ಜನ್ನಾಪುರ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ಮನವಿ
ಭದ್ರಾವತಿ ನಗರಸಭೆ ವಾರ್ಡ್ ನಂ.೨೯ರ ಜನ್ನಾಪುರ ಕೆರೆ ಪ್ರವಾಸಿಗರ ತಾಣವನ್ನಾಗಿ ಅಭಿವೃದ್ಧಿಪಡಿಸಲು ತಕ್ಷಣ ಟೆಂಡರ್ ಪ್ರಕ್ರಿಯೆ ಆರಂಭಿಸುವಂತೆ ಒತ್ತಾಯಿಸಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್ ಸುಂದರೇಶ್‌ರವರಿಗೆ ನಗರದ ಜನ್ನಾಪುರ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ವತಿಯಿಂದ ಮನವಿ ಸಲ್ಲಿಸಲಾಗಿದೆ.
ಭದ್ರಾವತಿ : ನಗರಸಭೆ ವಾರ್ಡ್ ನಂ.೨೯ರ ಜನ್ನಾಪುರ ಕೆರೆ ಪ್ರವಾಸಿಗರ ತಾಣವನ್ನಾಗಿ ಅಭಿವೃದ್ಧಿಪಡಿಸಲು ತಕ್ಷಣ ಟೆಂಡರ್ ಪ್ರಕ್ರಿಯೆ ಆರಂಭಿಸುವಂತೆ ಒತ್ತಾಯಿಸಿ ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್ ಸುಂದರೇಶ್‌ರವರಿಗೆ ನಗರದ ಜನ್ನಾಪುರ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ವತಿಯಿಂದ ಮನವಿ ಸಲ್ಲಿಸಲಾಗಿದೆ.
ನಗರಸಭೆ ವಾರ್ಡ್ ನಂ.೧೫ರ ಹೊಸಮನೆ ತಮ್ಮಣ್ಣ ಕಾಲೋನಿ ಹಿಂಭಾಗದಲ್ಲಿರುವ ಸುಮಾರು ೮೦೦ ವರ್ಷಗಳ ಇತಿಹಾಸ ಹೊಂದಿರುವ ೫೦ ಎಕರೆ ೨೦ ಗುಂಟೆ ವಿಸ್ತೀರ್ಣ ಹೊಂದಿರುವ ಸರ್ಕಾರಿ ಹಿರೇಕೆರೆ ಅಭಿವೃದ್ದಿಗೆ ಸಂಬಂಧಿಸಿದಂತೆ ಸ್ಥಳಕ್ಕೆ ಆಗಮಿಸಿ ಕೆರೆ ವೀಕ್ಷಣೆ ನಡೆಸುವಂತೆ ಕೋರಲಾಗಿದೆ.
ಜನ್ನಾಪುರ ಕೆರೆಗೆ ನೂರಾರು ವರ್ಷಗಳಿಂದ ಕಲ್ಮಶಗೊಂಡಿರುವ ನೀರು ಬಂದು ಸೇರುತ್ತಿದ್ದು, ಇದರಿಂದಾಗಿ ಕೆರೆಯಿಂದ ದುರ್ವಾಸನೆ ಬರುತ್ತಿದೆ. ಅಲ್ಲದೆ ಸುತ್ತಮುತ್ತಲ ಪರಿಸರದಲ್ಲಿ ನೈರ್ಮಲ್ಯ ಹದಗೆಟ್ಟು ನಿವಾಸಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತಿದೆ. ಈ ಹಿನ್ನಲೆಯಲ್ಲಿ ಕ್ಷೇತ್ರದ ಅನ್ನದಾತ, ಶ್ರೇಷ್ಠ ತಂತ್ರಜ್ಞ, ಭಾರತರತ್ನ ಸರ್.ಎಂ ವಿಶ್ವೇಶ್ವರಾಯ ಅವರ ಹೆಸರಿನಲ್ಲಿ ಕೆರೆ ಪ್ರವಾಸಿಗರ ತಾಣವನ್ನಾಗಿ ಅಭಿವೃದ್ಧಿ ಪಡಿಸಲು ತಕ್ಷಣ ಟೆಂಡರ್ ಪ್ರಕ್ರಿಯೆ ಆರಂಭಿಸುವಂತೆ ಮನವಿ ಮಾಡಲಾಗಿದೆ.
ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ತಹಸೀಲ್ದಾರ್, ನಗರಸಭೆ ಪೌರಾಯುಕ್ತರು, ಕರ್ನಾಟಕ ನೀರಾವರಿ ನಿಗಮ ನಿಯಮಿತದ ಅಧಿಕಾರಿಗಳು ಮತ್ತು ಮೀನುಗಾರಿಕೆ ಇಲಾಖೆ ಅಧಿಕಾರಿ ವರ್ಗದವರು ಹಾಗು ಕೆರೆ ಸಮೀಪದ ರೈತರನ್ನೊಳಗೊಂಡ ಒಂದು ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.
ಮನವಿ ಸ್ವೀಕರಿಸಿದ ಎಚ್.ಎಸ್ ಸುಂದರೇಶ್‌ರವರು ಕೆರೆ ಅಭಿವೃದ್ಧಿ ಪ್ರಾಧಿಕಾರದಿಂದ ಅನುಮತಿ ದೊರೆತ ತಕ್ಷಣ ಟೆಂಡರ್ ಪ್ರಕ್ರಿಯೆ ಆರಂಭಿಸುವುದಾಗಿ ಟ್ರಸ್ಟ್ ಛೇರ್ಮನ್, ನಗರಸಭೆ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಆರ್. ವೇಣುಗೋಪಾಲ್‌ರವರಿಗೆ ಭರವಸೆ ನೀಡಿದ್ದಾರೆ.
ತಾಲೂಕಿನ ಕಲ್ಲಹಳ್ಳಿ ಗ್ರಾಮದ ಧರ್ಮಣ್ಣ ಹಾಗೂ ಕೋಡಿಹಳ್ಳಿ ಸತ್ಯ ಉಪಸ್ಥಿತರಿದ್ದರು.
No comments:
Post a Comment