Friday, January 31, 2025

ಮಹಿಳೆಯರು ಸಬಲೀಕರಣಕ್ಕಾಗಿ ಸ್ವಸಹಾಯ ಸಂಘಗಳ ಸದಸ್ಯತ್ವ ಹೊಂದಿ : ಹೆಲೆನ್ ಮೋರಸ್

ಭದ್ರಾವತಿ ನ್ಯೂಟೌನ್ ಸೆಂಟ್ ಚಾರ್ಲ್ಸ್ ಆವರಣದಲ್ಲಿ  ಕರುಣಾ ಸೇವಾ ಕೇಂದ್ರದ ವತಿಯಿಂದ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸ್ವ ಸಹಾಯ ಸಂಘಗಳ ಸದಸ್ಯರಿಗೆ ಸಂಘದ ಪರಿಕಲ್ಪನೆಯ ಬಗ್ಗೆ ಮಾಹಿತಿ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು. 
    ಭದ್ರಾವತಿ: ಸ್ವಸಹಾಯ ಸಂಘಗಳ ಮಹಿಳೆಯರು ಸಬಲೀಕರಣಗೊಳ್ಳುವ ಮೂಲಕ ಕುಟುಂಬದ ಆಸರೆಯಾಗಬೇಕು ಹೊರತು ದುರಾಸೆಗಳಿಂದ ಸಂಕಷ್ಟಗಳಿಗೆ ಒಳಗಾಗಬಾರದು ಎಂದು ನಗರದ ಕರುಣಾ ಸೇವಾ ಕೇಂದ್ರದ ಮುಖ್ಯಸ್ಥೆ ಸಿಸ್ಟರ್ ಹೆಲೆನ್ ಮೋರಸ್ ಹೇಳಿದರು. 
    ನಗರದ ನ್ಯೂಟೌನ್ ಸೆಂಟ್ ಚಾರ್ಲ್ಸ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕರುಣಾ ಸೇವಾ ಕೇಂದ್ರದ ವತಿಯಿಂದ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಸ್ವ ಸಹಾಯ ಸಂಘಗಳ ಸದಸ್ಯರಿಗೆ ಸಂಘದ ಪರಿಕಲ್ಪನೆಯ ಬಗ್ಗೆ ಮಾಹಿತಿ ಕಾರ್ಯಗಾರದಲ್ಲಿ ಅವರು ಪಾಲ್ಗೊಂಡು ಮಾತನಾಡಿದರು. 
    ಮಹಿಳೆಯರು ದುರಾಸೆ ಹಾಗು ಅಮಿಷಗಳಿಂದ ಸ್ವಸಹಾಯ ಸಂಘಗಳ ಸದಸ್ಯರಾಗಬಾರದು. ದುರಾಸೆ ಹಾಗು ಅಮಿಷಗಳು ಮಹಿಳೆಯರ ವಿನಾಶಕ್ಕೆ ಕಾರಣವಾಗಲಿವೆ. ಇತ್ತೀಚಿನ ದಿನಗಳಲ್ಲಿ ಹಲವು ಮಹಿಳೆಯರು ಹಣವನ್ನು ಸಕಾರಾತ್ಮಕವಾಗಿ ಉಪಯೋಗಿಸಿಕೊಂಡು ಜೀವನದ ಮೌಲ್ಯಗಳನ್ನು ತನ್ನದಾಗಿಸಿಕೊಂಡು ಯಶಸ್ವಿನ ದಾರಿಯಲ್ಲಿ ಮುಂದುವರೆದಿದ್ದಾರೆ ಎಂದರು. 
ಸಮುದ್ರದ ಬಂದರುಗಳಲ್ಲಿ ಲೈಟ್ ಹೌಸ್‌ಗಳನ್ನು ನಿರ್ಮಿಸಿರುತ್ತಾರೆ. ಸಮುದ್ರದಲ್ಲಿ ದಾರಿ ತಪ್ಪಿದ ನಾವಿಕರಿಗೆ ಈ ಲೈಟ್ ಹೌಸ್‌ಗಳು ದಾರಿದೀಪಗಳಾಗಿವೆ. ಇದೆ ರೀತಿ ಸ್ವಸಹಾಯ ಸಂಘಗಳು ಜೀವನಕ್ಕೆ ದಾರಿ ದೀಪವಾಗಿರಲಿ. ಅಲ್ಲದೆ ಸ್ವಸಹಾಯ ಸಂಘಗಳಿಂದ ಇಡೀ ಕುಟುಂಬ ಸಂತೋಷ, ತೃಪ್ತಿ ಸಮಾಧಾನವನ್ನು ಅನುಭವಿಸಿ ಉತ್ತಮ ಜೀವನ ಕಂಡುಕೊಳ್ಳುವಂತಾಗಬೇಕೆಂದರು. 
    ಮಹಿಳೆಯರು ಹಲವು ಸ್ವಸಹಾಯ ಸಂಘಗಳಲ್ಲಿ ಸದಸ್ಯತ್ವ ಹೊಂದುವ ಬದಲು ಒಂದೇ ಸ್ವಸಹಾಯ ಸಂಘದಲ್ಲಿ ತೊಡಗಿಸಿಕೊಂಡು ಉತ್ತಮ ಸಾಧನೆಯಲ್ಲಿ ತೊಡಗಬೇಕೆಂದರು. ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ೧೩ ಸ್ವಸಹಾಯ ಸಂಘಗಳಲ್ಲಿ ಒಟ್ಟು ೧೨೦ ಮಹಿಳೆಯರು ಸದಸ್ಯತ್ವ ಪಡೆದುಕೊಂಡಿದ್ದಾರೆ. 
  ಕರುಣಾ ಸೇವಾ ಕೇಂದ್ರದ ಸಿಸ್ಟರ್ ಪ್ರಭ, ಒಕ್ಕೂಟದ ಸದಸ್ಯರಾದ ರೇಷ್ಮ, ಕಾರ್ಯಕರ್ತರಾದ ಸಾವಿತ್ರಿ. ಧನಲಕ್ಷ್ಮಿ ಹಾಗೂ ಕಾವ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಫೆ.೨ರಂದು ಶ್ರೀ ಭಗೀರಥ ಸಮುದಾಯ ಭವನ ಉದ್ಘಾಟನೆ

    ಭದ್ರಾವತಿ : ಉಪ್ಪಾರ ಸಂಘದ ವತಿಯಿಂದ ಹಳೇನಗರ ಬಸವೇಶ್ವರ ವೃತ್ತದ ಸಮೀಪದ ನರೇಂದ್ರ ಪಾರ್ಕ್ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಭಗೀರಥ ಸಮುದಾಯ ಭವನ ಉದ್ಘಾಟನೆ ಫೆ.೨ರಂದು ಬೆಳಿಗ್ಗೆ ೧೦ ಗಂಟೆಗೆ ನಡೆಯಲಿದೆ. 
    ಹೊಸದುರ್ಗ ಶ್ರೀ ಭಗೀರಥ ಪೀಠದ ಶ್ರೀ ಪುರುಷೋತ್ತಮಾನಂದಪುರಿ ಸ್ವಾಮೀಜಿ ದಿವ್ಯ ಸಾನಿಧ್ಯವಹಿಸಲಿದ್ದು, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. 
ಸಂಸದ ಬಿ.ವೈ ರಾಘವೇಂದ್ರ, ಕರ್ನಾಟಕ ರಾಜ್ಯ ಉಪ್ಪಾರ ಸಂಘದ ಅಧ್ಯಕ್ಷರಾದ ಶಾಸಕ ಪುಟ್ಟರಂಗಶೆಟ್ಟಿ, ವಿಧಾನ ಪರಿಷತ್ ಸದಸ್ಯೆ ಬಲ್ಕೀಷ್ ಬಾನು, ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಶಿವಮೊಗ್ಗ ಕೇಂದ್ರ ಕಾರಗೃಹ ಮುಖ್ಯ ಅಧೀಕ್ಷಕ ಡಾ. ಪಿ. ರಂಗನಾಥ್, ನಿವೃತ್ತ ಕೆ.ಎ.ಎಸ್ ಅಧಿಕಾರಿ ಬಿ. ಭೀಮಪ್ಪ, ವಾಣಿಜ್ಯ ತೆರಿಗೆ ಇಲಾಖೆ ನಿವೃತ್ತ ಹೆಚ್ಚುವರಿ ಆಯುಕ್ತ ಜಗನ್ನಾಥ್ ಸಗರ, ಸಮಾಜ ಸೇವಕ ಸಿ. ಮಹೇಶ್ ಕುಮಾರ್, ಗಿರೀಶ್ ಉಪ್ಪಾರ, ಲಕ್ಕಪ್ಪ, ವೆಂಕಟೇಶ್, ಡಾ. ನಾಗರಾಜ್, ಅನುಪಮ ಚನ್ನೇಶ್, ಪರಶುರಾಮ್, ಎಚ್.ಟಿ ಹಾಲಪ್ಪ, ಎನ್. ಮಂಜುನಾಥ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. 
    ನಿವೃತ್ತ ನ್ಯಾಯಾಧೀಶರಾದ ಬಿಲ್ಲಪ್ಪ ಶ್ರೀ ಭಗೀರಥ ಭಾವಚಿತ್ರ ಅನಾವರಣಗೊಳಿಸಿದ್ದು, ಉಪ್ಪಾರ ಸಮಾಜದ ಅಧ್ಯಕ್ಷ ರವಿಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜ ಬಂಧುಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. 

ರಾಜ್ಯಮಟ್ಟದ ಸಿರಿಧಾನ್ಯ ಸಿಹಿ ಖಾದ್ಯ ಸ್ಪರ್ಧೆಯಲ್ಲಿ ಪ್ರೇಮಲತಾಗೆ ೨ನೇ ಸ್ಥಾನ

ಸಾವಯವ ಮತ್ತು ಸಿರಿಧಾನ್ಯ, ರಾಜ್ಯ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯ ಸಿರಿಧಾನ್ಯ ಸಿಹಿ ಖಾದ್ಯ ವಿಭಾಗದಲ್ಲಿ ಭದ್ರಾವತಿ ನಗರದ ವಿದ್ಯಾಮಂದಿರ ನಿವಾಸಿ ಬಿ.ಎಂ ಪ್ರೇಮಲತಾ ೨ನೇ ಸ್ಥಾನ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು. 
    ಭದ್ರಾವತಿ: ಕೃಷಿ ಇಲಾಖೆ ವತಿಯಿಂದ ಸ್ಲರ್ಪ್ ಕಲಿನರಿ ಅಕಾಡೆಮಿ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಅಂತರರಾರಾಷ್ಟ್ರೀಯ ವಾಣಿಜ್ಯ ಮೇಳ-೨೦೨೫, ಸಾವಯವ ಮತ್ತು ಸಿರಿಧಾನ್ಯ, ರಾಜ್ಯ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯ ಸಿರಿಧಾನ್ಯ ಸಿಹಿ ಖಾದ್ಯ ವಿಭಾಗದಲ್ಲಿ ನಗರದ ವಿದ್ಯಾಮಂದಿರ ನಿವಾಸಿ ಬಿ.ಎಂ ಪ್ರೇಮಲತಾ ೨ನೇ ಸ್ಥಾನ ಪಡೆದುಕೊಂಡಿದ್ದಾರೆ. 
    ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು. ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭ ಕರಂದ್ಲಾಜೆ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ, ಸಚಿವರಾದ ಕೃಷ್ಣ ಬೈರೇಗೌಡ, ಬಿ.ಎಸ್ ಸುರೇಶ್, ಶಾಸಕ ಗೋವಿಂದಪ್ಪ  ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಪ್ರೇಮಲತಾ ಅವರನ್ನು ನಗರದ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಅಭಿನಂದಿಸಿದ್ದಾರೆ. 

Thursday, January 30, 2025

ನೌಕರರ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಲ್.ಕೆ ಲತಾ, ಉಪಾಧ್ಯಕ್ಷರಾಗಿ ಎಸ್. ಪ್ರಕಾಶ್

ಭದ್ರಾವತಿ ಹಳೇನಗರದ ಸರ್ಕಾರಿ ನೌಕರರ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಶಾಲಾ ಶಿಕ್ಷಣ ಇಲಾಖೆಯ ಎಲ್.ಕೆ ಲತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಆಡಳಿತ ಮಂಡಳಿಯನ್ನು ತಾಲೂಕು ಸರ್ಕಾರಿ ನೌಕರರ ಸಂಘದ  ಅಧ್ಯಕ್ಷರು, ಪದಾಧಿಕಾರಿಗಳು ಅಭಿನಂದಿಸಿದ್ದಾರೆ. 
    ಭದ್ರಾವತಿ : ಹಳೇನಗರದ ಸರ್ಕಾರಿ ನೌಕರರ ಪ್ರಾಥಮಿಕ ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷರಾಗಿ ಶಾಲಾ ಶಿಕ್ಷಣ ಇಲಾಖೆಯ ಎಲ್.ಕೆ ಲತಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 
    ೧೩ ನಿರ್ದೇಶಕರನ್ನು ಒಳಗೊಂಡಿರುವ ಸಹಕಾರ ಸಂಘದ ಆಡಳಿತ ಮಂಡಳಿಗೆ ಅಧ್ಯಕ್ಷರಾಗಿ ಎಲ್.ಕೆ ಲತಾ, ಉಪಾಧ್ಯಕ್ಷರಾಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್. ಪ್ರಕಾಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆಂದು ಚುನಾವಣಾ ಅಧಿಕಾರಿ ಇಮ್ತಿಯಾಜ್ ಅಹಮದ್ ತಿಳಿಸಿದ್ದಾರೆ. 
    ನಿರ್ದೇಶಕರಾದ ಡಿ. ಮುರಳೀಧರ, ಎಂ. ಪುಟ್ಟುಲಿಂಗಮೂರ್ತಿ, ಎಸ್.ಟಿ ಸುಧೀಂದ್ರ ರೆಡ್ಡಿ, ಶಹತಾಜ್ ಪರ್ವೀನ್, ಎಂ. ಹನುಮಂತಪ್ಪ, ಆರ್. ಜಯಸ್ವಾಮಿ, ಜಿ.ಎಸ್ ರುದ್ರೇಶ್, ಎಸ್. ಆನಂದ್, ಎಚ್. ರುದ್ರೇಶ್, ವಿ. ಗದ್ದಿಗೆ ಸ್ವಾಮಿ ಮತ್ತು ಎಲ್.ಓ ಲೋಕೇಶ್ ಚುನಾವಣೆಯಲ್ಲಿ ಪಾಲ್ಗೊಂಡಿದ್ದರು. 
    ನೂತನ ಆಡಳಿತ ಮಂಡಳಿಯನ್ನು ತಾಲೂಕು ಸರ್ಕಾರಿ ನೌಕರರ ಸಂಘದ  ಅಧ್ಯಕ್ಷ ಬಿ. ಸಿದ್ದಬಸಪ್ಪ, ಪದಾಧಿಕಾರಿಗಳಾದ ಎಸ್.ಕೆ ಮೋಹನ್, ಕೆ.ಆರ್ ಪ್ರಶಾಂತ್, ಎಂ. ವೆಂಕಟೇಶ್, ವೈ.ಎನ್ ಶ್ರೀಧರಗೌಡ, ಎ. ರಂಗನಾಥ್ ಮತ್ತು ತಾಲೂಕು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಟಿ. ಪೃಥ್ವಿರಾಜ್, ಕಾರ್ಯದರ್ಶಿ ಎಂ.ಎಸ್ ಮಲ್ಲಿಕಾರ್ಜುನ ಸೇರಿದಂತೆ ಇನ್ನಿತರರು ಅಭಿನಂದಿಸಿದ್ದಾರೆ. 

ಮಹಾತ್ಮಗಾಂಧಿ ಕೊಂದವರ ವೈಭವೀಕರಣ ವಿಷಾದನೀಯ : ಶಶಿಕುಮಾರ್ ಗೌಡ

ಭದ್ರಾವತಿ ನಗರದ ಜನ್ನಾಪುರ ಫಿಲ್ಟರ್‌ಶೆಡ್ ಅಂತರಘಟ್ಟಮ ದೇವಸ್ಥಾನದ ಬಳಿ ನಿರ್ಮಿಸಲಾಗಿರುವ ಸಮುದಾಯ ಭವನ ಮುಂಭಾಗ ಫಿಲ್ಟರ್‌ಶೆಡ್ ನಾಗರಿಕರ ಹಿತರಕ್ಷಣಾ ಸಮಿತಿ ವತಿಯಿಂದ ಗುರುವಾರ ಮಹಾತ್ಮಗಾಂಧಿಯವರ ಹುತಾತ್ಮ ದಿನ, ಸರ್ವೋದಯ ದಿನ ಆಚರಿಸಲಾಯಿತು. 
    ಭದ್ರಾವತಿ: ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ ಮನುವಾದಿಗಳ ಸಂಸ್ಕೃತಿ ಹೆಚ್ಚಾಗಿದ್ದು, ಮಹಾತ್ಮಗಾಂಧಿ ಕೊಂದವರನ್ನು ಮಹಾನ್ ವ್ಯಕ್ತಿಗಳಂತೆ ಬಿಂಬಿಸುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ ಎಂದು ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ವಿಷಾದ ವ್ಯಕ್ತಪಡಿಸಿದರು.  
    ಅವರು ಗುರುವಾರ ನಗರದ ಜನ್ನಾಪುರ ಫಿಲ್ಟರ್‌ಶೆಡ್ ಅಂತರಘಟ್ಟಮ ದೇವಸ್ಥಾನದ ಬಳಿ ನಿರ್ಮಿಸಲಾಗಿರುವ ಸಮುದಾಯ ಭವನ ಮುಂಭಾಗ ಫಿಲ್ಟರ್‌ಶೆಡ್ ನಾಗರಿಕರ ಹಿತರಕ್ಷಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮಹಾತ್ಮಗಾಂಧಿಯವರ ಹುತಾತ್ಮ ದಿನ, ಸರ್ವೋದಯ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. 
    ರಾಷ್ಟ್ರಪಿತ ಮಹಾತ್ಮಗಾಂಧಿಯವರು ಜಾತಿ, ಧರ್ಮ, ಮತಪಂಥಗಳನ್ನು ಮೀರಿ ಎಲ್ಲರನ್ನು ಒಗ್ಗೂಟಿಸಿಕೊಂಡು ಅಹಿಂಸಾ ಮಾರ್ಗದಲ್ಲಿ ತ್ಯಾಗ, ಬಲಿದಾನದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟಿದ್ದು, ಸರ್ವಕಾಲಕ್ಕೂ ಮಹಾತ್ಮಗಾಂಧಿಯವರು ಆದರ್ಶಪ್ರಾಯರಾಗಿದ್ದಾರೆ. ಆದರೆ ಇಂದು ದೇಶದಲ್ಲಿ ಅವರ ತತ್ವ, ಸಿದ್ಧಾಂತಗಳನ್ನು ವಿರೋಧ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿರುವುದು ಆತಂಕದ ಸಂಗತಿಯಾಗಿದ್ದು, ಇದನ್ನು ಖಂಡಿಸುವ ಜೊತೆಗೆ ಮುಂದಿನ ದಿನಗಳಲ್ಲಿ ಮಹಾತ್ಮಾ ಗಾಂಧಿಯವರ ವಿಷಯದಲ್ಲಿ ಬಾಯಿಗೆ ಬಂದಂತೆ ಮಾತನಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು. 
    ಮಾದೇವಿ, ಪಾರ್ವತಿಬಾಯಿ, ದಿವ್ಯಶ್ರೀ, ಇಂದ್ರಮ್ಮ, ಶಾಂತಮ್ಮ ಸೇರಿದಂತೆ ಫಿಲ್ಟರ್‌ಶೆಡ್ ನಾಗರಿಕರ ಹಿತರಕ್ಷಣಾ ಸಮಿತಿ ಪದಾಧಿಕಾರಿಗಳು ಪ್ರಮುಖರು, ಸ್ಥಳೀಯ ನಿವಾಸಿಗಳು ಪಾಲ್ಗೊಂಡಿದ್ದರು. 

Wednesday, January 29, 2025

ವಂಶವೃಕ್ಷ ನೀಡದೆ ತೊಂದರೆ ನೀಡುತ್ತಿರುವ ಕ್ರಮ ಖಂಡಿಸಿ ಪ್ರತಿಭಟನಾ ಧರಣಿ ಸತ್ಯಾಗ್ರಹ

ಸುಳ್ಳು ವರದಿ ನೀಡಿರುವ ರಾಜಸ್ವ ನಿರೀಕ್ಷಕ ಸೇವೆಯಿಂದ ವಜಾಗೊಳಿಸಲು ಆಗ್ರಹ 

ಭದ್ರಾವತಿ ತಾಲೂಕಿನ ಡಿ.ಬಿ ಹಳ್ಳಿ ಗ್ರಾಮದ ಸಂಗಪ್ಪ ಎಂಬುವವರಿಗೆ ವಂಶವೃಕ್ಷ ನೀಡದೆ ತೊಂದರೆ ನೀಡುತ್ತಿರುವ ಕ್ರಮ ಖಂಡಿಸಿ ಹಾಗು ಸುಳ್ಳು ದಾಖಲೆಗಳ ಆಧಾರದ ಮೇರೆಗೆ ವಂಶವೃಕ್ಷ ನೀಡಿರುವ ರಾಜಸ್ವ ನಿರೀಕ್ಷಕನನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಬುಧವಾರ ತಾಲೂಕು ಕಛೇರಿ ಮುಂಭಾಗ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಯಿತು. 
    ಭದ್ರಾವತಿ : ತಾಲೂಕಿನ ಡಿ.ಬಿ ಹಳ್ಳಿ ಗ್ರಾಮದ ಸಂಗಪ್ಪ ಎಂಬುವವರಿಗೆ ವಂಶವೃಕ್ಷ ನೀಡದೆ ತೊಂದರೆ ನೀಡುತ್ತಿರುವ ಕ್ರಮ ಖಂಡಿಸಿ ಹಾಗು ಸುಳ್ಳು ದಾಖಲೆಗಳ ಆಧಾರದ ಮೇರೆಗೆ ವಂಶವೃಕ್ಷ ನೀಡಿರುವ ರಾಜಸ್ವ ನಿರೀಕ್ಷಕನನ್ನು ಸೇವೆಯಿಂದ ವಜಾಗೊಳಿಸುವಂತೆ ಆಗ್ರಹಿಸಿ ಬುಧವಾರ ತಾಲೂಕು ಕಛೇರಿ ಮುಂಭಾಗ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಯಿತು. 
    ಗ್ರಾಮದ ಸರ್ವೆ ನಂ. ೭೭/೪ರಲ್ಲಿ ೩ ಎಕರೆ ೬ ಗುಂಟೆ ಜಮೀನಿನಲ್ಲಿ ೧ ಎಕರೆ ಜಮೀನು ಸಂಗಪ್ಪ ಬಿನ್ ಸಣ್ಣಪ್ಪರವರ ಹೆಸರಿನಲ್ಲಿ ಮುತ್ತಜ್ಜಿ ನಾಗಮ್ಮರವರು ಅವರ ಮಗಳಾದ ನೀಲಮ್ಮರವರಿಗೆ ಕ್ರಯಕ್ಕೆ ನೀಡಿರುತ್ತಾರೆ. ಉಳಿದ ೧ ಎಕರೆ ೧೮ ಗುಂಟೆ ಜಮೀನು ಈಗಲೂ ಸಹ ನಾಗಮ್ಮರವರ ಹೆಸರಿನಲ್ಲಿಯೇ ಇರುತ್ತದೆ. ಇದರ ವಾರಸುದಾರರು ಸಂಗಪ್ಪ ಬಿನ್ ಸಣ್ಣಪ್ಪರವರೇ ಆಗಿದ್ದು, ವಂಶವೃಕ್ಷಕ್ಕಾಗಿ ಎ.ಸಿ/ಡಿ.ಸಿ ನ್ಯಾಯಾಲಯಗಳಲ್ಲಿ ಪ್ರಕರಣ ನಡೆದು ಸ್ಥಳ ಪರಿಶೀಲನೆ ಮಾಡಿದಾಗ ಅಂದಿನ ರಾಜಸ್ವ ನಿರೀಕ್ಷಕ ಮಾನೋಜಿರಾವ್‌ರವರು ಗ್ರಾಮಸ್ಥರೆಲ್ಲರೂ ನೀಲಕ್ಕನ ತಾಯಿ ನಾಗಮ್ಮ ಇವರ ಕುಟುಂಬದ ವಾರಸುದಾರ ಸಂಗಪ್ಪ ಬಿನ್ ಸಣ್ಣಪ್ಪ ಎಂದು ತಿಳಿಸಿದ್ದು, ಅಲ್ಲದೆ ಅನೇಕ ದಾಖಲೆಗಳು ಇದ್ದರೂ ಸಹ  ಸುಳ್ಳು ವರದಿಗಳನ್ನು ಮಾಡಿರುತ್ತಾರೆಂದು ಪ್ರತಿಭಟನಾನಿರತರು ದೂರಿದರು. 
    ಈ ಸಂಬಂಧ ನಾಡಕಛೇರಿ, ತಾಲೂಕು ಕಛೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಲಾಗಿತ್ತು.  ಧರಣಿ ಸತ್ಯಾಗ್ರಹ ಸ್ಥಳಕ್ಕೆ ಆಗಮಿಸಿದ್ದ ಉಪ ವಿಭಾಗಾಧಿಕಾರಿ ಜಿ.ಎಸ್ ಸತ್ಯನಾರಾಯಣರವರು ಶಾಲಾ ದಾಖಲೆಗಳನ್ನು ರಾಜರುಪಡಿಸಿದ್ದಲ್ಲಿ ಸಂಗಪ್ಪ ಬಿನ್ ಸಣ್ಣಪ್ಪರವರ ಕುಟುಂಬದ ವಂಶವೃಕ್ಷ ಮಾಡಿಕೊಡಿ ಎಂದು ತಹಸೀಲ್ದಾರ್/ರಾಜಸ್ವ ನಿರೀಕ್ಷಕ/ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಚಿಸಿದ್ದಾರೆ. ಆದರೆ ಸಂಬಂಧಪಟ್ಟ ಅಧಿಕಾರಿಗಳು ಹಿಂದಿನ ರಾಜಸ್ವ ನಿರೀಕ್ಷಕ ಮಾನೋಜಿ ರಾವ್ ಅಕ್ರಮ ಕಾರ್ಯ ಮುಚ್ಚಿ ಹಾಕುವ ಉದ್ದೇಶದಿಂದ ಸುಳ್ಳು ವರದಿಗಳನ್ನು ಸೃಷ್ಟಿಸಿರುತ್ತಾರೆಂದು ಆರೋಪಿಸಿದರು. 
    ಗ್ರಾಮಸ್ಥರು ಹಿಂದಿನ ತಹಸೀಲ್ದಾರ್ ನಾಗರಾಜು ಮತ್ತು ರಾಜಸ್ವ ನಿರೀಕ್ಷಕ ಮಾನೋಜಿ ರಾವ್ ಮತ್ತು ಉಪ ತಹಸೀಲ್ದಾರ್ ಮಂಜಾನಾಯ್ಕರವರ ಎದುರು ತಿಮ್ಮಕ್ಕ ಎಂಬ ಮಹಿಳೆ ಗ್ರಾಮದಲ್ಲಿ ವಾಸವಾಗಿರುವುದಿಲ್ಲ ಎಂದು ಸಾಕ್ಷಿ ನೀಡಿದ್ದಾರೆ. ಈ ಕುರಿತು ವಿಡಿಯೋ ಸಹ ಸಾಕ್ಷಿ ಇದೆ. ಆದರೂ ರಾಜಸ್ವ ನಿರೀಕ್ಷಕ ಮಾನೋಜಿ ರಾವ್ ಬಡವರಿಗೆ ಮೋಸ, ವಂಚನೆ ಮಾಡಿದ್ದು, ಈತನನ್ನು ರಕ್ಷಿಸಲು ಉಳಿದ ಅಧಿಕಾರಿಗಳು ತಪ್ಪು ತಪ್ಪು ಮಾಹಿತಿಯನ್ನು ಸೇರಿಸಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯ ನೀಡಲು ತಡಮಾಡುತ್ತಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು. 
    ತಕ್ಷಣ ಮೇಲಾಧಿಕಾರಿಗಳು ತಕ್ಷಣ ರಾಜಸ್ವ ನಿರೀಕ್ಷಕ ಮಾನೋಜಿ ರಾವ್ ಸೇವೆಯಿಂದ ವಜಾಗೊಳಿಸಿ ಈತನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಜೈಲಿಗೆ ಕಳುಹಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ತಕ್ಷಣ ನ್ಯಾಯ ದೊರಕಿಸಿ ಕೊಡಬೇಕೆಂದು ಕೋರಿದರು. 
    ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಪ್ರತಿಭಟನಾ ಧರಣಿ ಸತ್ಯಾಗ್ರಹ ನೇತೃತ್ವವಹಿಸಿದ್ದರು. 

ಸಂವಿಧಾನ ಸಮಾನತೆಯ ಕೊಡುಗೆ, ಮನೆ ಮನೆಗಳಲ್ಲೂ ಜಾಗೃತಿ ಮೂಡಲಿ : ಸತೀಶ್ ಜಾರಕಿಹೊಳಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ವತಿಯಿಂದ ಬುಧವಾರ ಭದ್ರಾವತಿ ಹಳೇನಗರದ ಶ್ರೀ ವೀರಶೈವ ಸಭಾಭವನದಲ್ಲಿ ಕ.ದ.ಸಂ.ಸ-೫೦ ನೆನಪಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಜಾಗೃತಿ ಸಮಾವೇಶ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಮೈಸೂರು ಉರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ  ಸ್ವಾಮೀಜಿ ಸೇರಿದಂತೆ ಇನ್ನಿತರರು ಉದ್ಘಾಟಿಸಿದರು. 
    ಭದ್ರಾವತಿ: ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಈ ದೇಶಕ್ಕೆ ಕೊಡುಗೆಯಾಗಿ ನೀಡಿರುವ ಸಂವಿಧಾನದಿಂದಾಗಿ ನಾವೆಲ್ಲರೂ ಸಮಾನತೆ ಕಾಣಲು ಸಾಧ್ಯವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. 
    ಅವರು ಬುಧವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಶಾಖೆ ವತಿಯಿಂದ ಹಳೇನಗರದ ಶ್ರೀ ವೀರಶೈವ ಸಭಾಭವನದಲ್ಲಿ ಕ.ದ.ಸಂ.ಸ-೫೦ ನೆನಪಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಜಾಗೃತಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು. 
    ಈ ದೇಶದಲ್ಲಿ ಪ್ರತಿಯೊಂದನ್ನು ಹೋರಾಟ, ಸಂಘರ್ಷದ ಮೂಲಕ ಪಡೆದುಕೊಳ್ಳಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಈ ದೇಶದ ಸಂವಿಧಾನದಿಂದಾಗಿ ನಾವೆಲ್ಲರೂ ಒಗ್ಗಟ್ಟಿನಿಂದ, ಸಮಾನತೆ ಹಾಗು ನೆಮ್ಮದಿಯಿಂದ ಬದುಕುವಂತಾಗಿದೆ. ಒಂದು ವೇಳೆ ಸಂವಿಧಾನ ರಚನೆಯಾಗದಿದ್ದಲ್ಲಿ ಈ ದೇಶದ ಜನರ ಸ್ಥಿತಿ ಕಲ್ಪಿಸಿಕೊಳ್ಳುವುದು ಅಸಾಧ್ಯವಾಗುತ್ತಿತ್ತು ಎಂದರು. 
    ಪ್ರಸ್ತುತ ನಾವುಗಳು ಸಂವಿಧಾನ ತಿಳಿದುಕೊಳ್ಳಬೇಕಾಗಿದೆ. ಇಂತಹ ಜಾಗೃತಿ ಕಾರ್ಯಕ್ರಮಗಳು ಹೆಚ್ಚಾಗಿ ನಡೆಯಬೇಕು. ಅದರಲ್ಲೂ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಜಾಗೃತಿ ಅಗತ್ಯವಾಗಿದೆ. ಮನೆ ಮನೆಗಳಲ್ಲಿ ಸಂವಿಧಾನ ಕುರಿತು ಜಾಗೃತಿ ಮೂಡಿಸುವ ಕಾರ್ಯ ನಡೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸಹ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರುತ್ತಿದೆ ಎಂದರು. 
      ಸಮಾವೇಶದ ದಿವ್ಯ ಸಾನಿಧ್ಯವಹಿಸಿದ್ದ ಮೈಸೂರು ಉರಿಲಿಂಗಿ ಪೆದ್ದಿ ಮಠದ ಶ್ರೀ ಜ್ಞಾನ ಪ್ರಕಾಶ  ಸ್ವಾಮೀಜಿ ಮಾತನಾಡಿ, ನಾವೆಲ್ಲರೂ ಸಂವಿಧಾನ ಯಾಕೆ ಓದಬೇಕು ಎಂಬುದನ್ನು ಅರ್ಥಮಾಡಿಕೊಂಡಾಗ ಮಾತ್ರ ಸಂವಿಧಾನ ವಿರೋಧಿಸುವವರಿಗೆ ಉತ್ತರ ನೀಡಲು ಸಾಧ್ಯ. ಪ್ರಸ್ತುತ ಅಂಬೇಡ್ಕರ್‌ರವರ ಸಂವಿಧಾನ ಬದಲಿಸಿ ಮತ್ತೊಂದು ಸಂವಿಧಾನ ರಚಿಸುತ್ತೇವೆ ಎಂಬುವವರ ಮನಸ್ಥಿತಿಗಳನ್ನು ನಾವುಗಳು ಅರ್ಥಕೊಳ್ಳಬೇಕಾಗಿದೆ. ಮೇಲ್ವರ್ಗದವರು ಪುನಃ ಈ ದೇಶದಲ್ಲಿ ಅಸ್ಪೃಶ್ಯತೆ, ಅಸಮಾನತೆ ಹಾಗೂ ಶೋಷಣೆಯ ಬದುಕು ಎದುರು ನೋಡುತ್ತಿದ್ದಾರೆ. ಇದಕ್ಕೆ ನಾವುಗಳು ಅವಕಾಶ ನೀಡಬಾರದು. ಇನ್ನೂ ಹೆಚ್ಚು ಜಾಗೃತರಾಗಬೇಕಾಗಿದ್ದು, ಈ ಹಿನ್ನಲೆಯಲ್ಲಿ ಸಂವಿಧಾನ ಜಾಗೃತಿ ಸಮಾವೇಶಗಳು ಸಹಕಾರಿಯಾಗಿವೆ ಎಂದರು. 
    ವಿಧಾನ ಪರಿಷತ್ ಸದಸ್ಯ ಎಚ್.ಪಿ ಸುಧಾಮದಾಸ್, ಮಾಜಿ ಸಂಸದ ಚಂದ್ರಪ್ಪ, ಪ್ರೊ. ಬಿ. ಕೃಷ್ಣಪ್ಪ ಟ್ರಸ್ಟ್, ಮ್ಯಾನೇಜಿಂಗ್ ಟ್ರಸ್ಟಿ ಇಂದಿರಾ ಕೃಷ್ಣಪ್ಪ, ಪ.ಜಾ ಮತ್ತು ಪಂ. ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ. ಪಲ್ಲವಿ, ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಹಿರಿಯ ಸದಸ್ಯ ಬಿ.ಕೆ ಮೋಹನ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ, ಮುಖಂಡರಾದ ಬಿ.ಕೆ ಜಗನ್ನಾಥ್, ಎಸ್. ಕುಮಾರ್, ಬಿ.ಎಸ್ ಗಣೇಶ್, ಸಿ. ಜಯಪ್ಪ, ಕೆ.ಎ ರಾಜಕುಮಾರ್, ಈಶ್ವರಪ್ಪ, ಜಿಂಕ್‌ಲೈನ್ ಮಣಿ, ಕಾಣಿಕ್‌ರಾಜ್, ಪರಮೇಶಿ, ಎನ್ ಗೋವಿಂದ, ಎಸ್. ಉಮಾ, ಶಾಂತ, ರೇಖಾ, ಶ್ರೀಧರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಸಮಿತಿ ತಾಲೂಕು ಸಂಚಾಲಕ ಆರ್. ಸಂದೀಪ್ ಅಧ್ಯಕ್ಷತೆ ವಹಿಸಿದ್ದು, ಪುಷ್ಪರಾಜ್ ತಂಡದವರಿಂದ ಕ್ರಾಂತಿ ಗೀತೆ ನಡೆಯಿತು. ತಾಲೂಕು ಸಂಘಟನಾ ಸಂಚಾಲಕ ಕೆ. ಸುರೇಶ್ ಸ್ವಾಗತಿಸಿದರು. ಜಿಲ್ಲಾ ಸಂಚಾಲಕ ಚಿನ್ನಯ್ಯ ಪ್ರಾಸ್ತಾವಿಕ ನುಡಿಗಳನ್ನಾಡಿ ಕೆ. ರಂಗನಾಥ್ ನಿರೂಪಿಸಿದರು. 
    ಸಮಾವೇಶಕ್ಕೂ ಮೊದಲು ನಗರದ ಬಿ.ಎಚ್ ರಸ್ತೆ, ಅಂಬೇಡ್ಕರ್ ವೃತ್ತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ನೂತನ ೧೨ ಅಡಿ ಎತ್ತರದ ಕಂಚಿನ ಪ್ರತಿಮೆಗೆ ಸಚಿವ ಸತೀಶ್ ಜಾರಕಿಹೊಳಿ ಹಾಗು ಇನ್ನಿತರರು ಮಾಲಾರ್ಪಣೆ ಮಾಡುವ ಮೂಲಕ ಸಮಿತಿವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಜಾಗೃತಿ ಮೆರವಣಿಗೆಗೆ ಚಾಲನೆ ನೀಡಲಾಯಿತು. 

Tuesday, January 28, 2025

ಡಿಎಸ್‌ಎಸ್ ೫೦ನೇ ವರ್ಷದ ನೆನಪು : ಜ.೨೯ರಂದು ಸಂವಿಧಾನ ಜಾಗೃತಿ ಸಮಾವೇಶ

ಇಂದು ನಗರಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ


    ಭದ್ರಾವತಿ:  ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ತಾಲೂಕು ಶಾಖೆ ವತಿಯಿಂದ ಜ.೨೮ರ ಬುಧವಾರ ವೀರಶೈವ ಸಭಾ ಭವನದಲ್ಲಿ ಹಮ್ಮಿಕೊಳ್ಳಲಾಗಿರುವ ಸಂವಿಧಾನ ಜಾಗೃತಿ ಸಮಾವೇಶ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು ಎಂದು ಸಮಿತಿ ಜಿಲ್ಲಾ ಸಂಚಾಲಕ ಚಿನ್ನಯ್ಯ ಹೇಳಿದರು. 
    ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಗೆ ೫೦ ವರ್ಷ ತುಂಬಿದೆ.  ಪ್ರೊ.ಬಿ.ಕೃಷ್ಣಪ್ಪ ಅವರು ೧೯೭೪-೭೫ರಲ್ಲಿ ನಗರದಲ್ಲಿ ಈ ಸಂಘಟನೆಯನ್ನು ಸ್ಥಾಪನೆ ಮಾಡಿದರು. ಆ ಮೂಲಕ ಶೋಷಿತರು, ದಲಿತರ ಪರವಾಗಿ ಸಂವಿಧಾನದ ಅಡಿಯಲ್ಲಿಯೇ ಸಂಘಟನೆ ಕೆಲಸ ಮಾಡುತ್ತಾ ಬಂದಿದೆ. ಬೆತ್ತಲೆ ಸೇವೆ, ಬಗರ್‌ಹುಕುಂ ಸಾಗುವಳಿ, ಅಟ್ರಾಸಿಟಿ ಕಾಯ್ದೆ, ಭೂಸುಧಾರಣೆ ಕಾಯ್ದೆ ಮುಂತಾದ ಹಲವು ವಿಷಯಗಳನ್ನಿಟ್ಟುಕೊಂಡು ತನ್ನದೇ ಆದ ಹೋರಾಟಗಳನ್ನು ಮಾಡುತ್ತಾ ಸಂಘಟನೆ ಅತ್ಯಂತ ಪ್ರಬುದ್ಧವಾಗಿ ಬೆಳೆದುಬಂದಿದೆ ಎಂದರು. 
    ಇಲ್ಲಿಂದಲೇ ದಲಿತ ಚಳವಳಿ ಆರಂಭವಾಗಿದ್ದು, ಈಗ ೫೦ ವರ್ಷಗಳ ನಂತರ  ಜಾಗೃತಿ ಸಮಾವೇಶ ನಡೆಸುವ ಮೂಲಕ ಇಡೀ ರಾಜ್ಯದ ಗಮನವನ್ನು ಸೆಳೆಯುತ್ತಿದ್ದೇವೆ. ಸಮಾರಂಭವು ಬೆಳಗ್ಗೆ ೧೧.೩೦ಕ್ಕೆ ಆರಂಭವಾಗುತ್ತದೆ. ಅದಕ್ಕೂ ಮೊದಲು ನಗರದ ಅಂಬೇಡ್ಕರ್ ವೃತ್ತದಿಂದ ವೀರಶೈವ ಸಭಾಭವನ ದವರೆಗೆ ಮೆರವಣಿಗೆ ನಡೆಯಲಿದೆ. ಈ ಸಮಾವೇಶದ ಸಾನ್ನಿಧ್ಯವನ್ನು ಮೈಸೂರಿನ ಉರಿಲಿಂಗಿ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ವಹಿಸುವರು. 
    ಸಮಿತಿ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್, ಪ್ರೊ.ಬಿ.ಕೃಷ್ಣಪ್ಪ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಇಂದಿರಾ ಕೃಷ್ಣಪ್ಪ, ಅಂಬೇಡ್ಕರ್ ಮತ್ತು ಕೃಷ್ಣಪ್ಪರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವರು ಎಂದರು. 
    ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಶರತ್ ಅನಂತಮೂರ್ತಿ, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಉಪ ಅರಣ್ಯ ಸಂರಕ್ಷಾಧಿಕಾರಿ ಆಶಿಶ್ ರೆಡ್ಡಿ ಸೇರಿದಂತೆ ಸಂಘಟನೆಯ ರಾಜ್ಯ, ಜಿಲ್ಲೆ, ತಾಲೂಕು ಮತ್ತು ಭದ್ರಾವತಿ ನಗರದ ಪದಾಧಿಕಾರಿಗಳು ಭಾಗವಹಿಸುವರು ಎಂದರು. 
    ಪತ್ರಿಕಾಗೋಷ್ಠಿಯಲ್ಲಿ ಡಿಎಸ್‌ಎಸ್ ಪ್ರಮುಖರಾದ ಕಾಣಿಕ್‌ರಾಜ್, ಜಿಂಕ್‌ಲೈನ್ ಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಶಿವಕುಮಾರ್‌ಗೆ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ರಾಜ್ಯ ಪ್ರಶಸ್ತಿ

ಅಖಿಲ ಕರ್ನಾಟಕ ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಕ್ತವೃಂದ ಕರ್ನಾಟಕ ಸಂಘಟನೆ ವತಿಯಿಂದ ಭದ್ರಾವತಿ ನಗರದ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಶಿವಕುಮಾರ್‌ರವರಿಗೆ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 
    ಭದ್ರಾವತಿ: ಅಖಿಲ ಕರ್ನಾಟಕ ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಕ್ತವೃಂದ ಕರ್ನಾಟಕ ಸಂಘಟನೆ ವತಿಯಿಂದ ನಗರದ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷರಾದ ಶಿವಕುಮಾರ್‌ರವರಿಗೆ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 
    ಶಿವಕುಮಾರ್‌ರವರ ಸಮಾಜ ಸೇವೆಯನ್ನು ಗುರುತಿಸಿ ಸಂಘಟನೆ ವತಿಯಿಂದ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ೬ನೇ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಮೈಸೂರಿನ ಜಗನ್ ಮೋಹನ್ ಪ್ಯಾಲೇಸ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ದಾಸೋಹ ದಿನ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಶಿವಕುಮಾರ್‌ರವರು ಸಿದ್ಧಾರೂಢನಗರದ ಶ್ರೀ ಬಸವೇಶ್ವರ ಸಭಾಭವನದ ಟ್ರಸ್ಟಿಯಾಗಿದ್ದು, ಅಲ್ಲದೆ ವಿವಿಧ ಸಂಘ-ಸಂಸ್ಥೆಗಳಲ್ಲೂ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ.  ಇವರ ಸಮಾಜ ಸೇವೆಯನ್ನು ಗುರುತಿಸಿ ತಾಲೂಕು ಆಡಳಿತ ವತಿಯಿಂದ ಕಳೆದ ವರ್ಷ ಗಣರಾಜ್ಯೋತ್ಸವದಂದು ಸನ್ಮಾನಿಸಿ ಗೌರವಿಸಲಾಗಿತ್ತು. 
    ದಾಸೋಹ ದಿನ ಕಾರ್ಯಕ್ರಮದಲ್ಲಿ ಬೇಬಿ ಬೆಟ್ಟ ಶ್ರೀ ರಾಮಯೋಗೀಶ್ವರ ಮಠದ ಶಿವಬಸವ ಸ್ವಾಮೀಜಿ, ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶಿವಸಿದ್ದೇಶ್ವರ ಸ್ವಾಮೀಜಿ, ಹುಲ್ಲಿನಬೀದಿ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ಮತ್ತು ಹಲಸಹಳ್ಳಿ ಕಲ್ಯಾಣ ಬಸವೇಶ್ವರ ಮಠದ ಶ್ರೀ ಓಂಕಾರೇಶ್ವರ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿದ್ದರು. ಹೂಟಗಳ್ಳಿ ಶ್ರೀ ಅನಂತೇಶ್ವರ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥಾಪಕ ನಾಗರಾಜ ವಿ. ಬೈರಿ ಅಧ್ಯಕ್ಷತೆ ವಹಿಸಿದ್ದರು.
    ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ಎಸ್. ಬಸವರಾಜು, ಎಂ. ಶಿವಕುಮಾರ್, ಎಂ.ಎಸ್ ಮಂಜುನಾಥ್, ಸಿ. ನಂಬಿರಾಜ್, ಕರಾಟೆ ಇಂಟರ್ ಏಷಿಯನ್ ನ್ಯಾಷನಲ್ ಕಲ್ಚರ್ ಯೂನಿವರ್ಸಿಟಿಯ ಎ.ಪಿ ಶ್ರೀನಾಥ್, ಜಿ.ಪಂ. ಮಾಜಿ ಸದಸ್ಯ ಎಸ್. ಮಣಿಶೇಖರ್, ಅಪೇಕ್ಷ ನೃತ್ಯ ಕಲಾವೃಂದ ಅಧ್ಯಕ್ಷೆ ಭಾರತಿ ಗೋವಿಂದಸ್ವಾಮಿ, ಮೈಸೂರಿನ ಅಲಯನ್ಸ್ ಕ್ಲಬ್ ಪಿಆರ್‌ಓ ಎನ್. ಬೆಟ್ಟೇಗೌಡ, ಜ್ಞಾನ ದಾಸೋಹ ಟ್ರಸ್ಟ್ ಅಧ್ಯಕ್ಷ ಸಿ.ಎನ್ ಸದಾಶಿವ, ಕೆಂಗೇರಿಯ ಸಮಾಜ ಸೇವಕ ಪಾಂಡುರಂಗ, ಅಖಿಲ ಕರ್ನಾಟಕ ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಭಕ್ತವೃಂದ ಕರ್ನಾಟಕ ಸಂಘಟನೆ ರಾಜ್ಯಾಧ್ಯಕ್ಷ ಅಪೇಕ್ಷ ಮಂಜುನಾಥ್, ಗೌರವಾಧ್ಯಕ್ಷ ನ. ಗಂಗಾಧರಪ್ಪ, ಉಪಾಧ್ಯಕ್ಷ ಶಿವಕುಮಾರ ಪಾಟೀಲ್, ಉಪಾಧ್ಯಕ್ಷ ಶಿವಕುಮಾರ್ ಪಾಟೀಲ್ ತೇಗಂಪೂರ, ಪ್ರಧಾನ ಸಂಘಟಕ ಮೆಣಸಿಗೆರೆ ಶಿವಲಿಂಗಪ್ಪ, ಸಂಚಾಲಕ ಮಾರುತಿ ಎಸ್. ಬೀದರ್, ಮಹಿಳಾ ಅಧ್ಯಕ್ಷೆ ಸ್ವಾತಿ ಬಸಪ್ಪ, ಪ್ರಧಾನ ಕಾರ್ಯದರ್ಶಿ ಎಸ್.ಕೆ ರಾಮಸ್ವಾಮಿ, ಆರ್.ಎಸ್ ರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಶಿವಕುಮಾರ್‌ರವರನ್ನು ನಗರದ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಅಭಿನಂದಿಸಿದ್ದಾರೆ. 

ಲೋಕಾಯುಕ್ತಕ್ಕೆ ಸಲ್ಲಿಕೆಯಾದ ಎಲ್ಲಾ ಅಹವಾಲುಗಳನ್ನು ಸ್ಥಳದಲ್ಲಿಯೇ ಪರಿಸಲು ಸಾಧ್ಯವಿಲ್ಲ : ಎಚ್.ಎಸ್ ಸುರೇಶ್

ಅಹವಾಲುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಕಾಲಾವಕಾಶ ಅಗತ್ಯವಿದೆ

ಭದ್ರಾವತಿ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಯಿತು. 
    ಭದ್ರಾವತಿ : ಲೋಕಾಯುಕ್ತ ವತಿಯಿಂದ ಆಯೋಜಿಸಲಾಗುವ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆಯಲ್ಲಿ ಈ ಹಿಂದೆ ಸಲ್ಲಿಕೆಯಾಗಿರುವ ಅರ್ಜಿಗಳ ಕುರಿತು ಕೈಗೊಂಡ ಕ್ರಮಗಳನ್ನು ತಿಳಿಸಲಾಗುವುದು. ಹೊಸದಾಗಿ ಸಲ್ಲಿಕೆಯಾದ ಎಲ್ಲಾ ಅಹವಾಲುಗಳನ್ನು ತಕ್ಷಣ ಪರಿಶೀಲಿಸಲು ಸಾಧ್ಯವಿಲ್ಲ ಎಂದು ಲೋಕಾಯುಕ್ತ ಶಿವಮೊಗ್ಗ-೧ರ ಪೊಲೀಸ್ ನಿರೀಕ್ಷಕ ಎಚ್.ಎಸ್ ಸುರೇಶ್ ಹೇಳಿದರು. 
    ಅವರು ಮಂಗಳವಾರ ನಗರಸಭೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
    ಕೆಲವೊಂದು ಅಹವಾಲುಗಳನ್ನು ಸ್ಥಳದಲ್ಲಿಯೇ ಪರಿಹರಿಸಬಹುದು. ಆದರೆ ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿದ ತಕ್ಷಣ ಬಗೆಹರಿಸುವುದು ಅಸಾಧ್ಯವಾಗಿದ್ದು, ಅಹವಾಲುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲು ಕಾಲಾವಕಾಶ ಅಗತ್ಯವಿದೆ. ಒಟ್ಟಾರೆ ಎಲ್ಲಾ ಅಹವಾಲುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದರು. 
    ಈ ಹಿಂದಿನ ಸಭೆಯಲ್ಲಿ ಲೋಕಾಯುಕ್ತಕ್ಕೆ ಸಲ್ಲಿಕೆಯಾದ ಒಟ್ಟು ೧೧ ಅಹವಾಲುಗಳು ಹಾಗು ಕೈಗೊಂಡ ಕ್ರಮಗಳ ಕುರಿತು ಸಭೆಯಲ್ಲಿ ಮಾಹಿತಿ ನೀಡಿದರು. 
    ಹೊಸದಾಗಿ ಸಲ್ಲಿಕೆಯಾದ ಅಹವಾಲುಗಳಲ್ಲಿ ಪ್ರಮುಖವಾಗಿ ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡರವರು ಜನ್ನಾಪುರ ಫಿಲ್ಟರ್ ಶೆಡ್ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಸಮುದಾಯ ಭವನ ನಿರ್ಮಿಸಿ, ದುರ್ಬಳಕೆ ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಳೆದ ಸುಮಾರು ೧ ವರ್ಷದಿಂದ ನಿರಂತರವಾಗಿ ಹೋರಾಟ ನಡೆಸಿಕೊಂಡು ಬರುವ ಜೊತೆಗೆ ಅಗತ್ಯ ದಾಖಲೆಗಳೊಂದಿಗೆ  ಹಲವಾರು ಬಾರಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. 
    ನಗರಸಭೆ ಅಧಿಕಾರಿಗಳು ಈ ಸಂಬಂಧ ಈಗಾಗಲೇ ನೋಟಿಸ್ ನೀಡಲಾಗಿದೆ ಎಂದು ಉತ್ತರಿಸಿದರು. ಈ ನಡುವೆ ಮತ್ತೊಮ್ಮೆ ಮೇಲ್ಮನವಿ ಸಲ್ಲಿಸುವಂತೆ ಶಶಿಕುಮಾರ್ ಗೌಡರವರಿಗೆ ಸೂಚಿಸಲಾಗಿದೆ. ಒಂದು ವೇಳೆ ಕಾಲ ಮಿತಿಯೊಳಗೆ ಯಾವುದೇ ಪ್ರಕ್ರಿಯೆ ನಡೆಯದಿದ್ದಲ್ಲಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ನಿರೀಕ್ಷಕ ಸುರೇಶ್ ಭರವಸೆ ನೀಡಿದರು. 
    ಕೆಆರ್‌ಎಸ್ ಪಕ್ಷದ ತಾಲೂಕು ಅಧ್ಯಕ್ಷ, ಸಮಾಜಿಕ ಹೋರಾಟಗಾರ ತೀರ್ಥೇಶರವರು ಮಾತನಾಡಿ, ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ಹೆಚ್ಚಾಗಿದೆ. ಈ ಕುರಿತು ಹಲವಾರು ಬಾರಿ ಮಾಹಿತಿ ನೀಡಿದರೂ ಸಹ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು. ಈ ಹಿನ್ನಲೆಯಲ್ಲಿ ಮರಳುಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಗೆ ಇದೆ. ಈ ಹಿನ್ನಲೆಯಲ್ಲಿ ಯಾವುದೇ ಒತ್ತಡಗಳಿಗೆ ಮಣಿಯದೆ ಕ್ರಮ ಕೈಗೊಳ್ಳುವಂತೆ ನಿರೀಕ್ಷಕ ತಹಸೀಲ್ದಾರ್ ಮತ್ತು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. 
    ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ನೇತೃತ್ವದಲ್ಲಿ ನಗರದಲ್ಲಿ ಅಂಬೇಡ್ಕರ್ ಭವನ ಕಾಮಗಾರಿ ನಿರ್ಲಕ್ಷ್ಯ ಕುರಿತು, ಒಬ್ಬರಿಗೆ ಪಿಟಿಸಿಎಲ್ ಕಾಯ್ದೆಯಡಿ ಜಮೀನು ನೀಡಲಾಗಿದ್ದು, ಮತ್ತೊಬ್ಬರಿಗೆ ಪಿಟಿಸಿಎಲ್ ಕಾಯ್ದೆಯಡಿ ಜಮೀನು ನೀಡಿಲ್ಲ. ತಾಲೂಕಿನ ಡಿ.ಬಿ ಹಳ್ಳಿ ಗ್ರಾಮದ ನಿವಾಸಿಯೊಬ್ಬರ ವಂಶವೃಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ೭ ಅಹವಾಲುಗಳನ್ನು ಸಲ್ಲಿಸಲಾಯಿತು. 
    ಸಭೆಯನ್ನು ಸುಮಾರು ೧ ತಾಸು ಹೆಚ್ಚಿನ ಅವಧಿಯಲ್ಲಿ ನಡೆಸಲಾಯಿತು. ಸಭೆಯಲ್ಲಿ ತಹಸೀಲ್ದಾರ್ ಪರುಸಪ್ಪ ಕುರುಬರ, ಪೇಪರ್‌ಟೌನ್ ಠಾಣೆ ನಿರೀಕ್ಷಕಿ ನಾಗಮ್ಮ ಉಪಸ್ಥಿತರಿದ್ದರು. ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡಿದ್ದರು. 
 

Monday, January 27, 2025

ಎಬಿವಿಪಿ ರಾಜ್ಯ ಸಮ್ಮೇಳನಕ್ಕೆ ಕಾರ್ಯಕರ್ತರಿಂದ ದಿನಸಿ ಸಾಮಗ್ರಿ

ಶಿವಮೊಗ್ಗದಲ್ಲಿ ಜ.೩೧ ರಿಂದ ಫೆ.೨ರ ತನಕ ನಡೆಯುವ ೪೪ನೇ ಎಬಿವಿಪಿ ರಾಜ್ಯ ಸಮ್ಮೇಳನಕ್ಕೆ ಭದ್ರಾವತಿ ನಗರದ ಕಾರ್ಯಕರ್ತರು ಸಮ್ಮೇಳನಕ್ಕೆ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ನೀಡುವ ಮೂಲಕ ಅಳಿಲು ಸೇವೆ ಸಲ್ಲಿಸಿದ್ದಾರೆ. 
    ಭದ್ರಾವತಿ: ಶಿವಮೊಗ್ಗದಲ್ಲಿ ಜ.೩೧ ರಿಂದ ಫೆ.೨ರ ತನಕ ನಡೆಯುವ ೪೪ನೇ ಎಬಿವಿಪಿ ರಾಜ್ಯ ಸಮ್ಮೇಳನಕ್ಕೆ ನಗರದ ಕಾರ್ಯಕರ್ತರು ಸಮ್ಮೇಳನಕ್ಕೆ ಅಗತ್ಯವಿರುವ ದಿನಸಿ ಸಾಮಗ್ರಿಗಳನ್ನು ನೀಡುವ ಮೂಲಕ ಅಳಿಲು ಸೇವೆ ಸಲ್ಲಿಸಿದ್ದಾರೆ. 
    ಸಮ್ಮೇಳನದ ಸ್ವಾಗತ ಸಮಿತಿ ಸದಸ್ಯರಾದ ಬಿ. ದಿವಾಕರಶೆಟ್ಟಿಯವರ ಮೂಲಕ ರಾಜ್ಯ ಸಮ್ಮೇಳನಕ್ಕೆ ದಿನಸಿ ಸಾಮಗ್ರಿಗಳನ್ನು ಕಳುಹಿಸಿ ಕೊಡಲಾಯಿತು.  ದಿವಾಕರಶೆಟ್ಟಿಯವರು ಮಾತನಾಡಿ, ಜಗತ್ತಿನ ಅತಿ ದೊಡ್ಡ ಪ್ರಭಾವಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಮ್ಮೇಳನ ಶಿವಮೊಗ್ಗ ನಗರದಲ್ಲಿ ನಡೆಯುತ್ತಿರುವುದು ನಮ್ಮೆಲ್ಲರ ಸೌಭಾಗ್ಯ. ಈ ಸಮ್ಮೇಳನ ಯಶಸ್ವಿಯಾಗಲು ಜಿಲ್ಲೆಯ ಎಲ್ಲಾ ನಾಗರೀಕರು  ಹೆಚ್ಚಿನ ಸಹಕಾರ ನೀಡಬೇಕೆಂದು ಮನವಿ ಮಾಡಿದರು. 
    ಎಬಿವಿಪಿ ರಾಜ್ಯ ಕಾರ್ಯದರ್ಶಿ ಪ್ರವೀಣ್‌ರವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ರಾಷ್ಟ್ರಪ್ರೇಮವನ್ನು ಬೆಳೆಸುವುದರ ಜೊತೆಗೆ ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ಪುನರ್ ನಿರ್ಮಾಣದ ಧ್ಯೇಯ ಹೊಂದಿರುವ ಎಬಿವಿಪಿಗೆ ಸಮಾಜದ ಎಲ್ಲರ ಸಹಕಾರ ಹೆಚ್ಚಿನದ್ದಾಗಿದೆ ಎಂದರು.  ಎಬಿವಿಪಿ ಸ್ಥಳೀಯ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು. 

ಇಂದು ದೇಶದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್ ಪಕ್ಷವೇ ಬೇರೆ : ಸಂಸದ ಬಿ.ವೈ ರಾಘವೇಂದ್ರ.

ಭದ್ರಾವತಿ ನಗರದಲ್ಲಿ ಸೋಮವಾರ ಪಕ್ಷದ ಯುವ ಮುಖಂಡ, ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮಂಗೋಟೆ ರುದ್ರೇಶ್‌ರವರ ನೇತೃತ್ವದಲ್ಲಿ ಸಂವಿಧಾನ ಗೌರವ ಅಭಿಯಾನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಭೀಮ ಸಂಗಮ, ದಲಿತ ಬಂಧುಗಳಿಗೆ ಭೋಜನ ಕಾರ್ಯಕ್ರಮ ಸಂಸದ ಬಿ.ವೈ ರಾಘವೇಂದ್ರ ಉದ್ಘಾಟಿಸಿದರು. 
    ಭದ್ರಾವತಿ : ಅಂದು ಸ್ವಾತಂತ್ರ್ಯಕ್ಕೆ ಹೋರಾಟ ಮಾಡಿದ ಕಾಂಗ್ರೆಸ್ ಪಕ್ಷವೇ ಬೇರೆ. ಇಂದು ದೇಶದಲ್ಲಿ ಅಸ್ತಿತ್ವದಲ್ಲಿರುವ ಕಾಂಗ್ರೆಸ್ ಪಕ್ಷವೇ ಬೇರೆ ಎಂದು  ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
    ಅವರು ನಗರದಲ್ಲಿ ಸೋಮವಾರ ಪಕ್ಷದ ಯುವ ಮುಖಂಡ, ವಿಧಾನಸಭಾ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮಂಗೋಟೆ ರುದ್ರೇಶ್‌ರವರ ನೇತೃತ್ವದಲ್ಲಿ ಸಂವಿಧಾನ ಗೌರವ ಅಭಿಯಾನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಭೀಮ ಸಂಗಮ, ದಲಿತ ಬಂಧುಗಳಿಗೆ ಭೋಜನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಅಂದು ಇದ್ದಿದ್ದು ದೇಶದ ಸ್ವಾತಂತ್ರ್ಯಕ್ಕೆ ಹೋರಾಟ ಮಾಡುವ ಸಲುವಾಗಿ ಜನ್ಮ ತಾಳಿದ ಕಾಂಗ್ರೆಸ್ ಪಕ್ಷ. ಆದರೆ ಮುಂದೆ ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಗಾಂಧೀಜಿಯವರು ಕಾಂಗ್ರೆಸ್ ಪಕ್ಷ ವಿಸರ್ಜಿಸಿ. ಅದರ ಗುರಿ ಹಾಗು ಉದ್ದೇಶ ಈಡೇರಿದೆ. ಇನ್ನು ಅದನ್ನು ಕೇವಲ ಸಾಂಸ್ಕೃತಿಕ ಸಂಘಟನೆಯಾಗಿರಲಿ ಎಂದು ತಿಳಿಸಿದ್ದರು. ಆದರೆ ಅಂದಿನ ಕಾಂಗ್ರೆಸ್ ಮುಖಂಡರು ಗಾಂಧಿಜಿಯವರ ಮಾತನ್ನು ಧಿಕ್ಕರಿಸಿ ಕಾಂಗ್ರೆಸ್ ಪಕ್ಷ್ಚವನ್ನು ತಮ್ಮ ರಾಜಕೀಯ ಅಧಿಕಾರದ ಉದ್ದೇಶಕ್ಕಾಗಿ ಜೀವಂತವಾಗಿರಿಸಿಕೊಂಡು ಇಂದಿಗೂ ನಿರಂತರವಾಗಿ ಅಧಿಕಾರ ಅನುಭವಿಸುತ್ತಾ ಬಂದಿದ್ದಾರೆಂದು ಆರೋಪಿಸಿದರು. 
       ಮಹಾತ್ಮಗಾಂಧಿಜೀಯವರು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಬೆಳಗಾವಿಗೆ ಭೇಟಿ ಅಲ್ಲಿನ ಬಾವಿಯಲ್ಲಿ ನೀರನ್ನು ಸೇದುವ ಮೂಲಕ ಹೋರಾಟಕ್ಕೆ ಚಾಲನೆ ನೀಡಿದ ೧೦೦ ವರ್ಷಗಳ ಸವಿ ನೆನೆಪಿಗೆ `ಜೈ ಭೀಮ್, ಜೈ ಬಾಪು, ಜೈ ಸಂವಿಧಾನ' ಎಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಜರುಗಿದ ಕಾರ್ಯಕ್ರಮ ಹಾಸ್ಯಾಸ್ಪದವಾಗಿದೆ ಎಂದರು.       
    ಅಂಬೇಡ್ಕರ್‌ರವರನ್ನು ಕಾಂಗ್ರೆಸ್ ಪಕ್ಷ ಕೇವಲ ಅವರ ಹೆಸರಿನಲ್ಲಿ ಭಾಷಣ ಮಾಡುವುದಕ್ಕೆ, ಸಭೆ ಸಮಾರಂಭಗಳಲ್ಲಿ ಅವರ ಪೋಟೋ ಪೂಜೆ ಮಾಡುವುದಕ್ಕೆ ಸೀಮಿತಿಗೋಳಿಸಿದರೆ,  ಬಿಜೆಪಿ ಪಕ್ಷ ಅವರು ಜನಿಸಿದ, ವಿದ್ಯಾಭ್ಯಾಸ ಮಾಡಿದ, ವಿದೇಶದಲ್ಲಿದ್ದ, ಮರಣಿಸಿದ ಸ್ಥಳಗಳನ್ನು ಪಂಚ ಕಲ್ಯಾಣ ಎಂಬ ಹೆಸರಿನಲ್ಲಿ ಸುಮಾರು ೩೫೦ ಕೋಟಿ ರೂ. ವೆಚ್ಚ ಮಾಡಿ ಐತಿಹಾಸಿಕ ಸ್ಮಾರಕವನ್ನಾಗಿ ಮಾಡಿದೆ ಎಂದರು.
    ಬಿಜೆಪಿ ಸಂವಿಧಾನ ಬದಲಾವಣೆ ಮಾಡುತ್ತದೆ. ತಿದ್ದುಪಡಿ ಮಾಡುತ್ತದೆ ಎಂದು ಕಾಂಗ್ರೆಸ್ ದೇಶಾದ್ಯಂತ ಅಪಪ್ರಚಾರದಲ್ಲಿ ತೊಡಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಇದುವರೆಗೆ ೧೦೬ ಬಾರಿ ಸಂವಿದಾನ ತಿದ್ದುಪಡಿ ಮಾಡಲಾಗಿದ್ದು, ನಿಜ ಸಂಗತಿ ಎಂದರೆ ಕಾಂಗ್ರೆಸ್ ಪಕ್ಷ ತನ್ನ ಅಧಿಕಾರದ ಸಮಯದಲ್ಲಿ ಸಂವಿಧಾನವನ್ನು ತನಗೆ ಬೇಕಾದಂತೆ ೭೫ ಬಾರಿ ತಿದ್ದುಪಡಿ ಮಾಡಿದೆ. ಈ ತಿದ್ದುಪಡಿಯನ್ನು ಯಾಕೆ ಮಾಡಿದೆ ಎಂದು ಇದುವರೆಗೂ  ದೇಶದ ಜನರ ಮುಂದೆ ಬಹಿರಂಗಪಡಿಸಿಲ್ಲ ಎಂದು ಪ್ರಶ್ನಿಸಿದರು.
    ಕಾಂಗ್ರೆಸೇತರ ರಾಜಕೀಯ ಪಕ್ಷಗಳು ಸಂವಿಧಾನಕ್ಕೆ ೩೧ ಬಾರಿ ತಿದ್ದುಪಡಿ ಮಾಡಿವೆ. ಅದರಲ್ಲಿ ಬಿಜೆಪಿ ಬೆಂಬಲಿತ ಸಮಯದಲ್ಲಿ ವಿ.ಪಿ ಸಿಂಗ್ ರವರ ಆಧಿಕಾರವಧಿಯಲ್ಲಿ ಮತ್ತು ವಾಜಪೇಯಿ ಆಧಿಕಾರದ ಸಮಯದಲ್ಲಿ ೧೪ ಮತ್ತು ನರೇಂದ್ರ ಮೋದಿಯವರ ಅವಧಿಯಲ್ಲಿ ೮ ಬಾರಿ ತಿದ್ದುಪಡಿ ಆಗಿದೆ. ಈ ಎಲ್ಲಾ ತಿದ್ದುಪಡಿಗಳು ದೇಶದ ಜನರ, ಹಿಂದುಳಿದವರ, ಎಸ್‌ಸಿ/ಎಸ್‌ಟಿ ಜನಾಂಗದವರ ಅಭಿವೃಧ್ಧಿ, ಮೀಸಲಾತಿ ಮುಂದುವರೆಯಬೇಕು, ೧೦ನೇ ತೆರಿಗೆ ಅನುಷ್ಠಾನಕ್ಕಾಗಿ, ಬ್ಯಾಕ್‌ಲಾಗ್ ಮೀಸಲಾತಿ ಹುದ್ದೆಗಾಗಿ, ಅರುಣಾಚಲ ಪ್ರದೇಶದಲ್ಲಿ ಹಿಂದುಳಿದವರಿಗೆ ರಾಜಕೀಯ ಅಧಿಕಾರಕ್ಕಾಗಿ ಮತ್ತು ದೇಶದಲ್ಲಿ ಸಚಿವ ಸಂಪುಟದಲ್ಲಿ ಮಂತ್ರಿಗಳ ಸಂಖ್ಯೆ ಮಿತಿ ಮಾಡುವ ಮೂಲಕ ದೇಶದ ಬೊಕ್ಕಸಕ್ಕೆ ಹೊರೆಯಾಗಬಾರದು ಎಂಬ ಭವಿಷ್ಯದ ವೆಚ್ಚದ ಕಾರಣಕ್ಕಾಗಿ, ಶಾಸಕರ ಮತ್ತು ಸಂಸದರ ಸಂಖ್ಯೆಯ ಆಧಾರದ ಮೇಲೆ ಸಂಪುಟ ರಚನೆ ಮಾಡಬೇಕು ಎಂಬುದು ಬಹು ಮುಖ್ಯವಾದ ಸಂಗತಿಗಳು ಎಂದರು.
    ನರೇಂದ್ರ ಮೋದಿಯವರ ಅವಧಿಯಲ್ಲಿ ತಿದ್ದುಪಡಿ ಆಗಿರುವುದು ಹಿಂದುಳಿದ ವರ್ಗಗಳ ರಾಷ್ಟ್ರೀಯ ಆಯೋಗದ ಮಾನ್ಯತೆ ಮುಂದುವರಿಕೆಗಾಗಿ, ಎಸ್‌ಸಿ, ಎಸ್‌ಟಿ ಮೀಸಲಾತಿಯನ್ನು ೨೦೩ ರವರೆಗೆ ಮಂದುವರೆಸುವುದಕ್ಕಾಗಿ, ೩೭೦ನೇ ವಿಧಿಯನ್ನು ರದ್ದು ಮಾಡುವುದಕ್ಕಾಗಿ, ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ ೩೩ರಷ್ಟು ಮೀಸಲಾತಿ ಅವಕಾಶ ಕಲ್ಪಿಸುವುದು ಸೇರಿದಂತೆ ಇತರ ಕಾರಣಗಳಿಗಾಗಿ ಸಂವಿಧಾನ ತಿದ್ದುಪಡಿ ಮಾಡಿದೆ ಎಂದು ಹಿಂದಿನ ಕಾರಣಗಳನ್ನು ಬಹಿರಂಗ ಪಡಿಸಿದರು.
    ಬಿಜೆಪಿ ಮೇಲೆ ಕಾಂಗ್ರೆಸ್ ಮಾಡುತ್ತಿರುವ ಅಪಪ್ರಚಾರಗಳಿಗೆ ದಲಿತ, ಹಿಂದುಳಿದ ಸಮುದಾಯಗಳು ಇನ್ನಾದರೂ ಕಿವಿಗೊಡದೆ ದೇಶದ ಭದ್ರತೆ, ಆಖಂಡತೆ, ಸುರಕ್ಷತೆ, ಸರ್ವಜನರ ಏಳಿಗೆಗಾಗಿ, ದಲಿತ, ಹಿಂದುಳಿದವರ ಪ್ರಾಮಾಣಿಕ ಅಭಿವೃಧ್ಧಿಗಾಗಿ ದಲಿತರು, ಹಿಂದುಳಿದವರು ಇನ್ನಾದರೂ ಎಚ್ಚೆತ್ತುಕೊಂಡು ಪ್ರಾಮಾಣಿಕವಾಗಿ ಬಿಜೆಪಿ  ಬೆಂಬಲಿಸಿ ತಮ್ಮ ಕೊಡುಗೆಗಳನ್ನು ನೀಡಿ ಎಂದು ಮನವಿ ಮಾಡಿದರು.
    ಪ್ರಗತಿಪರ ಹಾಗು ದಲಿತ ಮುಖಂಡ ಸುರೇಶ್ ಮಾತನಾಡಿ, ವಿವಿಧ ರಾಜಕೀಯ ಪಕ್ಷಗಳು ಅಂಬೇಡ್ಕರ್ ವಿಚಾರಗಳನ್ನು ವಿವಿಧ ರೀತಿಯಲ್ಲಿ ನೋಡುತ್ತಾರೆ. ಆದರೆ ಅವರ ಗುರಿ ಬಾಬಾ ಸಾಹೇಬರ ಆಶಯಗಳನ್ನು ಈಡೇರಿಸಿ ಅನುಷ್ಠಾನಗೊಳಿಸುವುದಾಗಿದೆ. ಈ ನಿಟ್ಟಿನಲ್ಲಿ ಯಡಿಯೂರಪ್ಪರವರು ತಮ್ಮ ಅಧಿಕಾರಾವಧಿ ಸಮಯದಲ್ಲಿ ಜಿಲ್ಲೆಯಲ್ಲಿ ಛಲವಾದಿ ಸಮುದಾಯ ಭವನ ನಿರ್ಮಾಣ ಮಾಡುವ ಮೂಲಕ ದಲಿತರ ಬಗ್ಗೆ ಕಾಳಜಿ ವಹಿಸಿದ್ದಾರೆ. ಇವರು ದಲಿತ ಅಲ್ಪಸಂಖ್ಯಾತ ವಿರೋಧಿ ಎಂಬ ಭಾವನೆ ಇದೆ. ಆದರೆ ಇದು ಕೇವಲ ಆರೋಪ ಮಾತ್ರ. ವಾಸ್ತವವಾಗಿ ಎಲ್ಲಾ ವರ್ಗದವರನ್ನು ಪ್ರೀತಿ ವಿಶ್ವಾಸಗಳಿಂದ ಗೌರವದಿಂದ ಕಾಣುತ್ತಿರುವುದು ನಿಜ ಸಂಗತಿಯಾಗಿದೆ ಎಂದರು. 
    ದಲಿತ ಮುಖಂಡರಾದ ಜಿ. ಆನಂದ ಕುಮಾರ್, ನಿತ್ಯಾನಂದ, ಶಿವಾನಂದ, ಪುರುಷೋತ್ತಮ್, ಮೈಲಾರಪ್ಪ, ಅನ್ನಪೂರ್ಣ, ಸರಸ್ವತಿ, ಕೃಷ್ಣಪ್ಪ, ಬಸವರಾಜ್, ಶಕುಂತಲ, ಶಿವಬಸಪ್ಪ ಸೇರಿದಂತೆ ಇತರರು  ವೇದಿಕೆಯಲ್ಲಿದ್ದರು.
    ವೆಂಕಟೇಶ್ ಪ್ರಾರ್ಥಿಸಿ, ಮಂಗೋಟೆ ರುದ್ರೇಶ್ ಆಶಯ ಭಾಷಣ ನಡೆಸಿಕೊಟ್ಟರು. ಎಸ್. ದತ್ತಾತ್ರಿ ಪ್ರಾಸ್ತಾವಿಕ ನುಡಿಗಳನ್ನಾಡಿ, ಹನುಮಂತ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

ಭದ್ರಾ ನದಿ ಸೇತುವೆ ಕೆಳಭಾಗದಲ್ಲಿ ಮೃತಪಟ್ಟ ಚಿರತೆ ಪತ್ತೆ

ಭದ್ರಾವತಿ: ನಗರದ ಬೈಪಾಸ್ ರಸ್ತೆ ರಾಷ್ಟ್ರೀಯ ಹೆದ್ದಾರಿ ಆನೆಕೊಪ್ಪ ಬಳಿ ಭದ್ರಾ ನದಿ ಸೇತುವೆ ಕೆಳ ಭಾಗದಲ್ಲಿ ಸೋಮವಾರ ಬೆಳಿಗ್ಗೆ ಮೃತಪಟ್ಟಿರುವ ಚಿರತೆಯೊಂದು ಪತ್ತೆಯಾಗಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
    ಭದ್ರಾವತಿ: ನಗರದ ಬೈಪಾಸ್ ರಸ್ತೆ ರಾಷ್ಟ್ರೀಯ ಹೆದ್ದಾರಿ ಆನೆಕೊಪ್ಪ ಬಳಿ ಭದ್ರಾ ನದಿ ಸೇತುವೆ ಕೆಳ ಭಾಗದಲ್ಲಿ ಸೋಮವಾರ ಬೆಳಿಗ್ಗೆ ಮೃತಪಟ್ಟಿರುವ ಚಿರತೆಯೊಂದು ಪತ್ತೆಯಾಗಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 
    ಸುಮಾರು ೨ ರಿಂದ ೩ ವರ್ಷದ ಗಂಡು ಚಿರತೆಯ ಮೃತದೇಹವಾಗಿದ್ದು, ಇದು ಭದ್ರಾ ಅಭರಣ್ಯ ವ್ಯಾಪ್ತಿಯಲ್ಲಿ ವಾಸಿಸುವ ಚಿರತೆ ಎಂಬುದು ತಿಳಿದು ಬಂದಿದೆ. ಈ ಚಿರತೆ ಸೇತುವೆ ಮೇಲಿಂದ ಬಿದ್ದು ಸಾವನ್ನಪ್ಪಿದೆಯೋ ಅಥವಾ ಬೇಟೆಯಾಡಿ ಹತ್ಯೆ ಮಾಡಲಾಗಿದೆಯೋ ಎಂಬುದು ತನಿಖೆಯಿಂದ ತಿಳಿದು ಬರಬೇಕಾಗಿದೆ. 
    ಈ ಕುರಿತು ಮಾಹಿತಿ ನೀಡಿರುವ ವಲಯ ಅರಣ್ಯಾಧಿಕಾರಿ ಬಿ.ಎಚ್ ದುಗ್ಗಪ್ಪ ಈ ಭಾಗದಲ್ಲಿ ಚಿರತೆಗಳು ಹೆಚ್ಚಾಗಿವೆ. ಬೆಳಿಗ್ಗೆ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಚಿರತೆ ಇದೆ ದಿನ ಮೃತಪಟ್ಟಿರುವ ಸಾಧ್ಯತೆ ಕಂಡು ಬರುತ್ತಿದೆ. ಚಿರತೆಯ ಮೃತದೇಹ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ತನಿಖೆ ನಂತರ ಪೂರ್ಣ ಮಾಹಿತಿ ಲಭ್ಯವಾಗಲಿದೆ ಎಂದರು. 
    ಘಟನಾ ಸ್ಥಳದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಆಶಿಶ್ ರೆಡ್ಡಿ, ವಲಯ ಅರಣ್ಯಾಧಿಕಾರಿ ಕಛೇರಿಯ ಸಿಬ್ಬಂದಿಗಳು, ಪೇಪರ್ ಟೌನ್ ಠಾಣೆ ಉಪ ನಿರೀಕ್ಷಕಿ ಕವಿತಾ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 

Sunday, January 26, 2025

ರೈಲ್ವೆ ಮೇಲ್ಸೇತುವೆ ಕೆಳಭಾಗದಲ್ಲಿ ಮೊದಲ ಫುಡ್ ಕೋರ್ಟ್ ಉದ್ಘಾಟನೆ

ಭದ್ರಾವತಿ ನಗರಸಭೆ ವತಿಯಿಂದ ಬಹು ವರ್ಷಗಳ ಬೇಡಿಕೆಯಂತೆ ನಗರದ ಮಹಾತ್ಮಗಾಂಧಿ ರಸ್ತೆ (ಟಿ.ಕೆ ರಸ್ತೆ)ಯ ರೈಲ್ವೆ ಮೇಲ್ಸೇತುವೆ ಕೆಳಭಾಗದಲ್ಲಿ ಫುಡ್‌ಕೋರ್ಟ್ ನಿರ್ಮಿಸಲಾಗಿದ್ದು, ಜ.೨೬ ಗಣರಾಜ್ಯೋತ್ಸವದಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. 
    ಭದ್ರಾವತಿ: ನಗರಸಭೆ ವತಿಯಿಂದ ಬಹು ವರ್ಷಗಳ ಬೇಡಿಕೆಯಂತೆ ನಗರದ ಮಹಾತ್ಮಗಾಂಧಿ ರಸ್ತೆ (ಟಿ.ಕೆ ರಸ್ತೆ)ಯ ರೈಲ್ವೆ ಮೇಲ್ಸೇತುವೆ ಕೆಳಭಾಗದಲ್ಲಿ ಫುಡ್‌ಕೋರ್ಟ್ ನಿರ್ಮಿಸಲಾಗಿದ್ದು, ಜ.೨೬ ಗಣರಾಜ್ಯೋತ್ಸವದಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. 
    ವಾರ್ಡ್ ನಂ. ೧೩, ೧೬ ಮತ್ತು ೧೭ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬೀದಿಬದಿ ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ನಗರಸಭೆ ಅನುದಾನದಲ್ಲಿ ಒಟ್ಟು ೯ ಲಕ್ಷ ರು. ವೆಚ್ಚದಲ್ಲಿ ಫುಡ್‌ಕೋರ್ಟ್ ನಿರ್ಮಿಸಲಾಗಿದ್ದು, ಪ್ರಸ್ತುತ ಬೇಡಿಕೆಯಂತೆ ಒಟ್ಟು ೨೮ ವ್ಯಾಪಾರಿಗಳಿಗೆ ಮಳಿಗೆಗಳನ್ನು ನಿರ್ಮಿಸಲಾಗಿದೆ. ಸದ್ಯಕ್ಕೆ ಪ್ಲಾಟ್ ಫಾರಂ, ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ  ಕಲ್ಪಿಸಲಾಗಿದೆ.  ಮುಂದಿನ ದಿನಗಳಲ್ಲಿ ಶೌಚಾಲಯ ಸಹ ನಿರ್ಮಾಣವಾಗಲಿದೆ.  
    ಇದು ನಗರಸಭೆ ವತಿಯಿಂದ ನಿರ್ಮಿಸಲಾಗಿರುವ ಮೊದಲ ಫುಡ್‌ಕೋರ್ಟ್ ಆಗಿದ್ದು, ಹಳೇನಗರದ ಬಸವೇಶ್ವರ ವೃತ್ತ ಹಾಗು ಜನ್ನಾಪುರ ವಾಣಿಜ್ಯ ರಸ್ತೆಯಲ್ಲಿ ಫುಡ್‌ಕೋರ್ಟ್‌ಗಳ ನಿರ್ಮಾಣಕ್ಕೆ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. 
    ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಸೂಡಾ ಸದಸ್ಯ ಎಚ್. ರವಿಕುಮಾರ್  ಸೇರಿದಂತೆ ನಗರಸಭೆ ಚುನಾಯಿತ ಹಾಗು ನಾಮನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು. 

ಮೆಸ್ಕಾಂ ಕಛೇರಿಯಲ್ಲಿ ೭೬ನೇ ಗಣರಾಜ್ಯೋತ್ಸವ ದಿನಾಚರಣೆ

ಭದ್ರಾವತಿ ನಗರದ ಜೆಪಿಎಸ್ ಕಾಲೋನಿ, ಮೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ರವರ ಕಛೇರಿ ವತಿಯಿಂದ ಆಯೋಜಿಸಲಾಗಿದ್ದ ೭೬ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಬಿ.ಎಸ್ ಪ್ರಕಾಶ್ ಧ್ವಜಾರೋಹಣ ನೆರವೇರಿಸಿದರು.
    ಭದ್ರಾವತಿ: ನಗರದ ಜೆಪಿಎಸ್ ಕಾಲೋನಿ, ಮೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ರವರ ಕಛೇರಿ ವತಿಯಿಂದ ಆಯೋಜಿಸಲಾಗಿದ್ದ ೭೬ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಬಿ.ಎಸ್ ಪ್ರಕಾಶ್ ಧ್ವಜಾರೋಹಣ ನೆರವೇರಿಸಿದರು. 
    ಭಾರತರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮಗಾಂಧಿಜೀಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಸೂಚಿಸಲಾಯಿತು. ಧ್ವಜಾರೋಹಣದ ನಂತರ ಸಿಹಿ ಹಂಚಲಾಯಿತು. 
    ಲೆಕ್ಕಾಧಿಕಾರಿ ಅಶ್ವಿನಿಕುಮಾರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗಿರೀಶ್, ಹಿರಿಯ ಸಹಾಯಕಿ ನಾಗರತ್ನ ಸೇರಿದಂತೆ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು. 

ದೇಶದ ಸಂವಿಧಾನ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿದೆ : ಪರುಸಪ್ಪ ಕುರುಬರ

ಭದ್ರಾವತಿ ಕನಕ ಮಂಟಪ ಮೈದಾನದಲ್ಲಿ ನಡೆದ ೭೬ ನೇ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ತಹಸೀಲ್ದಾರ್ ಪರುಸಪ್ಪ ಕುರುಬರ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಶಾಸಕ ಬಿ.ಕೆ ಸಂಗಮೇಶ್ವರ್, ಎ.ಕೆ ನಾಗೇಂದ್ರಪ್ಪ, ಬಿ. ಸಿದ್ದಬಸಪ್ಪ, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಭದ್ರಾವತಿ; ಭಾರತ ದೇಶದ ಸಂವಿಧಾನ ಸರಳವಾದ ಬೃಹತ್ ಸಂವಿಧಾನವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಿದೆ ಎಂದು ತಹಸೀಲ್ದಾರ್ ಪರುಸಪ್ಪ ಕುರುಬರ ಹೇಳಿದರು. 
    ಅವರು ಹಳೇನಗರದ ಕನಕಮಂಟಪ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿವತಿಯಿಂದ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ಮತ್ತು ನಗರಸಭೆ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ೭೬ನೇ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಸಂದೇಶ ವಾಚಿಸಿದರು. 
    ನಮ್ಮದು ಸಂಸದೀಯ ಸರ್ಕಾರ ಪದ್ದತಿ, ಗಣತಂತ್ರ ವ್ಯವಸ್ಥೆ, ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳು, ರಾಜ್ಯ ನಿರ್ದೇಶಕ ತತ್ವಗಳನ್ನು ಒಳಗೊಂಡಿದೆ. ನಮ್ಮ ದೇಶದ ಸಂವಿಧಾನ ಪ್ರಜೆಗಳಿಂದ ಪ್ರಜೆಗಳಿಗಾಗಿ ಪ್ರಜೆಗಳ ಏಳಿಗೆಗೆ ಇರುವ ಸಂವಿಧಾನವಾಗಿದೆ. ಅಸಮಾನತೆ ಹೋಗಲಾಡಿಸಿ ಎಲ್ಲರೂ ಸಮಾನರು ಎಂಬ ಭಾವನೆ ಮೂಡಿಸುತ್ತದೆ. ಬಿ.ಆರ್ ಅಂಬೇಡ್ಕರ್ ಹೇಳುವಂತೆ ಪ್ರಜಾಪ್ರಭುತ್ವ ಎಂದರೆ ಕೇವಲ ಆಡಳಿತ ವಿಧಾನವಲ್ಲ ಅದು ಜೊತೆಯಾಗಿ ಬದುಕುವ, ಮನುಷ್ಯರಿಗೆ ಘನತೆ ಗೌರವ ನೀಡುವ ಕ್ರಮದ ಆಶಯವಾಗಿದೆ ಎಂದರು.
    ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದ ಶಾಸಕ ಬಿ.ಕೆ ಸಂಗಮೇಶ್ವರ್, ಡಾ. ಬಾಬಾ ಸಾಹೇಬ್ ಅಂಬೇಡ್ಕರ್‌ರವರು ದೇಶಕ್ಕೆ ಸಂವಿಧಾನವನ್ನು ರೂಪಿಸಿ ಮೂಲಭೂತ ಹಕ್ಕು ಹಾಗೂ ಕರ್ತವ್ಯಗಳನ್ನು ನೀಡಿದ್ದಾರೆ. ಅವುಗಳಿಗೆ ಗೌರವ ಸಲ್ಲಿಸುವ ಜವಾಬ್ದಾರಿ ನಮ್ಮ ಮೇಲಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲಾ ಧರ್ಮದ, ಎಲ್ಲಾ ಜಾತಿ ಜನಾಂಗದ, ಎಲ್ಲಾ ಭಾಷೆಯ ಜನರು ಸಮಾನತೆ ಸಹಬಾಳ್ವೆಯಿಂದ ಬದುಕಬೇಕೆನ್ನುವುದು ಸಂವಿಧಾನದ ಆಶಯವಾಗಿದೆ. ಅದರಂತೆ ನಾವೆಲ್ಲರೂ ಯಾವುದೇ ತಾರತಮ್ಯ ಮಾಡದೆ ಸಮಾನತೆಯಿಂದ ಜೀವಿಸಬೇಕು ಎಂದರು.
    ತಾಲೂಕಿನ ಎಲ್ಲಾ ಸರ್ಕಾರಿ ಅಧಿಕಾರಿಗಳು ಸಂವಿಧಾನದ ಆಶಯದಂತೆ ಕರ್ತವ್ಯ ನಿರ್ವಹಿಸಬೇಕು. ಪ್ರತಿ ಪ್ರಜೆಗೂ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ತಾಲೂಕಿನಲ್ಲಿ ಅಭಿವೃದ್ದಿ ಕಾರ್ಯಗಳು ಸಾಕಷ್ಟು ನಡೆಯುತ್ತಿವೆ. ಮುಂದಿನ ೨ ವರ್ಷದ ಅವಧಿಯಲ್ಲಿ ಶೇ.೮೦ರಷ್ಟು ಪೂರ್ಣಪ್ರಮಾಣದಲ್ಲಿ ಕಾಮಗಾರಿ ಮುಗಿಯಲಿದೆ ಎಂದರು.
    ಸಮಾರಂಭದಲ್ಲಿ ಪೊಲೀಸ್, ಗೃಹರಕ್ಷಕ ದಳ, ವಿವಿಧ ಶಾಲಾ ಕಾಲೇಜುಗಳ ಎನ್.ಸಿ.ಸಿ, ಸ್ಕೌಟ್ಸ್-ಗೈಡ್ಸ್, ಬ್ಯಾಂಡ್‌ಸೆಟ್ ಸೇರಿದಂತೆ ವಿವಿಧ ತಂಡಗಳು  ಮಕ್ಕಳು ಪಥಸಂಚಲನದಲ್ಲಿ ಭಾಗವಹಿಸಿದ್ದವು. ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆ ಉಪ ನಿರೀಕ್ಷಕ ಕೃಷ್ಣಕುಮಾರ್ ಮಾನೆ ಪಥಸಂಚನದ ನೇತೃತ್ವದ ವಹಿಸಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಗಣ್ಯರನ್ನು ಸನ್ಮಾನಿಸಿ ಅಭಿನಂಧಿಸಲಾಯಿತು.
    ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ.ನಾಗೇಂದ್ರಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ಪೊಲೀಸ್ ಉಪಾಧೀಕ್ಷಕ ಕೆ.ಆರ್ ನಾಗರಾಜು,   ಆರ್‌ಎಫ್ ಕಮಾಂಡೆಂಟ್ ಪ್ರದೀಪ್, ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್ ಸೇರಿದಂತೆ ನಗರಸಭೆ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು  ಉಪಸ್ಥಿತರಿದ್ದರು. 

ಸಮಾನತೆ, ಒಗ್ಗಟ್ಟು ಸಂವಿಧಾನದ ಆಶಯ ಅರಿತುಕೊಳ್ಳಿ : ಬಿ.ಕೆ ಸಂಗಮೇಶ್ವರ್

ಭದ್ರಾವತಿ ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಹಳೇ ಪ್ರತಿಮೆ ಬದಲಿಸಿ ಹೊಸದಾಗಿ ಪ್ರತಿಷ್ಠಾಪಿಸಲಾಗಿರುವ ೧೨ ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟನೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ವೇದಿಕೆ ಕಾರ್ಯಕ್ರಮ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. 
    ಭದ್ರಾವತಿ:  ಧರ್ಮ, ಜಾತಿ, ಭಾಷೆ, ಬಡವ-ಶ್ರೀಮಂತ, ಲಿಂಗ ಬೇಧಭಾವವಿಲ್ಲದೆ ಸಮಾಜದಲ್ಲಿ ಪ್ರತಿಯೊಬ್ಬರನ್ನು ಸಮಾನವಾಗಿ ಕಾಣಬೇಕು. ಎಲ್ಲರೂ ಒಗ್ಗಟ್ಟಿನಿಂದ ಬಾಳಬೇಕೆಂಬ ಆಶಯದೊಂದಿಗೆ ಪ್ರಪಂಚದಲ್ಲಿಯೇ ಶ್ರೇಷ್ಠವಾದ ಸಂವಿಧಾನ ರಚಿಸಿದ ಮಹಾನ್ ವ್ಯಕ್ತಿ ಡಾ. ಬಿ.ಆರ್ ಅಂಬೇಡ್ಕರ್ ಎಂಬುದನ್ನು ನಾವೆಲ್ಲರೂ ಅರ್ಥಮಾಡಿಕೊಂಡು ಅವರ ಆಶಯದೊಂದಿಗೆ ಮುನ್ನಡೆಯಬೇಕೆಂದು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು. 
    ಅವರು ಭಾನುವಾರ ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಹಳೇ ಪ್ರತಿಮೆ ಬದಲಿಸಿ ಹೊಸದಾಗಿ ಪ್ರತಿಷ್ಠಾಪಿಸಲಾಗಿರುವ ೧೨ ಅಡಿ ಎತ್ತರದ ಕಂಚಿನ ಪ್ರತಿಮೆ ಉದ್ಘಾಟಿಸಿ ಮಾತನಾಡಿದರು. 
    ಮಹಾನ್ ವ್ಯಕ್ತಿ ಅಂಬೇಡ್ಕರ್‌ರವರ ಪ್ರತಿಮೆ ಉದ್ಘಾಟಿಸಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಮುಂದಿನ ೩ ತಿಂಗಳಲ್ಲಿ ಅಂಬೇಡ್ಕರ್ ಭವನ ಕಾಮಗಾರಿ ಸಹ ಪೂರ್ಣಗೊಳಿಸಿ ಉದ್ಘಾಟಿಸುವುದಾಗಿ ಭರವಸೆ ನೀಡಿದರು. 
    ಮುಖಂಡ ಕೆ.ಎಲ್ ಅಶೋಕ್ ಮಾತನಾಡಿ, ಅಂಬೇಡ್ಕರ್‌ರವರ ಬದುಕು ತುಂಬಾ ಕಠಿಣವಾದ ಬದುಕು. ಅವರು ತಮ್ಮ ಬದುಕಿನಲ್ಲಿ ಅಸಮಾನತೆಯ ವಿರುದ್ಧ ಹೋರಾಟ ನಡೆಸಿ ಪ್ರಪಂಚದ ಎಲ್ಲಾ ರಾಷ್ಟ್ರಗಳ ಅಧ್ಯಯನ ನಡೆಸಿ ಶ್ರೇಷ್ಠ ಸಂವಿಧಾನ ನೀಡಿದ್ದಾರೆ. ಪ್ರತಿಮೆ ಸ್ಥಾಪನೆ ಸಾರ್ಥಕವಾಗಬೇಕಾದರೆ ಅವರ ಚಿಂತನೆ, ಆಶಯಗಳನ್ನು ನಾವುಗಳು ಜೀವನದಲ್ಲಿ ಅಳವಡಿಸಿಕೊಂಡು ಮುಂದೆ ಸಾಗಬೇಕು ಎಂದರು. 
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್ ಅಧ್ಯಕ್ಷತೆ ವಹಿಸಿದ್ದರು.  ಪ್ರಮುಖರಾದ ತಹಸೀಲ್ದಾರ್ ಪರುಸಪ್ಪ ಕುರುಬರ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಗಂಗಣ್ಣ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್ ಸೇರಿದಂತೆ ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿ ವರ್ಗದವರು, ಪೌರಕಾರ್ಮಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ದಲಿತ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಭೌದ್ಧ ಬಿಕ್ಕು ಪಂತೆಜೀ ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಸಂವಿಧಾನ ಪೀಠಿಕೆ ವಾಚಿಸಿದರು. ಬೌದ್ಧ ನಗರಸಭೆ ಸದಸ್ಯ ಚನ್ನಪ್ಪ ಸ್ವಾಗತಿಸಿದರು. ಭಿಕ್ಕು ಬಂತೇಜಿ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. 

Saturday, January 25, 2025

ಪೌರಕಾರ್ಮಿಕರ ವಸತಿ ಸಮುಚ್ಛಯಗಳ ಉದ್ಘಾಟನೆ

ಭದ್ರಾವತಿ: ರಂಗಪ್ಪ ವೃತ್ತದ ಜೈ ಭೀಮ್ ನಗರದಲ್ಲಿ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ನಿರ್ಮಿಸಿರುವ ವಸತಿ ಸಮುಚ್ಛಯಗಳನ್ನು ಭಾನುವಾರ ಗಣರಾಜ್ಯೋತ್ಸವ ದಿನದಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಭದ್ರಾವತಿ: ರಂಗಪ್ಪ ವೃತ್ತದ ಜೈ ಭೀಮ್ ನಗರದಲ್ಲಿ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ನಿರ್ಮಿಸಿರುವ ವಸತಿ ಸಮುಚ್ಛಯಗಳನ್ನು ಭಾನುವಾರ ಗಣರಾಜ್ಯೋತ್ಸವ ದಿನದಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು. 
    ಆರ್.ಜಿ.ಆರ್.ಎಚ್.ಸಿ.ಎಲ್ ವತಿಯಿಂದ ಒಟ್ಟು ೫.೬೦ ಕೋಟಿ ರು. ವೆಚ್ಚದಲ್ಲಿ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ವಸತಿ ಸಮುಚ್ಛಯಗಳನ್ನು ನಿರ್ಮಿಸಲಾಗಿದ್ದು, ಒಟ್ಟು ೭೪ ಪೌರಕಾರ್ಮಿಕರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಹಿಂದೆ ನಗರಸಭೆ ಪೌರಾಯುಕ್ತರಾಗಿದ್ದ ಮನೋಹರ್‌ರವರ ಅವಧಿಯಲ್ಲಿಯೇ ವಸತಿ ಸಮುಚ್ಛಯಗಳು ನಿರ್ಮಾಣಗೊಂಡು ಪೂರ್ಣಗೊಂಡಿದ್ದವು. ಇದೀಗ ಪೌರಕಾರ್ಮಿಕರಿಗೆ ವಸತಿ ಗೃಹಗಳನ್ನು ಹಸ್ತಾಂತರಿಸಲಾಯಿತು. 
    ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಸೂಡಾ ಸದಸ್ಯ ಎಚ್. ರವಿಕುಮಾರ್  ಸೇರಿದಂತೆ ನಗರಸಭೆ ಚುನಾಯಿತ ಹಾಗು ನಾಮನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು. 

ಜ.೨೬ರಂದು ಮೊದಲ ಫುರ್ಟ್‌ಕೋರ್ಟ್ ಉದ್ಘಾಟನೆ


    ಭದ್ರಾವತಿ: ನಗರಸಭೆ ವತಿಯಿಂದ ಬಹು ವರ್ಷಗಳ ಬೇಡಿಕೆಯಂತೆ ನಗರದ ಮಹಾತ್ಮಗಾಂಧಿ ರಸ್ತೆ (ಟಿ.ಕೆ ರಸ್ತೆ)ಯ ರೈಲ್ವೆ ಮೇಲ್ಸೇತುವೆ ಕೆಳಭಾಗದಲ್ಲಿ ಫುಟ್‌ಕೋರ್ಟ್ ನಿರ್ಮಿಸಲಾಗಿದ್ದು, ಜ.೨೬ರಂದು ಬೆಳಿಗ್ಗೆ ೮.೨೦ಕ್ಕೆ ಇದರ ಉದ್ಘಾಟನೆ ನಡೆಯಲಿದೆ. 
    ವಾರ್ಡ್ ನಂ. ೧೩, ೧೬ ಮತ್ತು ೧೭ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಬೀದಿಬದಿ ವ್ಯಾಪಾರಸ್ಥರಿಗೆ ಅನುಕೂಲವಾಗುವಂತೆ ನಗರಸಭೆ ಅನುದಾನದಲ್ಲಿ ಫುಟ್‌ಕೋರ್ಟ್ ನಿರ್ಮಿಸಲಾಗಿದ್ದು, ಪ್ರಸ್ತುತ ಬೇಡಿಕೆಯಂತೆ ಒಟ್ಟು ೨೬ ವ್ಯಾಪಾರಿಗಳಿಗೆ ಒಟ್ಟು ೧೬ ಮೀಟರ್ ಉದ್ದ ಹಾಗು ೮ ಮೀಟರ್ ಅಗಲ ವಿಸ್ತೀರ್ಣದಲ್ಲಿ ಫುಟ್‌ಕೋರ್ಟ್ ನಿರ್ಮಿಸಲಾಗಿದೆ. ಅಗತ್ಯವಿರುವ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಇದು ನಗರಸಭೆ ವತಿಯಿಂದ ನಿರ್ಮಿಸಲಾಗಿರುವ ಮೊದಲ ಫುಟ್‌ಕೋರ್ಟ್ ಆಗಿದ್ದು, ಹಳೇನಗರದ ಬಸವೇಶ್ವರ ವೃತ್ತ ಹಾಗು ಜನ್ನಾಪುರ ವಾಣಿಜ್ಯ ರಸ್ತೆಯಲ್ಲಿ ಫುಟ್‌ಕೋರ್ಟ್‌ಗಳ ನಿರ್ಮಾಣಕ್ಕೆ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. 

ಜ.೨೬ರಂದು ವಿಐಎಸ್‌ಎಲ್ ವತಿಯಿಂದ ಗಣರಾಜ್ಯೋತ್ಸವ


    ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಜ.೨೬ರ ಭಾನುವಾರ ಬೆಳಿಗ್ಗೆ ೯ ಗಂಟೆಗೆ ೭೬ನೇ ಗಣ ರಾಜ್ಯೋತ್ಸವ ನಡೆಯಲಿದೆ. 
    ಪ್ರತಿ ವರ್ಷದಂತೆ ಈ ಬಾರಿ ಸಹ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ದ್ವಜಾರೋಹಣ ನೆರವೇರಿಸಲಿದ್ದು, ಕಾರ್ಖಾನೆ ಭದ್ರತಾ ಪಡೆ ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳ ತಂಡಗಳು ಪಥ ಸಂಚಲನದಲ್ಲಿ ಪಾಲ್ಗೊಳ್ಳಲಿವೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್ ಕುಮಾರ್ ಕೋರಿದ್ದಾರೆ. 

ಬಿ. ಪೂಜಾಗೆ ಪ್ರಥಮ ರ್‍ಯಾಂಕ್‌ನೊಂದಿಗೆ ಎರಡು ಚಿನ್ನದ ಪದಕ

ಭದ್ರಾವತಿ: ಕುವೆಂಪು ವಿಶ್ವವಿದ್ಯಾಲಯದ ಎಂ.ಎಸ್‌ಸಿ ಲೈಬ್ರರಿ & ಇನ್‌ಫಾರ್‌ಮೇಷನ್ ಸೈನ್ಸ್ ಸ್ನಾತಕೋತ್ತರ ಪದವಿಯಲ್ಲಿ ಬಿ. ಪೂಜಾ ಪ್ರಥಮ ರ್‍ಯಾಂಕ್‌ನೊಂದಿಗೆ ಎರಡು ಚಿನ್ನದ ಪದಕ ಪಡೆದುಕೊಂಡಿದ್ದಾರೆ. 
    ಭದ್ರಾವತಿ: ಕುವೆಂಪು ವಿಶ್ವವಿದ್ಯಾಲಯದ ಎಂ.ಎಸ್‌ಸಿ ಲೈಬ್ರರಿ & ಇನ್‌ಫಾರ್‌ಮೇಷನ್ ಸೈನ್ಸ್ ಸ್ನಾತಕೋತ್ತರ ಪದವಿಯಲ್ಲಿ ಬಿ. ಪೂಜಾ ಪ್ರಥಮ ರ್‍ಯಾಂಕ್‌ನೊಂದಿಗೆ ಎರಡು ಚಿನ್ನದ ಪದಕ ಪಡೆದುಕೊಂಡಿದ್ದಾರೆ. 
    ವಿಶ್ವವಿದ್ಯಾಲಯದ ೩೪ನೇ ಘಟಿಕೋತ್ಸವದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ರವರು ಪೂಜಾರಿಗೆ ಚಿನ್ನದ ಪದಕ ಪ್ರದಾನ ಮಾಡಿದರು. ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ನಿವೃತ್ತ ಕುಲಪತಿ ಪ್ರೊ. ರಾಮ್ ರಾಮಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಪೂಜಾ ನಗರದ ನ್ಯೂಟೌನ್ ತರಂಗ ಕಿವುಡು ಮಕ್ಕಳ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕ ಎಂ.ಜಿ ಬಸವರಾಜ ಮತ್ತು ನಗರಸಭೆ ವ್ಯಾಪ್ತಿಯ ಬೊಮ್ಮನಕಟ್ಟೆ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ಪ್ರೇಮಮ್ಮ ದಂಪತಿ ಪುತ್ರಿಯಾಗಿದ್ದಾರೆ. 

ಕನಕಮಂಟಪ ಮೈದಾನದಲ್ಲಿ ೭೬ನೇ ಗಣರಾಜ್ಯೋತ್ಸವ



    ಭದ್ರಾವತಿ : ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಜ. ೨೬ರ ಭಾನುವಾರ ಬೆಳಿಗ್ಗೆ ೯ ಗಂಟೆಗೆ ಹಳೇನಗರದ ಕನಕಮಂಟಪ ಮೈದಾನದಲ್ಲಿ ೭೬ನೇ ಗಣರಾಜ್ಯೋತ್ಸವ ಹಮ್ಮಿಕೊಳ್ಳಲಾಗಿದೆ. 
    ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಲಿದ್ದು, ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದ ಪೂರ್‍ಯಾನಾಯ್ಕ ಉದ್ಘಾಟಿಸಲಿದ್ದಾರೆ. ತಹಸೀಲ್ದಾರ್ ಪರುಸಪ್ಪ ಕುರುಬರ ಧ್ವಜಾರೋಹಣ ನೆರವೇರಿಸಲಿದ್ದಾರೆ. 
    ಜಿಲ್ಲಾ ಉಸ್ತುವಾರ ಸಚಿವ ಮಧು ಬಂಗಾರಪ್ಪ, ಸಂಸದ ಬಿ.ವೈ ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಬಲ್ಕೀಷ್ ಬಾನು, ಡಿ.ಎಸ್ ಅರುಣ್, ಡಾ. ಧನಂಜಯ ಸರ್ಜಿ, ಎಸ್.ಎಲ್ ಭೋಜೇಗೌಡ, ಭಾರತಿ ಶೆಟ್ಟಿ, ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ತಾಲೂಕು ಬಗರ್ ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್ ಮತ್ತು ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು. 

ದೇಶವನ್ನು ಸರಿದಾರಿಯಲ್ಲಿ ಕೊಂಡೊಯ್ಯುವ ಸಮರ್ಥ ಸರ್ಕಾರ ರಚನೆ ನಮ್ಮೆಲ್ಲರ ಜವಾಬ್ದಾರಿ : ನ್ಯಾ. ಡಿ. ರಾಘವೇಂದ್ರ

ಭದ್ರಾವತಿ ತಾಲೂಕು ಆಡಳಿತ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರು, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಡಿ. ರಾಘವೇಂದ್ರ ಉದ್ಘಾಟಿಸಿದರು. 
    ಭದ್ರಾವತಿ: ಯಾರು ಈ ದೇಶವನ್ನು ಸಮರ್ಥವಾಗಿ, ಸರಿದಾರಿಯಲ್ಲಿ ಕೊಂಡೊಯ್ಯುತ್ತಾರೋ ಅಂತಹ ಸರ್ಕಾರವನ್ನು ನಾವೆಲ್ಲರೂ ಸೇರಿ ರಚಿಸಿಕೊಳ್ಳಬೇಕು ಎಂದು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷರು, ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಡಿ. ರಾಘವೇಂದ್ರ ಹೇಳಿದರು. 
    ಅವರು ಶನಿವಾರ ತಾಲೂಕು ಆಡಳಿತ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. 
    ಈ ದೇಶದಲ್ಲಿ ನಮ್ಮ ಸಂವಿಧಾನ ಪ್ರತಿಯೊಬ್ಬರಿಗೂ ಮತ ಚಲಾಯಿಸುವ ಹಕ್ಕು ನೀಡಿದೆ. ಈ ಹಕ್ಕು ನಾವೆಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು. ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಸರ್ಕಾರದ ರಚನೆಯಲ್ಲಿ ಪಾಲ್ಗೊಳ್ಳಬೇಕೆಂದರು. 
    ಮತದಾರರ ಪ್ರತಿಜ್ಞಾ ವಿಧಿ ಬೋಧಿಸಿದ ತಾಲೂಕು ಕಾನೂನು ಸೇವೆಗಳ ಸಮಿತಿ ಕಾರ್ಯದರ್ಶಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿ. ರವಿಕುಮಾರ್ ಮಾತನಾಡಿ, ಮತದಾನದ ಮಹತ್ವ ಹಾಗು ಜಾಗೃತಿ ಮೂಡಿಸುವುದು ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ದೇಶವಾಗಿದೆ. ಅದರಲ್ಲೂ ಯುವ ಮತದಾರರಲ್ಲಿ ಈ ಕುರಿತು ಹೆಚ್ಚಿನ ಅರಿವು ಮೂಡಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ಚುನಾವಣೆ ಆಯೋಗ ಮುಂದಿನ ದಿನಗಳಲ್ಲಿ ಕಾಲೇಜುಗಳಲ್ಲಿ ಈ ಕಾರ್ಯಕ್ರಮ ಆಯೋಜಿಸುವುದು ಸೂಕ್ತವಾಗಿದೆ. ಈ ನಿಟ್ಟಿನಲ್ಲಿ ಕಾನೂನು ಸೇವೆಗಳ ಸಮಿತಿ ಸಹ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದರು. 
        ತಹಸೀಲ್ದಾರ್ ಪರುಸಪ್ಪ ಕುರುಬರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ಸಹಾಯಕ ಸರ್ಕಾರಿ ಅಭಿಯೋಜಕ ವಿ. ಪ್ರಸನ್ನ ಕುಮಾರ್, ತಾಲೂಕು ಪಂಚಾಯಿತಿ ಅಧಿಕಾರಿ ಉಪೇಂದ್ರ ಬಾಬು, ಉಪ ತಹಸೀಲ್ದಾರ್ ರಾಜ್ ಅರಸು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 
    ಉಪ ತಹಸೀಲ್ದಾರ್ ಮಂಜಾನಾಯ್ಕ ಸ್ವಾಗತಿಸಿ, ಸುಮತಿ ಕಾರಂತ್ ಮತ್ತು ಸಂಗಡಿಗರು ಪ್ರಾರ್ಥಿಸಿದರು. 
 

ಭದ್ರಾವತಿ ತಾಲೂಕು ಆಡಳಿತ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿ ವತಿಯಿಂದ ತಹಸೀಲ್ದಾರ್ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿ(ಸ್ಮಾರ್ಟ್ ಕಾರ್ಡ್) ವಿತರಿಸಲಾಯಿತು. 

Friday, January 24, 2025

ಜ.೨೬ರಂದು ೧೨ ಅಡಿ ಎತ್ತರದ ಅಂಬೇಡ್ಕರ್ ಕಂಚಿನ ಪ್ರತಿಮೆ, ಪೌರಕಾರ್ಮಿಕರ ವಸತಿ ಸಮುಚ್ಛಯ ಉದ್ಘಾಟನೆ

ಭದ್ರಾವತಿ ನಗರದ ಬಿ.ಎಚ್ ರಸ್ತೆ, ಅಂಡರ್ ಬ್ರಿಡ್ಜ್ ಬಳಿ ಕಳೆದ ೨ ತಿಂಗಳ ಹಿಂದೆ(ಅಕ್ಟೋಬರ್-೨೦೨೪) ಹಳೇಯ ಪ್ರತಿಮೆ ಬದಲಿಸಿ ಹೊಸ ಪ್ರತಿಮೆ ಪ್ರತಿಷ್ಠಾಪಿಸುವ ಕಾರ್ಯ ಆರಂಭಿಸಲಾಗಿತ್ತು. 
    ಭದ್ರಾವತಿ : ನಗರದ ಬಿ.ಎಚ್ ರಸ್ತೆ, ಅಂಡರ್ ಬ್ರಿಡ್ಜ್ ಬಳಿ ಹಳೇಯ ಪ್ರತಿಮೆ ಬದಲಿಸಿ ಪ್ರತಿಷ್ಠಾಪಿಸಲಾಗಿರುವ ೧೨ ಅಡಿ ಎತ್ತರದ ಹಾಗು ನೈಜತೆ ಹೋಲುವ ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್‌ರವರ ಕಂಚಿನ ಪ್ರತಿಮೆ ಉದ್ಘಾಟನೆ ಹಾಗು ಖಾಸಗಿ ಬಸ್ ನಿಲ್ದಾಣದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ನಾಮಫಲಕ ಉದ್ಘಾಟನೆ ಮತ್ತು ರಂಗಪ್ಪ ವೃತ್ತದ ಜೈ ಭೀಮ್ ನಗರದಲ್ಲಿ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ನಿರ್ಮಿಸಿರುವ ವಸತಿ ಸಮುಚ್ಛಯಗಳ ಉದ್ಘಾಟನೆ ಜ.೨೬ರ ಭಾನುವಾರ ಗಣರಾಜ್ಯೋತ್ಸವ ದಿನದಂದು ನಡೆಯಲಿದೆ. 
    ನಗರಸಭೆ ವತಿಯಿಂದ ಒಟ್ಟು ೫೪ ಲಕ್ಷ ರು. ವೆಚ್ಚದಲ್ಲಿ ಪ್ರತಿಷ್ಠಾಪಿಸಲಾಗಿರುವ ಡಾ.ಬಿ.ಆರ್ ಅಂಬೇಡ್ಕರ್‌ರವರ ಹೊಸ ಪ್ರತಿಮೆ ಮಧ್ಯಾಹ್ನ ೧೨ ಗಂಟೆಗೆ ಉದ್ಘಾಟನೆಗೊಳ್ಳಲಿದ್ದು, ಅಲ್ಲದೆ ಖಾಸಗಿ ಬಸ್ ನಿಲ್ದಾಣದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣನವರ ನಾಮಫಲಕ ಅನಾವರಣಗೊಳ್ಳಲಿದೆ. ಇದಕ್ಕೂ ಮೊದಲು ಬೆಳಿಗ್ಗೆ ೮.೩೦ಕ್ಕೆ ಆರ್.ಜಿ.ಆರ್.ಎಚ್.ಸಿ.ಎಲ್ ವತಿಯಿಂದ ಒಟ್ಟು ೫.೬೦ ಕೋಟಿ ರು. ವೆಚ್ಚದಲ್ಲಿ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ನಿರ್ಮಿಸಲಾಗಿರುವ ವಸತಿ ಸಮುಚ್ಛಯಗಳ ಉದ್ಘಾಟನೆ ನಡೆಯಲಿದೆ. 
    ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ, ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಜೆಡ್ ಜಮೀರ್ ಅಹಮದ್ ಖಾನ್, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಮತ್ತು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ಅಧ್ಯಕ್ಷರಾದ ಶಾಸಕ ಗೋಪಾಲಕೃಷ್ಣ ಬೇಳೂರು ಉಪಸ್ಥಿತರಿರುವರು. 
    ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆ ವಹಿಸಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದ ಬಿ.ವೈ ರಾಘವೇಂದ್ರ, ಶಾಸಕರಾದ ಶಾರದ ಪೂರ್‍ಯಾನಾಯ್ಕ, ಎಸ್.ಎಲ್ ಭೋಜೇಗೌಡ, ಭಾರತಿಶೆಟ್ಟಿ, ಡಿ.ಎಸ್ ಅರುಣ್, ಡಾ. ಧನಂಜಯ ಸರ್ಜಿ, ಬಲ್ಕೀಷ್ ಬಾನು ಮತ್ತು ನಿಗಮ ಮಂಡಳಿಗಳ ಅಧ್ಯಕ್ಷರಾದ ಜಿ. ಪಲ್ಲವಿ, ಎಸ್. ಪಲ್ಲವಿ, ಎಸ್. ರವಿಕುಮಾರ್, ಆರ್.ಎಂ ಮಂಜುನಾಥಗೌಡ, ಡಾ. ಅಂಶುಮಂತ್, ಎಚ್.ಎಸ್ ಸುಂದರೇಶ್, ಸಿ.ಎಸ್ ಚಂದ್ರಭೂಪಾಲ, ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಬಗರ್‌ಹುಕುಂ ಸಮಿತಿ ಅಧ್ಯಕ್ಷ ಎಸ್. ಮಣಿಶೇಖರ್, ನಗರಸಭೆ ಸದಸ್ಯರಾದ ಜಾರ್ಜ್, ಬಿ.ಎಂ ಮಂಜುನಾಥ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಹಿರಿಯ ಐಎಎಸ್ ಅಧಿಕಾರಿಗಳಾದ  ದೀಪ ಚೋಳನ್, ಪ್ರಭುಲಿಂಗ ಕವಲಿಕಟ್ಟೆ, ಗುರುದತ್ತ ಹೆಗಡೆ, ಕೆಎಎಸ್ ಅಧಿಕಾರಿ ಎನ್. ಸುಶೀಲಮ್ಮ, ಜಿಲ್ಲಾ ಯೋಜನಾ ನಿರ್ದೇಶಕ ಕೆ. ರಂಗಸ್ವಾಮಿ ಮತ್ತು ನದಾಫ್ ವಹಿದಾ ಬೇಗಂ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.  ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ನಗರಸಭೆ ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್ ಕೋರಿದ್ದಾರೆ. 
 

ತರಂಗರಂಗ ಸಭಾಗೃಹ ಉದ್ಘಾಟನೆ : ಕಾರ್ಯದರ್ಶಿ ಎಸ್.ಎನ್ ಸುಭಾಷ್‌ಗೆ ಸನ್ಮಾನ

ಶಿವಭದ್ರ ಟ್ರಸ್ಟ್ ವತಿಯಿಂದ ಆರಂಭಿಸಲಾಗಿರುವ ಭದ್ರಾವತಿ ನಗರದ ನ್ಯೂಟೌನ್ ತರಂಗ ಕಿವುಡು ಮಕ್ಕಳ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಕಾರ್ಯದರ್ಶಿಯಾಗಿ ಸುಮಾರು ೪ ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಎಸ್.ಎನ್ ಸುಭಾಷ್‌ರವರನ್ನು ಶಾಲೆಯ ತರಂಗರಂಗ ಸಭಾಗೃಹದ ಉದ್ಘಾಟನೆ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ : ಶಿವಭದ್ರ ಟ್ರಸ್ಟ್ ವತಿಯಿಂದ ಆರಂಭಿಸಲಾಗಿರುವ ನಗರದ ನ್ಯೂಟೌನ್ ತರಂಗ ಕಿವುಡು ಮಕ್ಕಳ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಕಾರ್ಯದರ್ಶಿಯಾಗಿ ಸುಮಾರು ೪ ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಎಸ್.ಎನ್ ಸುಭಾಷ್‌ರವರನ್ನು ಶಾಲೆಯ ತರಂಗರಂಗ ಸಭಾಗೃಹದ ಉದ್ಘಾಟನೆ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
    ಟ್ರಸ್ಟ್ ವತಿಯಿಂದ ಲಯನ್ಸ್ ಕ್ಲಬ್ ಶುಗರ್ ಟೌನ್ ಸಹಯೋಗದೊಂದಿಗೆ ಶಾಲೆಯನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬರಲಾಗುತ್ತಿದ್ದು, ಶಿಥಿಲಗೊಂಡಿದ್ದ ಕಟ್ಟಡವನ್ನು ಶಾಸಕರ ಅನುದಾನ ಹಾಗು ಕ್ಲಬ್ ಆರ್ಥಿಕ ನೆರವಿನೊಂದಿಗೆ ನವೀಕರಣಗೊಳಿಸಲಾಗಿದೆ. ಜೊತೆಗೆ ನೂತನವಾಗಿ ತರಂಗರಂಗ ಸಭಾಗೃಹ ನಿರ್ಮಿಸಲಾಗಿದೆ. ಇದರ ಉದ್ಘಾಟನೆಯನ್ನು ನಗರದ ಹಿರಿಯ ಮುಖಂಡ, ಉದ್ಯಮಿ ಬಿ.ಕೆ ಜಗನ್ನಾಥ್ ನೆರವೇರಿಸಿದ್ದು, ಕಾರ್ಯಕ್ರಮದ ಅಂಗವಾಗಿ ಎಸ್.ಎನ್ ಸುಭಾಷ್‌ರವರನ್ನು ಸನ್ಮಾನಿಸಿ ಗೌರವಿಸಲಾಯಿತು. 
    ಶಿವಮೊಗ್ಗದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ, ವಿಕಲಚೇತನರ ಹಾಗು ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಸುವರ್ಣ ವಿ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ನಗರಸಭೆ ಮಾಜಿ ಉಪಾಧ್ಯಕ್ಷ ಚನ್ನಪ್ಪ, ಲಯನ್ಸ್ ಕ್ಲಬ್ ಶುಗರ್ ಟೌನ್ ಪ್ರಮುಖರಾದ ಡಾ.ಟಿ ನರೇಂದ್ರ ಭಟ್, ಆರ್. ಉಮೇಶ್, ಅನಂತ ಕೃಷ್ಣ ನಾಯಕ್, ತಾರಾಮಣಿ ಹಾಗು ಟ್ರಸ್ಟ್  ಸದಸ್ಯರು ಮತ್ತು ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಗಂಗೋಜಿರಾವ್ ನಿಧನ

ಗಂಗೋಜಿರಾವ್ ನಿಧನ 
    ಭದ್ರಾವತಿ : ತಾಲೂಕಿನ ಕಾಚಗೊಂಡನ ಹಳ್ಳಿ ನಿವಾಸಿ, ಸರ್ಕಾರಿ ಪಡಿತರ ವಿತರಕ ಗಂಗೋಜಿರಾವ್(೬೯) ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದರು. 
    ಪತ್ನಿ, ನಗರಸಭೆ ಮಾಜಿ ಸದಸ್ಯೆ ರೇಣುಕಾ ಸೇರಿದಂತೆ ೩ ಪುತ್ರಿಯರು, ಓರ್ವ ಪುತ್ರ ಇದ್ದಾರೆ. ಇವರ ಅಂತ್ಯಕ್ರಿಯೆ ಗ್ರಾಮದ ಹಿಂದೂ ರುದ್ರಭೂಮಿಯಲ್ಲಿ ಸಂಜೆ ನೆರವೇರಿತು. 
    ನಗರಸಭೆ ಸದಸ್ಯರಾದ ವಿ. ಕದಿರೇಶ್, ಕೆ. ಸುದೀಪ್ ಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ರಾಜ್ಯ ಸಂಘಟನಾ ಕಾರ್ಯದರ್ಶಿ ಸಿದ್ದಲಿಂಗಯ್ಯ ಸೇರಿದಂತೆ ಇನ್ನಿತರರು ಸಂತಾಪ ಸೂಚಿಸಿದ್ದಾರೆ. 

Thursday, January 23, 2025

ಅಕ್ರಮವಾಗಿ ಸಮುದಾಯ ಭವನ ನಿರ್ಮಾಣ : ಜ.೨೬ರಂದು ಶಾಸಕರಿಗೆ ಸ್ಥಳೀಯರಿಂದ ಮನವಿ

ಸಮುದಾಯ ಭವನ ವಶಕ್ಕೆ ಪಡೆಯಿರಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಿ 

ಭದ್ರಾವತಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಫಿಲ್ಟರ್‌ಶೆಡ್ ನಾಗರೀಕರ ಹಿತರಕ್ಷಣಾ ಸಮಿತಿಯ ಪ್ರಮುಖರು, ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ಮಾತನಾಡಿದರು. 
    ಭದ್ರಾವತಿ: ನಗರಸಭೆ ವ್ಯಾಪ್ತಿಯ ಜನ್ನಾಪುರ, ಫಿಲ್ಟರ್‌ಶೆಡ್‌ನಲ್ಲಿರುವ ಸರ್ಕಾರಿ ಗೋಮಾಳದ ಜಾಗದಲ್ಲಿ ಕೆಲವು ಪ್ರಭಾವಿ ವ್ಯಕ್ತಿಗಳು ೩೦*೮೦ ಅಡಿ ಅಳತೆಯ ಜಾಗದಲ್ಲಿ ಕಾನೂನು ಬಾಹಿರವಾಗಿ ನಿರ್ಮಿಸಿರುವ ಸಮುದಾಯ ಭವನ ತಾಲೂಕು ಆಡಳಿತ ವಹಿಸಿಕೊಂಡು ಜನ್ನಾಪುರದ ಸ್ಥಳೀಯ ನಾಗರೀಕರಿಗೆ ಶುಭ ಸಮಾರಂಭಗಳು ಹಾಗೂ ಇತರೆ ಸಣ್ಣಪುಟ್ಟ ಕಾರ್ಯಕ್ರಮ ರಿಯಾಯಿತಿ ದರದಲ್ಲಿ ನಡೆಸಲು ಅವಕಾಶ ಮಾಡಿಕೊಡುವುದರ ಜೊತೆಗೆ ಅಕ್ರಮವಾಗಿ ಸಮುದಾಯ ಭವನವ ನಿರ್ಮಿಸಿರುವವರ ವಿರುದ್ಧ ಹಾಗೂ ಈ ಅಕ್ರಮಕ್ಕೆ ಕುಮ್ಮಕ್ಕು ನೀಡಿರುವ ನಗರಸಭೆ ಹಾಗೂ ತಾಲೂಕು ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿ ಜ.೨೬ರಂದು ಕನಕಮಂಟಪ ಮೈದಾನದಲ್ಲಿ ಶಾಸಕರಿಗೆ ಸ್ಥಳೀಯ ನಿವಾಸಿಗಳೊಂದಿಗೆ ಮನವಿ ಮಾಡಲಾಗುವುದು ಎಂದು ಫಿಲ್ಟರ್‌ಶೆಡ್ ನಿವಾಸಿ, ಸಾಮಾಜಿಕ ಹೋರಾಟಗಾರ ಶಶಿಕುಮಾರ್ ಗೌಡ ತಿಳಿಸಿದರು. 
    ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಸಾರ್ವಜನಿಕರ ಶಾಸಕರ ಮತ್ತು ಸಂಸದರ ಅನುದಾನಗಳನ್ನು ಪಡೆದುಕೊಂಡು ಮೂರು ಅಂತಸ್ತಿನ ಸಮುದಾಯ ಭವನವನ್ನು ನಿರ್ಮಿಸಿ ಖಾಸಗಿ ಸಮುದಾಯ ಭವನದ ರೀತಿ ಮಾರ್ಪಾಡು ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ, ಕಳೆದ ಒಂದು ವರ್ಷದಿಂದ ಫಿಲ್ಟರ್‌ಶೆಡ್ ನಾಗರೀಕರ ಹಿತರಕ್ಷಣಾ ಸಮಿತಿಯಿಂದ ಹೋರಾಟ ಮಾಡುತ್ತಿದ್ದು, ಇಲ್ಲಿಯವರೆಗೂ ಸಂಬಂಧಪಟ್ಟ ಅಧಿಕಾರಿಗಳು ಕಾನೂನು ಬಾಹಿರವಾಗಿ ಸಮುದಾಯಭವನ ನಿರ್ಮಿಸಿರುವವರ ವಿರುದ್ಧ ಕ್ರಮ ತೆಗೆದುಕೊಂಡಿರುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 
    ಸರ್ಕಾರದ ಜಾಗಗಳಲ್ಲಿ ಸಮುದಾಯ ಭವನ ಅಥವಾ ಇನ್ನಿತರೆ ಯಾವುದೇ ಕಟ್ಟಡಗಳನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ ಸಂಬಂಧಪಟ್ಟ ತಾಲೂಕು ಆಡಳಿತ, ಕೊಳಚೆ ಮಂಡಳಿ(ಸ್ಲಂ ಬೋರ್ಡ್), ನಗರಸಭೆ ವತಿಯಿಂದ ಅನುಮತಿ ಪತ್ರ ಪಡೆದುಕೊಳ್ಳುವುದು ಕಡ್ಡಾಯವಾಗಿರುತ್ತದೆ. ಅಲ್ಲದೆ ಶಾಸಕರ ಮತ್ತು ಸಂಸದರ ಅನುದಾನ ಸಾರ್ವಜನಿಕರ ಉದ್ದೇಶಕ್ಕಾಗಿ ಪಡೆಯುವ ಸಂದರ್ಭದಲ್ಲಿ ಟ್ರಸ್ಟ್ ನೊಂದಣಿಯಾಗಿರಬೇಕು. ನಿರ್ಮಾಣವಾಗುತ್ತಿರುವ ಜಾಗಕ್ಕೆ ಖಾತೆಯಾಗಿರಬೇಕು. ಇವುಗಳಲ್ಲಿ ಯಾವುದೂ ಆಗದೇ ಸಮುದಾಯಭವನ ನಿರ್ಮಾಣ ಮಾಡಿರುವವರು ೨೦೧೯-೨೦೨೦ರಲ್ಲಿ ಸಂಸದರ ಹಾಗೂ ಶಾಸಕರ ಅನುದಾನ ಪಡೆದುಕೊಂಡಿರುತ್ತಾರೆ. ೨೦೨೨-೨೦೨೩ರಲ್ಲಿ ಟ್ರಸ್ಟ್ ನೊಂದಣಿ ಮಾಡಿಕೊಂಡಿರುತ್ತಾರೆ. ನಗರಸಭೆವತಿಯಿಂದ ೨೦೨೪ ಫೆಬ್ರವರಿಯಲ್ಲಿ ಅಂತರಘಟ್ಟಮ್ಮ ದೇವಸ್ಥಾನದ ಹೆಸರಿನಲ್ಲಿ ಸಂಬಂಧಪಟ್ಟ ಜಾಗಕ್ಕೆ ಖಾತೆ ಮಾಡಿಸಿಕೊಂಡಿರುತ್ತಾರೆ. ಇವೆಲ್ಲವೂ ಕೂಡ ಒಂದಕ್ಕೊಂದು ಸಂಬಂಧವಿಲ್ಲದೆ ಇರುವುದರಿಂದ ಸಂಬಂಧಪಟ್ಟವರ ವಿರುದ್ಧ ಕಾನೂನು ರೀತಿ ಕ್ರಮ ತೆಗೆದುಕೊಳ್ಳುವಂತೆ ಹಲವು ಬಾರಿ ಮನವಿ ಮಾಡಿದ್ದು, ಆದರೆ ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ದೂರಿದರು. 
    ಪ್ರತಿಕಾಗೋಷ್ಠಿಯಲ್ಲಿ ಸ್ಥಳೀಯ ಪ್ರಮುಖರಾದ ಬಿ.ಜಿ ಉಮೇಶ್, ಸವಿತಾ ಉಮೇಶ್, ಸತೀಶ್ ಪೂಜಾರಿ, ಮಹಾದೇವಿ, ದಿವ್ಯಶ್ರೀ, ಗೋಪಾಲ್‌ರಾವ್, ಶಶಿಧರ್, ಜಯಲಕ್ಷ್ಮೀ, ಮಹಾಲಕ್ಷ್ಮಿ, ಸಣ್ಣಮ್ಮ, ಪಾರ್ವತಿಬಾಯಿ, ಜಯಂತಿ, ನಾಗೋಜಿರಾವ್, ಪರಮೇಶ್ವರ್, ಇಂದ್ರಮ್ಮ, ಕುಮಾರ್ ರಾವ್, ಮೋಹನ್‌ಕುಮಾರ್, ಉಮೇಶ್, ಶಿವಶಂಕರ್, ಲಕ್ಷ್ಮಿಬಾಯಿ, ಸುಭದ್ರಬಾಯಿ, ಜಯಮ್ಮ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಜಮೀನಿಗೆ ವಿದ್ಯುತ್ ಪೂರೈಸಿಕೊಳ್ಳುವ ವಿಚಾರದಲ್ಲಿ ಜಗಳ : ಗ್ರಾ.ಪಂ. ಮಾಜಿ ಸದಸ್ಯ ಮೃತ

ಮೃತಪಟ್ಟಿರುವ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಶಾಂತಕುಮಾರ್ 
    ಭದ್ರಾವತಿ: ಜಮೀನಿಗೆ ವಿದ್ಯುತ್ ಪರಿವರ್ತಕ(ಟ್ರಾನ್ಸ್ ಫಾರ್ಮಾರ್)ದಿಂದ ವಿದ್ಯುತ್ ಪೂರೈಸಿಕೊಳ್ಳುವ ವಿಚಾರದಲ್ಲಿ ಅಕ್ಕಪಕ್ಕದ ಜಮೀನಿನವರ ನಡುವೆ ಜಗಳ ನಡೆದು ವಿಕೋಪಕ್ಕೆ ತಿರುಗಿ ಹಲ್ಲೆ ನಡೆದಿರುವ ಪರಿಣಾಮ ಗ್ರಾಮ ಪಂಚಾಯಿತಿ ಮಾಜಿ ಸದಸ್ಯನೋರ್ವ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ನಡೆದಿದೆ. 
    ದೊಡ್ಡೇರಿ ಗ್ರಾಮದ ನಿವಾಸಿ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಶಾಂತಕುಮಾರ(೩೫) ಮೃತಪಟ್ಟಿರುವ ವ್ಯಕ್ತಿಯಾಗಿದ್ದು,  ಘಟನೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಮಧುರವರ ಪತಿ ಲೇಪಾಕ್ಷಿ (೪೦), ಅತೀಶ್, ಅಭಿಲಾಷ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಇವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಇಬ್ಬರಿಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
    ಘಟನೆಗೆ ಸಂಬಂಧಿಸಿದಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ೧೦ ಜನರ ವಿರುದ್ದ ಎರಡು ಪ್ರತ್ಯೇಕ ದೂರುಗಳು ದಾಖಲಾಗಿವೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
    ಘಟನಾ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್ ಕುಮಾರ್ ಭೂಮರೆಡ್ಡಿ, ಉಪಾಧೀಕ್ಷಕ ಕೆ.ಆರ್ ನಾಗರಾಜು, ಗ್ರಾಮಾಂತರ ಠಾಣೆ ನಿರೀಕ್ಷಕ ಜಗದೀಶ್ ಹಂಚಿನಾಳ್, ಪೇಪರ್‌ಟೌನ್ ಠಾಣೆ ನಿರೀಕ್ಷಕಿ ನಾಗಮ್ಮ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಘಟನೆ ವಿವರ: 
    ಮೃತಪಟ್ಟಿರುವ ಶಾಂತಕುಮಾರ್ ಹಾಗೂ ಲೇಪಾಕ್ಷಿ ಈ ಎರಡು ಕುಟುಂಬಸ್ಥರ ಜಮೀನು ಅಕ್ಕಪಕ್ಕದಲ್ಲಿವೆ. ಶಾಂತಕುಮಾರ್ ಅವರ ಜಮೀನಿನಲ್ಲಿ ವಿದ್ಯುತ್ ಪರಿವರ್ತಕವಿದ್ದು,  ಈ ಪರಿವರ್ತಕದ ಮೂಲಕ ಲೇಪಾಕ್ಷಿ ಕುಟುಂಬದ ಜಮೀನಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಈ ಪರಿವರ್ತಕ ಹಾಳಾಗಿದ್ದು, ಈ ವಿಚಾರದಲ್ಲಿ ಸಂಜೆ ಜಮೀನಿನಲ್ಲಿಯೇ ಗಲಾಟೆಯಾಗಿದ್ದು, ಕೈ ಕೈ ಮಿಲಾವಣೆಯಾಗಿದೆ. ತದನಂತರ ಎಮ್ಮೆದೊಡ್ಡಿ ಗ್ರಾಮದ ಮೊರಾರ್ಜಿ ದೇಸಾಯಿ ಶಾಲೆ ಸಮೀಪ ಎರಡೂ ಗುಂಪುಗಳ ನಡುವೆ ಮಾರಾಮಾರಿಯಾಗಿದೆ. ಇದು ವಿಕೋಪಕ್ಕೆ ತಿರುಗಿ ಮಚ್ಚಿನಿಂದ ಶಾಂತಕುಮಾರ್ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಶಾಂತಕುಮಾರ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಅಸುನೀಗಿದ್ದಾರೆ.
    ತದನಂತರ ಲೇಪಾಕ್ಷಿ ಮನೆಗೆ ಬೆಂಕಿ ಹಚ್ಚಲು ಯತ್ನಿಸಲಾಗಿದೆ. ಮನೆಗೆ ಹೊತ್ತಿದ್ದ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದೆ. ಎರಡು ಬೈಕ್‌ಗಳನ್ನು ಜಖಂಗೊಳಿಸಲಾಗಿದೆ ಎಂದು ತಿಳಿದುಬಂದಿದೆ.
    ಘಟನೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಪಹರೆ ಹಾಕಲಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿಯೇ ಬೀಡುಬಿಟ್ಟಿದ್ದಾರೆ.

ಅಂಬೇಡ್ಕರ್ ಭವನ ಸಹ ಉದ್ಘಾಟಿಸಿ, ಕಾಗೋಡು ತಿಮ್ಮಪ್ಪರಿಗೆ ಭಾರತ ರತ್ನ ನೀಡಿ

ಜ.೨೬ರಂದು ಡಿವೈಎಸ್ಪಿ ಕಛೇರಿ ಮುಂಭಾಗ ಪ್ರತಿಭಟನಾ ಧರಣಿ ಸತ್ಯಾಗ್ರಹ : ಬಿ.ಎನ್ ರಾಜು

ಭದ್ರಾವತಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಮಾತನಾಡಿದರು. 
    ಭದ್ರಾವತಿ : ನಗರದ ಬಿ.ಎಚ್ ರಸ್ತೆ, ಅಂಡರ್ ಬ್ರಿಡ್ಜ್ ಬಳಿ ಪ್ರತಿಷ್ಠಾಪಿಸಲಾಗಿರುವ ನೂತನ ಅಂಬೇಡ್ಕರ್ ಪ್ರತಿಮೆ ಉದ್ಘಾಟನೆ ಜೊತೆಗೆ ಮುಕ್ತಾಯ ಹಂತದಲ್ಲಿರುವ ಅಂಬೇಡ್ಕರ್ ಭವನ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ಉದ್ಘಾಟಿಸಬೇಕೆಂದು ಹಾಗು ಸಮಾಜವಾದಿ ನಾಯಕ, ಹಿರಿಯ ಮುತ್ಸದ್ದಿ ಕಾಗೋಡು ತಿಮ್ಮಪ್ಪನವರಿಗೆ ಕೇಂದ್ರ ಸರ್ಕಾರ ಭಾರತರತ್ನ ಪ್ರಶಸ್ತಿ ನೀಡಬೇಕೆಂದು ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು ಆಗ್ರಹಿಸಿದರು. 
    ಈ ಕುರಿತು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಡಾ. ಬಿ.ಆರ್ ಅಂಬೇಡ್ಕರ್‌ರವರು ೩೬ ಪದವಿ ಪಡೆದ ಪ್ರಪಂಚದಲ್ಲಿಯೇ ಮಹಾಜ್ಞಾನಿಯಾಗಿದ್ದಾರೆ. ಅಲ್ಲದೆ ಪ್ರಪಂಚದ ವಿವಿಧ ದೇಶಗಳಲ್ಲಿ ಅತಿ ಹೆಚ್ಚು ಗೌರವಕ್ಕೆ ಪಾತ್ರರಾಗಿದ್ದು,  ದಲಿತ ಚಳುವಳಿಗಳು ಹುಟ್ಟಿದ ನಗರದಲ್ಲಿ ಇವರ ಹೆಸರಿನಲ್ಲಿ ಸುಸಜ್ಜಿತವಾದ ಭವನ ನಿರ್ಮಿಸಬೇಕೆಂದು ಕಳೆದ ಸುಮಾರು ೩೦ ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದ ಪರಿಣಾಮ ೨೦೧೮ರಲ್ಲಿ ಭವನದ ಕಾಮಗಾರಿ ಆರಂಭಿಸಿದ್ದು, ಆದರೆ ಇದುವರೆಗೂ ಕಾಮಗಾರಿಯನ್ನು ಪೂರೈಸದೆ ನಿರ್ಲಕ್ಷ್ಯವಹಿಸಿರುವುದು ಖಂಡನೀಯ ಎಂದರು. 
    ನಗರಸಭೆ ಸಭಾಂಗಣದಲ್ಲಿ ಜ.೨೧ರಂದು ನಡೆದ ಸಭೆಯಲ್ಲಿ ನಗರದ ಬಿ.ಎಚ್ ರಸ್ತೆ, ಅಂಡರ್ ಬ್ರಿಡ್ಜ್ ಬಳಿ ಪ್ರತಿಷ್ಠಾಪಿಸಲಾಗಿರುವ ನೂತನ ಅಂಬೇಡ್ಕರ್ ಪ್ರತಿಮೆ ಉದ್ಘಾಟನೆ ಮುಂದಿನ ೧ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಆಹ್ವಾನಿಸಿ ನೆರವೇರಿಸುವಂತೆ ಸಂಘ-ಸಂಸ್ಥೆಗಳ ಮುಖಂಡರು ಒತ್ತಾಯಿಸಿದ ಮೇರೆಗೆ ಶಾಸಕರು ಒಪ್ಪಿಗೆ ಸೂಚಿಸಿದ್ದು, ಇದೆ ಸಂದಭದಲ್ಲಿ ಅಂಬೇಡ್ಕರ್ ಭವನ ಕಾಮಗಾರಿಯನ್ನು ತ್ವರಿತವಾಗಿ ಕೈಗೊಂಡು ಪ್ರತಿಮೆ ಉದ್ಘಾಟನೆ ಜೊತೆಗೆ ಭವನ ಸಹ ಉದ್ಘಾಟಿಸಬೇಕೆಂದು ಆಗ್ರಹಿಸಿದರು. 
    ಕಾಗೋಡು ತಿಮ್ಮಪ್ಪರಿಗೆ ಭಾರತರತ್ನ ನೀಡಲಿ: 
    ದೇಶಕಂಡ ಅತ್ಯುತ್ತಮ ರಾಜಕಾರಣಿ, ಸಮಾಜವಾದಿ ಮತ್ತು ಕಾಗೋಡು ಚಳುವಳಿ ನಾಯಕ ಕಾಗೋಡು ತಿಮ್ಮಪ್ಪನವರಿಗೆ ಕೇಂದ್ರ ಸರ್ಕಾರ ಭಾರತರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಒತ್ತಾಯಿಸಿದರು. 
    ೯೪ಸಿ ಮತ್ತು ೯೪ಸಿಸಿ ಯೋಜನೆಯಲ್ಲಿ ಬಡವರಿಗೆ ನಿವೇಶನಗಳ ರೂವಾರಿ, ಬಗರ್‌ಹುಕುಂ ಮತ್ತು ಅರಣ್ಯ ಜಮೀನುಗಳ ಲಕ್ಷಾಂತರ ಬಡವರಿಗೆ ಆಶ್ರಯದಾತ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ ಮತ್ತು ಇತರೆ ಇಲಾಖೆಗಳನ್ನು ಪ್ರಮಾಣಿಕವಾಗಿ ನಡೆಸಿದ ಪ್ರಜ್ಞಾವಂತ ರಾಜಕಾರಣಿ ಕಾಗೋಡುತಿಮ್ಮಪ್ಪ. ೨೦೧೩ರಲ್ಲಿ ಕರ್ನಾಟಕ ಸರ್ಕಾರದ ವಿಧಾನಸಭಾ ಅಧ್ಯಕ್ಷರಾಗಿ ದೇಶದಲ್ಲಿಯೇ ಕ್ರಾಂತಿಕಾರಿ ಸ್ಪೀಕರ್ ಎಂದು ಹೆಸರು ವಾಸಿಯಾದ ಸರಳ ಸಜ್ಜನಿಕೆಯ ಮಾನವೀಯ ಮೌಲ್ಯದ ನುರಿತ ರಾಜಕಾರಣಿ ಕಾಗೋಡು ತಿಮ್ಮಪ್ಪ. ಇವರಿಗೆ ಕುವೆಂಪು ವಿಶ್ವವಿದ್ಯಾಲಯ ಹಾಗು ಕೆಳದಿ ಶಿವಪ್ಪನಾಯ್ಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ಪದವಿ ನೀಡಿವೆ. ಈ ಹಿನ್ನಲೆಯಲ್ಲಿ ಈ ಎರಡು ವಿಶ್ವವಿದ್ಯಾಲಯಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು. 
    ಕಾಗೋಡು ತಿಮ್ಮಪ್ಪರಿಗೆ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿಯವರು ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ಈಗಾಗಲೇ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಗಿದೆ. ಈ ನಡುವೆ ಸಂಸದ ಬಿ.ವೈ ರಾಘವೇಂದ್ರರವರು ಸಹ ಕೇಂದ್ರ ಸರ್ಕಾರಕ್ಕೆ  ಮನವಿ ಮಾಡಬೇಕೆಂದು ಒತ್ತಾಯಿಸುತ್ತೇವೆ ಎಂದರು. 
    ಜಾತಿ ನಿಂದನೆ ಪ್ರಕರಣ ಡಿ.೨೬ರಂದು ಪ್ರತಿಭಟನೆ : 
    ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿನ ಪರಿಶಿಷ್ಟ ಜಾತಿಗೆ ಸೇರಿದವರ ಜಮೀನಿನಲ್ಲಿ ಅಕ್ರಮವಾಗ ಪ್ರವೇಶಿಸಿ ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳದ ಪೊಲೀಸ್ ಉಪಾಧೀಕ್ಷಕರ ನಿರ್ಲಕ್ಷ್ಯತನ ಹಾಗು ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿರ್ಯೋವರ ದುರ್ವರ್ತನೆ ಖಂಡಿಸಿ ಕಛೇರಿ  ಮುಂಭಾಗ ಜ.೨೬ರಂದು ಬೆಳಿಗ್ಗೆ ೧೧ ಗಂಟೆಗೆ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಸಿದರು. 
ಗ್ರಾಮದ ಸರ್ವೆ ನಂ. ೩೭/೧, ೩೭/೬ರಲ್ಲಿ ೧ ಎಕರೆ ೨೦ ಗುಂಟೆ ಹೊಂದಿರುವ ಪರಿಶಿಷ್ಟ ಜಾತಿಗೆ ಸೇರಿದ ನಾಗರತ್ನಮ್ಮ ಎಂಬುವರ ಜಮೀನಿನಲ್ಲಿ ಮೇಲ್ಜಾತಿಗೆ ಸೇರಿದ ಒಂದು ಕುಟುಂಬಸ್ಥರು ವಿನಾಕಾರಣ ನಾಗರತ್ನಮ್ಮನವರ ಜಮೀನಿಗೆ ಅಕ್ರಮವಾಗಿ ಪ್ರದೇಶಿಸಿ ಜಾತಿ ನಿಂದನೆ ಕೊಲೆ ಬೆದರಿಕೆ ಹಾಕುತ್ತಿದ್ದು, ಈ ಸಂಬಂಧ ಅಗತ್ಯ ಸಾಕ್ಷಿ ಸಮೇತ ಒಟ್ಟು ೩ ಬಾರಿ ದೂರು ದಾಖಲಿಸಲಾಗಿದೆ. ಆದರೆ ಪೊಲೀಸರು ಸರಿಯಾಗಿ ಪ್ರಕರಣ ದಾಖಲಿಸಿಕೊಳ್ಳದೆ ದೂರುದಾರರ ವಿರುದ್ಧವಾಗಿ ವರ್ತಿಸುತ್ತಿದ್ದು, ನ್ಯಾಯಾಲಯಕ್ಕೆ ಸರಿಯಾದ ಮಾಹಿತಿ ನೀಡದೆ ತಪ್ಪಿತಸ್ಥರಿಗೆ ನೆರವಾಗುತ್ತಿದ್ದಾರೆಂದು ದೂರಿದರು. 
ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಪೊಲೀಸ್ ಉಪಾಧೀಕ್ಷಕರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯವಹಿಸಿರುವುದು ಖಂಡನೀಯ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದರು. 
    ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಪ್ರಮುಖರು ಹಾಗು ಲಕ್ಷ್ಮೀಪುರ ಗ್ರಾಮಸ್ಥರು ಉಪಸ್ಥಿತರಿದ್ದರು.   

Wednesday, January 22, 2025

ಕಾಗೋಡು ತಿಮ್ಮಪ್ಪರಿಗೆ ಡಾಕ್ಟರೇಟ್ ಪದವಿ : ಸನ್ಮಾನ, ಗೌರವ

ಮಾನವ ಹಕ್ಕುಗಳ ಹೋರಾಟ ಸಮಿತಿಯಿಂದ ಸಂಭ್ರಮ 

ಕುವೆಂಪು ವಿಶ್ವ ವಿದ್ಯಾಲಯದಿಂದ ಬುಧವಾರ ಗೌರವ ಡಾಕ್ಟರೇಟ್ ಪದವಿ ಪಡೆದ ಹಿರಿಯ ರಾಜಕೀಯ ಮುತ್ಸದ್ದಿ, ಸಮಾಜವಾದಿ ನಾಯಕ, ವಿಧಾನಸಭೆ ಮಾಜಿ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಭದ್ರಾವತಿ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 
    ಭದ್ರಾವತಿ : ಕುವೆಂಪು ವಿಶ್ವ ವಿದ್ಯಾಲಯದಿಂದ ಬುಧವಾರ ಗೌರವ ಡಾಕ್ಟರೇಟ್ ಪದವಿ ಪಡೆದ ಹಿರಿಯ ರಾಜಕೀಯ ಮುತ್ಸದ್ದಿ, ಸಮಾಜವಾದಿ ನಾಯಕ, ವಿಧಾನಸಭೆ ಮಾಜಿ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. 
    ಸಮಿತಿ ಅಧ್ಯಕ್ಷ ಬಿ.ಎನ್ ರಾಜು ನೇತೃತ್ವದಲ್ಲಿ ಸಮಿತಿ ಪದಾಧಿಕಾರಿಗಳು, ಪ್ರಮುಖರು ಕುವೆಂಪು ವಿಶ್ವ ವಿದ್ಯಾಲಯಕ್ಕೆ ತೆರಳಿ ಕಾಗೋಡು ತಿಮ್ಮಪ್ಪನವರೊಂದಿಗೆ ಸಂಭ್ರಮ ಹಂಚಿಕೊಂಡರು. 
    ಕಳೆದ ಕೆಲವು ತಿಂಗಳುಗಳಿಂದ ಸಮಿತಿ ವತಿಯಿಂದ ಕಾಗೋಡು ತಿಮ್ಮಪ್ಪನವರಿಗೆ ಕರ್ನಾಟಕ ರತ್ನ ಸೇರಿದಂತೆ ಗೌರವಪೂರ್ವಕವಾಗಿ ಉನ್ನತ ಪ್ರಶಸ್ತಿಗಳನ್ನು ನೀಡಿ ಗೌರವಿಸುವಂತೆ ಜಿಲ್ಲಾಧಿಕಾರಿಗಳ ಕಛೇರಿ ಹಾಗು ಸಾಗರದಲ್ಲಿರುವ ಕಾಗೋಡು ತಿಮ್ಮಪ್ಪನವರ ನಿವಾಸದವರೆಗೂ ಪಾದಯಾತ್ರೆ ನಡೆಸಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. 
    ಅಲ್ಲದೆ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯಂದು ಸಮಿತಿ ವತಿಯಿಂದ ವಿಶ್ವ ಮಾನವ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಇದೀಗ ಕುವೆಂಪು ವಿಶ್ವ ವಿದ್ಯಾಲಯ ಕಾಗೋಡು ತಿಮ್ಮಪ್ಪನವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿರುವುದು ಸಂಭ್ರಮವನ್ನುಂಟು ಮಾಡಿದೆ. ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕೆಂಬುದು ಸಮಿತಿ ಒತ್ತಾಯವಾಗಿದೆ. 

ಜಾಯ್ ಶರ್ಲಿಗೆ ಕುವಿವಿ ಚಿನ್ನದ ಪದಕ

ಭದ್ರಾವತಿ ನಗರ ಜನ್ನಾಪುರ ನಿವಾಸಿ ಜಾಯ್ ಶರ್ಲಿಯವರು ಕುವೆಂಪು ವಿಶ್ವ ವಿದ್ಯಾಲಯದ ವಿಜ್ಞಾನ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. 
    ಭದ್ರಾವತಿ : ನಗರ ಜನ್ನಾಪುರ ನಿವಾಸಿ ಜಾಯ್ ಶರ್ಲಿಯವರು ಕುವೆಂಪು ವಿಶ್ವ ವಿದ್ಯಾಲಯದ ವಿಜ್ಞಾನ ಸೂಕ್ಷ್ಮಾಣು ಜೀವಶಾಸ್ತ್ರ ವಿಭಾಗದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ. 
    ಕುವೆಂಪು ವಿಶ್ವವಿದ್ಯಾಲಯದಲ್ಲಿ ಬುಧವಾರ ಆಯೋಜಿಸಲಾಗಿದ್ದ ೩೪ನೇ ಘಟಿಕೋತ್ಸವದಲ್ಲಿ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ರವರು ಚಿನ್ನದ ಪದಕ ಜಾಯ್ ಶರ್ಲಿಯವರಿಗೆ ಪ್ರಧಾನ ಮಾಡಿದರು. ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ನಿವೃತ್ತ ಕುಲಪತಿ ಪ್ರೊ. ರಾಮ್ ರಾಮಸ್ವಾಮಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಚಿನ್ನದ ಪದಕ ಪಡೆದ ಜಾಯ್ ಶರ್ಲಿಯವರನ್ನು ತಾಲೂಕಿನ ಮಾವಿನಕೆರೆ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಜಯಶ್ರೀ ಗಂಗಾಧರನ್ ಸೇರಿದಂತೆ ಇನ್ನಿತರ ಗಣ್ಯರು ಅಭಿನಂದಿಸಿದ್ದಾರೆ. 

ಪರಮೇಶ್ವರ್, ತಿಪ್ಪೇಸ್ವಾಮಿಗೆ ಸವಿತಾ ಸಮಾಜದಿಂದ ಸನ್ಮಾನ



ಶಿವಮೊಗ್ಗ ಜಿಲ್ಲಾ ಸವಿತಾ ಸಮಾಜದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಎಂ. ಪರಮೇಶ್ವರ್ ಮತ್ತು ಕೂಡ್ಲಿಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿರುವ ತಿಪ್ಪೇಸ್ವಾಮಿಯವರನ್ನು ಭದ್ರಾವತಿ ತಾಲೂಕು ಸವಿತಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.  
    ಭದ್ರಾವತಿ : ಶಿವಮೊಗ್ಗ ಜಿಲ್ಲಾ ಸವಿತಾ ಸಮಾಜದ ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಎಂ. ಪರಮೇಶ್ವರ್ ಮತ್ತು ಕೂಡ್ಲಿಗೆರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗಿ ಆಯ್ಕೆಯಾಗಿರುವ ತಿಪ್ಪೇಸ್ವಾಮಿಯವರನ್ನು ತಾಲೂಕು ಸವಿತಾ ಸಮಾಜದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.   
    ಹಳೇನಗರದ ಸವಿತಾ ಸಮಾಜದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಎಂ. ಪರಮೇಶ್ವರ್ ಮತ್ತು ತಿಪ್ಪೇಸ್ವಾಮಿಯರನ್ನು ಸನ್ಮಾನಿಸಿ ಉತ್ತಮವಾಗಿ ಸೇವೆ ಸಲ್ಲಿಸುವ ಜೊತೆಗೆ ಸಮಾಜವನ್ನು ಮತ್ತಷ್ಟು ಸಂಘಟಿಸುವ ಮೂಲಕ ಏಳಿಗೆಗೆ ಶ್ರಮಿಸುವಂತೆ ಕೋರಲಾಗಿದೆ. 
      ಸಮಾಜದ ತಾಲೂಕು ಅಧ್ಯಕ್ಷ ವಿಶ್ವನಾಥ್, ಉಪಾಧ್ಯಕ್ಷ ಓಬಳೇಶ್, ಪ್ರಧಾನ ಕಾರ್ಯದರ್ಶಿ ರೆಡ್‌ಸನ್ ರಾಜು, ಸಹ ಕಾರ್ಯದರ್ಶಿ ಮಹೇಶ್ ಕುಮಾರ್, ಖಜಾಂಚಿ ನರಸಿಂಹಮೂರ್ತಿ, ಪ್ರಮುಖರಾದ ಶಿವಶಂಕರ್, ಗೋಪಿನಾಥ್, ಶಿವಪ್ರಸಾದ್, ವೆಂಕಟೇಶ್, ಗಣೇಶ್, ಸುರೇಶ್, ಜೋರಪ್ಪ, ಎಂಪೈರ್ ಲೋಕೇಶ್ ಸೇರಿದಂತೆ ಸೇರಿದಂತೆ ಸವಿತಾ ಸಮಾಜದ ಪದಾಧಿಕಾರಿಗಳು, ಹಿರಿಯರು, ಮುಖಂಡರು ಉಪಸ್ಥಿತರಿದ್ದರು.  

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಆರೋಗ್ಯ ವಿಚಾರಿಸಿದ ಸಂಗಮೇಶ್ವರ್, ಶ್ರೀ ವಿನಯ್ ಗುರೂಜೀ

ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕರ್ನಾಟಕ ಗ್ರಾಮೀಣ ಮೂಲಕ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.  
    ಭದ್ರಾವತಿ : ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಕರ್ನಾಟಕ ಗ್ರಾಮೀಣ ಮೂಲಕ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. 
    ಚಿಕ್ಕಮಗಳೂರು ಗೌರಿಗದ್ದೆ ಆಶ್ರಮದ ಶ್ರೀ ವಿನಯ್ ಗುರೂಜೀ ಮತ್ತು ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ ಜೊತೆ ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದರು. 
ಲಕ್ಷ್ಮೀ ಹೆಬ್ಬಾಳ್ಕರ್‌ರವರು ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಕುಟುಂಬ ಸಂಬಂಧಿ ಸಹ ಆಗಿದ್ದು, ಶೀಘ್ರ ಗುಣಮುಖರಾಗುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ.

Tuesday, January 21, 2025

ಜ.23ರಂದು 12ನೇ ವರ್ಷದ ಕ್ರಿಸ್‌ಮಸ್, ನೂತನ ವರ್ಷೋತ್ಸವ




   ಭದ್ರಾವತಿ : ತೆಲುಗು ಕ್ರಿಶ್ಚಿಯನ್ ವೆಲ್‌ಫೇರ್ ಅಸೋಸಿಯೇಷನ್ ವತಿಯಿಂದ 12ನೇ ವರ್ಷದ ಕ್ರಿಸ್‌ಮಸ್ ಮತ್ತು ನೂತನ ವರ್ಷೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜ.23ರ ಗುರುವಾರ ಸಂಜೆ 5 ಗಂಟೆಗೆ ಕಾಗದ ನಗರದ ಎಂಪಿಎಂ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ.
  ಸಂಸದ ಬಿ.ವೈ ರಾಘವೇಂದ್ರ, ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಸೋಸಿಯೇಷನ್ ಸಂಸ್ಥಾಪಕ ಅಧ್ಯಕ್ಷ ಜೆ. ಭಾಸ್ಕರ ಬಾಬು ಅಧ್ಯಕ್ಷತೆ ವಹಿಸಲಿದ್ದಾರೆ.
  ಮುಖ್ಯ ಅತಿಥಿಗಳಾಗಿ ಶಾಸಕರಾದ ಬಿ.ಕೆ. ಸಂಗಮೇಶ್ವರ್, ಐವಾನ್ ಡಿಸೋಜ, ಬಲ್ಕಿಷ್ ಬಾನು, ನಗರಸಭಾ ಸದಸ್ಯ ಬಿ.ಕೆ.ಮೋಹನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ‌. ಬರ್ತಲೋಮ್, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಗಣ್ಯರು, ಕ್ರೈಸ್ತ ಮುಖಂಡರು ಗಳು ಪಾಲ್ಗೊಳ್ಳಲಿದ್ದಾರೆ. ಕ್ರೈಸ್ತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದೆ.

ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಬೀದಿ ನಾಟಕ

ಭದ್ರಾವತಿ ನ್ಯೂಟೌನ್ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಜೆ.ಸಿ ಬೋಸ್ ಇಕೋ ಕ್ಲಬ್ ವತಿಯಿಂದ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ಸಹಯೋಗದೊಂದಿಗೆ ವಿದ್ಯಾರ್ಥಿನಿಯರಿಂದ ಬೀದಿ ನಾಟಕ ಆಯೋಜಿಸಲಾಗಿತ್ತು. ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು. 
    ಭದ್ರಾವತಿ : ನಗರದ ನ್ಯೂಟೌನ್ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಜೆ.ಸಿ ಬೋಸ್ ಇಕೋ ಕ್ಲಬ್ ವತಿಯಿಂದ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ಸಹಯೋಗದೊಂದಿಗೆ ವಿದ್ಯಾರ್ಥಿನಿಯರಿಂದ ಬೀದಿ ನಾಟಕ ಆಯೋಜಿಸಲಾಗಿತ್ತು. 
    ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಬೀದಿ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿದರು. ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ವಿ.ಎಸ್ ಪಂಚಾಕ್ಷರಿ, ಇಕೋ ಕ್ಲಬ್ ನೋಡಲ್ ಅಧಿಕಾರಿ ಗಂಗಾಧರ ಮತ್ತು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು ಹಾಗೂ ಸದಸ್ಯರು, ಶಿಕ್ಷಕರು ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.  
    ಬೀದಿ ನಾಟಕದಲ್ಲಿ ಕಸ ವಿಂಗಡಣೆಯ ಮಹತ್ವ, ಭೂಕುಸಿತದಂತಹ ಪ್ರಕೃತಿ ವಿಕೋಪಗಳಿಗೆ ಕಾರಣಗಳು, ತಂಬಾಕು ಸೇವನೆಯ ದುಷ್ಪರಿಣಾಮಗಳು, ಸಂಚಾರಿ ಸಮಸ್ಯೆ, ವಾಯುಮಾಲಿನ್ಯ, ನೈರ್ಮಲ್ಯದ ಕೊರತೆಯಿಂದ ಹರಡುವ ರೋಗಗಳು, ಕೃಷಿಯಲ್ಲಿ ಹೆಚ್ಚು ರಾಸಾಯನಿಕಗಳ ಬಳಕೆಯಿಂದ ಎದುರಾಗುತ್ತಿರುವ ಸವಾಲುಗಳು ಇತ್ಯಾದಿ ವಿಷಯಗಳ ಕುರಿತು ಜಾಗೃತಿ ಮೂಡಿಸಲಾಯಿತು.
    ಸಹ ಶಿಕ್ಷಕ ದಯಾನಂದ ಸಾಗರ್, ನೆಲ್ಲಿಸರರವರ ನಿರ್ದೇಶನದಲ್ಲಿ ಜಾನಪದ ಕಲಾವಿದ ತಮಟೆ ಜಗದೀಶ್‌ರವರ ರಂಗ ಸಜ್ಜಿಕೆ ಹಾಗೂ ಸಂಗೀತದಲ್ಲಿ  ಇಕೋ ಕ್ಲಬ್ ಮಾರ್ಗದರ್ಶಿ ಶಿಕ್ಷಕಿ ಜಯಲಕ್ಷ್ಮಿಯವರ ನೇತೃತ್ವದಲ್ಲಿ ಬೀದಿ ನಾಟಕ ಜರುಗಿತು.  

ಅಂತರಗಂಗೆ ಗ್ರಾಮದಲ್ಲಿ ಜ.೨೩ರಂದು ಮೊದಲ ವಾರದ ಸಂತೆ

ಭದ್ರಾವತಿ ಅಂತರಗಂಗೆ ಗ್ರಾಮ ಪಂಚಾಯಿತಿ. 
    ಭದ್ರಾವತಿ : ನಗರದ ಪ್ರದೇಶದಿಂದ ಸುಮಾರು ೧೦ ಕಿ.ಮೀ ದೂರದಲ್ಲಿರುವ ತಾಲೂಕಿನ ಕೂಡ್ಲಿಗೆರೆ ಹೋಬಳಿ ಅಂತರಗಂಗೆ ಗ್ರಾಮ ಪಂಚಾಯಿತಿ ವತಿಯಿಂದ ಗ್ರಾಮಸ್ಥರ ಬಹಳ ವರ್ಷಗಳ ಬೇಡಿಕೆಯಾದ ವಾರದ ಸಂತೆ ಆರಂಭಿಸಲಾಗುತ್ತಿದ್ದು, ಜ.೨೩ರಂದು ಮೊದಲ ಸಂತೆ ಗ್ರಾಮದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಮುಂಭಾಗ ಹಾಗು ಗ್ರಾಮ ಪಂಚಾಯಿತಿ ಬಳಿ ಆಯೋಜಿಸಲಾಗಿದೆ. 
    ಅಂತರಗಂಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ೧೦ ಗ್ರಾಮಗಳಿದ್ದು, ಪ್ರಸ್ತುತ ಸುಮಾರು ೧೦ ಸಾವಿರ ಜನಸಂಖ್ಯೆ ಒಳಗೊಂಡಿದೆ. ಅಲ್ಲದೆ ಈ ಗ್ರಾಮ ಪಂಚಾಯಿತಿಗೆ ದೊಡ್ಡೇರಿ, ಎರೇಹಳ್ಳಿ ಹಾಗು ಮಾವಿನಕೆರೆ ಗ್ರಾಮ ಪಂಚಾಯಿತಿಗಳು ಹೊಂದಿಕೊಂಡಿವೆ. ಗ್ರಾಮಸ್ಥರು ವಾರದ ಸಂತೆಗೆ ಪ್ರತಿ ಭಾನುವಾರ ನಗರದ ಪ್ರದೇಶದ ಸುಮಾರು ೧೦ ಕಿ.ಮೀ ದೂರದ ಹೊಸಮನೆ ಸಂತೆ ಮೈದಾನದಲ್ಲಿ ನಡೆಯುವ ವಾರದ ಸಂತೆಗೆ ಬರಬೇಕಾಗಿದೆ. ಇದರಿಂದಾಗಿ ಗ್ರಾಮಸ್ಥರಿಗೆ ಸಾಕಷ್ಟು ಸಮಸ್ಯೆ ಎದುರಾಗಿದೆ. 
    ಹಲವಾರು ವರ್ಷಗಳಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿಯೇ ವಾರದ ಸಂತೆ ಆಯೋಜಿಸಬೇಕೆಂಬ ಬೇಡಿಕೆ ಗ್ರಾಮಸ್ಥರದ್ದಾಗಿತ್ತು. ಇದೀಗ ವಾರದ ಆರಂಭಿಸಲಾಗುತ್ತಿದ್ದು, ಇದರಿಂದ ಗ್ರಾಮಸ್ಥರಿಗೆ ಹೆಚ್ಚಿನ ಅನುಕೂಲವಾಗಲಿದೆ. ಅಲ್ಲದೆ ಗ್ರಾಮೀಣ ಭಾಗದ ವ್ಯಾಪಾರಸ್ಥರಿಗೆ, ಅದರಲ್ಲೂ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ. 
    ಕಾಡಂಚಿನ ಗ್ರಾಮಗಳು : 
    ಬಹುತೇಕ ಗ್ರಾಮಗಳು ಅರಣ್ಯ ವ್ಯಾಪ್ತಿಯಲ್ಲಿದ್ದು, ಈ ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಇದರಿಂದಾಗಿ ರಾತ್ರಿ ವೇಳೆ ಗ್ರಾಮಸ್ಥರ ಸಂಚಾರ ವಿರಳವಾಗಿದೆ. ಈ ಭಾಗದಲ್ಲಿ ಇನ್ನೂ ಪೂರ್ಣ ಪ್ರಮಾಣದಲ್ಲಿ ಸಾರಿಗೆ ವ್ಯವಸ್ಥೆ ಕಲ್ಪಿಸಿಲ್ಲ. ಸದಾ ಭಯಭೀತಿಯಲ್ಲಿ ಬದುಕುತ್ತಿರುವ ಗ್ರಾಮಸ್ಥರಿಗೆ ವಾರದ ಸಂತೆಯಿಂದ ಹೆಚ್ಚಿನ ಪ್ರಯೋಜನವಾಗಲಿದೆ. ದಿನನಿತ್ಯದ ಬಳಕೆ ವಸ್ತುಗಳನ್ನು ವಾರದ ಒಂದೇ ದಿನ ಖರೀದಿಸಿಕೊಂಡು ಬರಬಹುದಾಗಿದೆ.  
    ಮಾರುಕಟ್ಟೆ ಕಲ್ಪಿಸಲು ಕ್ರಮ :
    ಪ್ರಸ್ತುತ ವಾರದ ಸಂತೆಗೆ  ಗ್ರಾಮದ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಮುಂಭಾಗ ಹಾಗು ಗ್ರಾಮ ಪಂಚಾಯಿತಿ ಬಳಿ ಅವಕಾಶ ಕಲ್ಪಿಸಿಕೊಡಲಾಗಿದೆ. ವ್ಯಾಪಾರ ವಹಿವಾಟಿನ ಪ್ರಮಾಣ ನೋಡಿಕೊಂಡು ಗ್ರಾಮ ಪಂಚಾಯಿತಿ ಮುಂದಿನ ತೀರ್ಮಾನ ಕೈಗೊಳ್ಳಲಿದೆ. ಸರ್ಕಾರದ ವಿವಿಧ ಯೋಜನೆಗಳು ಹಾಗು ಗ್ರಾಮ ಪಂಚಾಯಿತಿ ಅನುದಾನದಲ್ಲಿ ಮಾರುಕಟ್ಟೆ ಅಭಿವೃದ್ಧಿಗೊಳಿಸುವ ರೂಪುರೇಷೆ ಸಿದ್ದಪಡಿಸಿಕೊಂಡಿದೆ.  
 
 
ಗ್ರಾಮ ಪಂಚಾಯಿತಿ ವತಿಯಿಂದ ಪ್ರತಿ ಗುರುವಾರ ವಾರದ ಸಂತೆ ನಡೆಸಲು ತೀರ್ಮಾನಿಸಲಾಗಿದೆ. ಸದ್ಯಕ್ಕೆ ಶ್ರೀ ರಂಗನಾಥಸ್ವಾಮಿ ದೇವಸ್ಥಾನ ಮುಂಭಾಗ ಹಾಗು ಗ್ರಾಮ ಪಂಚಾಯಿತಿ ಬಳಿ ಅವಕಾಶ ಕಲ್ಪಿಸಿಕೊಡಲಾಗಿದೆ. ಸೂಕ್ತ ಮಾರುಕಟ್ಟೆ ನಿರ್ಮಾಣಕ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಸ್ಥಳವಕಾಶಗಳಿದ್ದು, ಪ್ರಸ್ತುತ ವ್ಯಾಪಾರ ವಹಿವಾಟಿನ ಪ್ರಮಾಣ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು. ಗ್ರಾಮಸ್ಥರು, ವ್ಯಾಪಾರಸ್ಥರು ಗುರುವಾರ ನಡೆಯಲಿರುವ ವಾರದ ಸಂತೆ ಸದ್ಬಳಕೆ ಮಾಡಿಕೊಂಡು ಗ್ರಾಮ ಪಂಚಾಯಿತಿ ಅಭಿವೃದ್ಧಿಗೆ ಕೈಜೋಡಿಸಬೇಕು. 
          - ನಾಗೇಶ್, ಅಧ್ಯಕ್ಷರು, ಅಂತರಗಂಗೆ ಗ್ರಾಮ ಪಂಚಾಯಿತಿ, ಭದ್ರಾವತಿ.