ಭದ್ರಾವತಿ : ತೆಲುಗು ಕ್ರಿಶ್ಚಿಯನ್ ವೆಲ್‌ಫೇರ್ ಅಸೋಸಿಯೇಷನ್ ವತಿಯಿಂದ 12ನೇ ವರ್ಷದ ಕ್ರಿಸ್‌ಮಸ್ ಮತ್ತು ನೂತನ ವರ್ಷೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜ.23ರ ಗುರುವಾರ ಸಂಜೆ 5 ಗಂಟೆಗೆ ಕಾಗದ ನಗರದ ಎಂಪಿಎಂ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ.
ಸಂಸದ ಬಿ.ವೈ ರಾಘವೇಂದ್ರ, ಸಚಿವ ಮಧು ಬಂಗಾರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಸೋಸಿಯೇಷನ್ ಸಂಸ್ಥಾಪಕ ಅಧ್ಯಕ್ಷ ಜೆ. ಭಾಸ್ಕರ ಬಾಬು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕರಾದ ಬಿ.ಕೆ. ಸಂಗಮೇಶ್ವರ್, ಐವಾನ್ ಡಿಸೋಜ, ಬಲ್ಕಿಷ್ ಬಾನು, ನಗರಸಭಾ ಸದಸ್ಯ ಬಿ.ಕೆ.ಮೋಹನ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ. ಬರ್ತಲೋಮ್, ಸ್ಥಳೀಯ ಚುನಾಯಿತ ಪ್ರತಿನಿಧಿಗಳು, ಗಣ್ಯರು, ಕ್ರೈಸ್ತ ಮುಖಂಡರು ಗಳು ಪಾಲ್ಗೊಳ್ಳಲಿದ್ದಾರೆ. ಕ್ರೈಸ್ತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದೆ.
No comments:
Post a Comment