ಭದ್ರಾವತಿ ನಗರದ ಬಿ.ಎಚ್ ರಸ್ತೆ, ಮೀನುಗಾರರ ಬೀದಿಯಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಅಮ್ಮನವರಿಗೆ ಪ್ರತಿ ವರ್ಷದಂತೆ ಈ ಬಾರಿ ಸಹ ವೈಭವದ ಶ್ರೀ ಲಕ್ಷ್ಮೀ ಅಲಂಕಾರ ಕೈಗೊಳ್ಳಲಾಗಿತ್ತು.
ಭದ್ರಾವತಿ: ನಗರದ ಬಿ.ಎಚ್ ರಸ್ತೆ, ಮೀನುಗಾರರ ಬೀದಿಯಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಪ್ರತಿ ವರ್ಷದಂತೆ ಈ ಬಾರಿ ಸಹ ಪೊಂಗಲ್ ಹಾಗು ಸಹಸ್ರಾರು ಭಕ್ತಾಧಿಗಳಿಗೆ ಅನ್ನಸಂತರ್ಪಣೆ ನೆರವೇರಿತು.
ಮಂಗಳವಾರ ರಾತ್ರಿ ಭದ್ರಾ ನದಿಯಿಂದ ಶಕ್ತಿ ಕರಗ ತರುವುದು ಮತ್ತು ಅಗ್ನಿಕುಂಡ ತ್ರಿಶೂಲ ಮುದ್ರೆಯೊಂದಿಗೆ ದೇವಸ್ಥಾನಕ್ಕೆ ಬಂದು ಸೇರುವ ಕಾರ್ಯಕ್ರಮ ನಡೆಯಿತು.
ಭದ್ರಾವತಿ ನಗರದ ಬಿ.ಎಚ್ ರಸ್ತೆ, ಮೀನುಗಾರರ ಬೀದಿಯಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ತಿರುಪತಿ ಶ್ರೀ ವೆಂಕಟೇಶ್ವರಸ್ವಾಮಿ ಹಾಗು ಪದ್ಮಾವತಿ ಅಮ್ಮನವರನ್ನು ಕಬ್ಬಿನ ಜೊಲ್ಲೆ, ಬಾಳೆ ಗೊನೆಗಳಿಂದ ಅಲಂಕೃತಗೊಳಿಸಲಾಗಿದ್ದು, ಭಕ್ತರನ್ನು ಆಕರ್ಷಿಸಿಸಿತು
ಬೆಳಗಿನ ಜಾವ ಪೊಂಗಲ್, ನಂತರ ಮಧ್ಯಾಹ್ನ ಸುಮಾರು ೩.೩೦ರವರೆಗೂ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಿತು. ನಂತರ ಸಂಜೆ ೪ ಗಂಟೆಗೆ ಶ್ರೀ ಮಾರಿಯಮ್ಮ ದೇವಿಯ ರಾಜಬೀದಿ ಉತ್ಸವ ಮತ್ತು ಮಹಾಮಂಗಳಾರತಿಯೊಂದಿಗೆ ಪೂಜೆ ಜರುಗಿತು.
ಅಮ್ಮನವರಿಗೆ ವೈಭವದ ಶ್ರೀ ಲಕ್ಷ್ಮೀ ಅಲಂಕಾರ:
ಈ ಬಾರಿ ಅಮ್ಮನವರಿಗೆ ೧೦೦, ೫೦, ೨೦ ಹಾಗು ೧೦ ರು. ಮುಖ ಬೆಲೆಯ ನೋಟುಗಳಿಂದ ಮತ್ತು ಚಿನ್ನಾಭರಣಗಳಿಂದ ವೈಭವದ ಶ್ರೀ ಲಕ್ಷ್ಮೀ ಅಲಂಕಾರ ಕೈಗೊಳ್ಳಲಾಗಿದ್ದು, ಅಮ್ಮನವರ ಅಲಂಕಾರ ಭಕ್ತರ ಕಣ್ಮನ ಸೆಳೆಯಿತು.
ಅಲ್ಲದೆ ದೇವಸ್ಥಾನದ ಹೊರಭಾಗದಲ್ಲಿ ತಿರುಪತಿ ಶ್ರೀ ವೆಂಕಟೇಶ್ವರಸ್ವಾಮಿ ಹಾಗು ಪದ್ಮಾವತಿ ಅಮ್ಮನವರನ್ನು ಕಬ್ಬಿನ ಜೊಲ್ಲೆ, ಬಾಳೆ ಗೊನೆಗಳಿಂದ ಅಲಂಕೃತಗೊಳಿಸಲಾಗಿದ್ದು, ಭಕ್ತರನ್ನು ಆಕರ್ಷಿಸಿಸಿತು. ಅಲ್ಲದೆ ಬಹುತೇಕ ಭಕ್ತರು ಶ್ರೀ ವೆಂಕಟೇಶ್ವರಸ್ವಾಮಿ ಹಾಗು ಪದ್ಮಾವತಿ ಅಮ್ಮನವರ ಮುಂದೆ ನಿಂತು ಮೊಬೈಲ್‌ಗಳಲ್ಲಿ ಪೋಟೋ ಕ್ಲಿಕಿಸಿಕೊಂಡು ಸಂಭ್ರಮಿಸಿದರು.
ಶ್ರೀ ಮಾರಿಯಮ್ಮ ದೇವಾಲಯ ಕಮಿಟಿ ಅಧ್ಯಕ್ಷ, ಉದ್ಯಮಿ ಎ. ಮಾಧು ನೇತೃತ್ವದಲ್ಲಿ ಜಾತ್ರಾಮಹೋತ್ಸವ ನೆರವೇರಿತು. ನಗರದ ವಿವಿಧೆಡೆಗಳಿಂದ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು.
ಭದ್ರಾವತಿ ನಗರದ ಬಿ.ಎಚ್ ರಸ್ತೆ, ಮೀನುಗಾರರ ಬೀದಿಯಲ್ಲಿರುವ ಶ್ರೀ ಮಾರಿಯಮ್ಮ ದೇವಸ್ಥಾನದ ಜಾತ್ರಾ ಮಹೋತ್ಸವದ ಅಂಗವಾಗಿ ಬುಧವಾರ ಸಹಸ್ರಾರು ಮಂದಿಗೆ ಅನ್ನಸಂತರ್ಪಣೆ ನೆರವೇರಿತು.
No comments:
Post a Comment