇವಾಲಯಗಳಲ್ಲಿ ಆಚರಿಸಲಾಯಿತು.
    ತಾಲೂಕಿನ ಕಾರೆಹಳ್ಳಿ ಗ್ರಾಮದ ಸಂತ ಅಂತೋಣಿಯವರ ಧರ್ಮ ಕೇಂದ್ರದಲ್ಲಿ ಧರ್ಮೋಪದೇಶ ಶಿಕ್ಷಕರ ದಿನಾಚರಣೆ ಮತ್ತು ಮಕ್ಕಳ ದಿನಾಚರಣೆ ಆಚರಿಸಲಾಯಿತು. ಈ ನಿಟ್ಟಿನಲ್ಲಿ ಧರ್ಮೋಪದೇಶ ಶಿಕ್ಷಕಿಯರಿಗೆ ಉಡುಗೊರೆ ನೀಡಿ ಸನ್ಮಾನಿಸಿ ಗೌರವಿಸಲಾಯಿತು. ಧರ್ಮ ಕೇಂದ್ರದ ಗುರುಗಳಾದ ಸಂತೋಷ ಅಲ್ಮೇಡ, ಧರ್ಮ ಭಗಿನಿಯರು, ಮಕ್ಕಳು, ಪೋಷಕರು ಮತ್ತು ಭಕ್ತಾದಿಗಳು ಪಾಲ್ಗೊಂಡಿದ್ದರು.

ಶ್ರೀ ವಿಜಯದಾಸರ ಆರಾಧನಾ ಮಹೋತ್ಸವ : ನಗರ ಸಂಕೀರ್ತನೆ

ಶ್ರೀ ವಿಜಯದಾಸರ ಆರಾಧನಾ ಅಂಗವಾಗಿ ಅಖಿಲ ಭಾರತ ಮಾಧ್ವ ಮಹಾ ಮಂಡಳಿ ವತಿಯಿಂದ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದವರಗೆ ನಗರ ಸಂಕೀರ್ತನೆ ನೆಡೆಸಲಾಯಿತು. 
    ಭದ್ರಾವತಿ: ಶ್ರೀ ವಿಜಯದಾಸರ ಆರಾಧನಾ ಅಂಗವಾಗಿ ಅಖಿಲ ಭಾರತ ಮಾಧ್ವ ಮಹಾ ಮಂಡಳಿ ವತಿಯಿಂದ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಿಂದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದವರಗೆ ನಗರ ಸಂಕೀರ್ತನೆ ನೆಡೆಸಲಾಯಿತು. 
    ನಂತರ ಜನ್ನಾಪುರ ಶ್ರೀ ಮಠದಲ್ಲಿ  ಉಡುಪಿ ವಂಶಿ ಕೃಷ್ಣಚಾರರವರು ಉಪನ್ಯಾಸ ನೀಡಿದರು. ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಮಹಾ ಮಂಡಳಿ ವತಿಯಿಂದ ಪ್ರತಿ ವರ್ಷ ಶ್ರೀ ವಿಜಯ ದಾಸರ ಆರಾಧನಾ ಮಹೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. 
    ಮಹಾ ಮಂಡಳಿ ಅಧ್ಯಕ್ಷ ವಿ. ಜಯತೀರ್ಥ ಪ್ರಧಾನ ಕಾರ್ಯದರ್ಶಿ ಕೆ.ಆರ್ ವೆಂಕಟೇಶ ಹಾಗೂ ದಾಸರ ವೇಷದಲ್ಲಿ ಎನ್.ಎಂ ಸುಧೀಂದ್ರ, ಶ್ರೀ ಗೋಪಾಲಾಚಾರ್, ಶ್ರೀನಿವಾಸಚಾರ್, ರಮಾಕಾಂತ್, ಹರಿದಾಸ ಮಹಿಳಾ ಮಂಡಳಿ ಸದಸ್ಯರು ಸೇರಿದಂತೆ ಭಕ್ತರು ಪಾಲ್ಗೊಂಡಿದ್ದರು.