ಭದ್ರಾವತಿ ಕನಕಮಂಟಪ ಮೈದಾನದಲ್ಲಿ ಆಯೋಜಿಸಲಾಗಿರುವ ರಾಷ್ಟçಮಟ್ಟದ ಓಂ ಕ್ರಿಕೆರ‍್ಸ್ ಕ್ಲಬ್ ಪಂದ್ಯಾವಳಿ ಕುರಿತು ಗಿರೀಶ್ ಸೇರಿದಂತೆ ಇನ್ನಿತರರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಭದ್ರಾವತಿ: ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್‌ರವರ ಪುತ್ರ ಬಿ.ಎಸ್ ಬಸವೇಶ್‌ರವರ ಜನ್ಮದಿನದ ಅಂಗವಾಗಿ ಓಂ ಕ್ರಿಕೆರ‍್ಸ್ ಕ್ಲಬ್ ವತಿಯಿಂದ ಹಳೇನಗರದ ಕನಕಮಂಟಪ ಮೈದಾನದಲ್ಲಿ 3 ದಿನಗಳ ಕಾಲ ಟೆನ್ನಿಸ್ ಬಾಲ್ `ಓಂ ಕಪ್ ಕ್ರಿಕೆಟ್ ಪಂದ್ಯಾವಳಿ' ಆಯೋಜಿಸಲಾಗಿದೆ ಎಂದು ಓಂ ಕ್ರಿಕೆರ‍್ಸ್ ಕ್ಲಬ್ ಅಧ್ಯಕ್ಷ ಗಿರೀಶ್ ತಿಳಿಸಿದರು.
ಅವರು ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಇದು ರಾಷ್ಟçಮಟ್ಟದ ಕ್ರಿಕೆಟ್ ಪಂದ್ಯಾವಳಿಯಾಗಿದೆ. ದೇಶದ ವಿವಿಧೆಡೆಗಳಿಂದ ತಂಡಗಳು ಭಾಗವಹಿಸಲಿದ್ದು, ಜ.12ರವರೆಗೆ ಪಂದ್ಯಾವಳಿ ನಡೆಯಲಿದೆ. ಮೊದಲನೇ ಬಹುಮಾನ 2.50 ಲಕ್ಷ, ಎರಡನೇ ಬಹುಮಾನ 1.25 ಲಕ್ಷ ಹಾಗು ಮೂರನೇ ಬಹುಮಾನ 75 ಸಾವಿರ ರು. ನಗದು ಹಾಗು ಟ್ರೋಫಿ ಒಳಗೊಂಡಿದೆ ಎಂದರು.
ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿದೆ. ಪಂದ್ಯಾವಳಿ ನೇರ ಪ್ರಸಾರ ಯ್ಯೂಟೂಬ್‌ನಲ್ಲಿ ಪ್ರಸಾರವಾಗುತ್ತಿದೆ. ಜ.12ರಂದು ನಡೆಯಲಿರುವ ಪಂದ್ಯಾವಳಿ ಸಮಾರೋಪ ಸಮಾರಂಭದಲ್ಲಿ ನಟ ವಸಿಷ್ಠ ಸಿಂಹ ಭಾಗವಹಿಸಲಿದ್ದಾರೆ ಕ್ರೀಡಾಪಟುಗಳು, ಕ್ರೀಡಾಭಿಮಾನಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಕುಮಾರ್(ಮಾಸ್ಟರ್), ಅಭಿಲಾಷ್, ಚಂದ್ರಶೇಖರ್, ಶಿವು ಪಾಟೀಲ್, ಕೇಶವ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment