ಭದ್ರಾವತಿ : ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಜ.೫ರಂದು ನ್ಯೂಟೌನ್ ರೋಟರಿಕ್ಲಬ್ ಸಭಾಂಗಣದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ದತ್ತಿ ಹಾಗು ಪುಸ್ತಕ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕೆ.ಬಿ ತಮ್ಮಯ್ಯಗೌಡ ಮತ್ತು ಅಕ್ಕಾಣಿಯಮ್ಮ ದತ್ತಿ ಕಾರ್ಯಕ್ರಮದಲ್ಲಿ `ಕುವೆಂಪು ಸಾಹಿತ್ಯದಲ್ಲಿ ವೈಜಾರಿಕತೆ' ವಿಷಯ ಮಂಡನೆ ನಡೆಯಲಿದೆ. ಅಲ್ಲದೆ ಕೋಡ್ಲು ಯಜ್ಞಯ್ಯರವರು ರಚಿಸಿರುವ `ಸತ್ಯಕ್ಕೆ ಸಾವಿಲ್ಲ' ಕಥಾ ಸಂಕಲನ ಪುಸ್ತಕ ಲೋಕಾರ್ಪಣೆಗೊಳ್ಳಲಿದೆ.
ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ, ದತ್ತಿ ದಾನಿಗಳಾದ ಕೋಡ್ಲು ಯಜ್ಞಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ.
ಶಿವಮೊಗ್ಗ ಸಹ್ಯಾದ್ರಿ ಕಲಾ ಕಾಲೇಜಿನ ಸಾಹಿತಿ, ಪ್ರಾಧ್ಯಾಪಕರಾದ ಡಾ. ಮೇಟಿ ಮಲ್ಲಿಕಾರ್ಜುನ ಉಪನ್ಯಾಸ ನೀಡಲಿದ್ದು, ಎಸ್‌ಎವಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಹರಿಣಾಕ್ಷಿ, ಪತ್ರ ಸಂಸ್ಕೃತಿ ಸಂಸ್ಥಾಪಕ ಹೊಸಹಳ್ಳಿ ದಾಳೇಗೌಡ, ರೋಟರಿ ಕ್ಲಬ್ ಅಧ್ಯಕ್ಷ ರಾಘವೇಂದ್ರ ಉಪಾಧ್ಯಾಯ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಮತ್ತು ಕರ್ನಾಟಕ ಜಾನಪದ ಪರಿಷತ್ ಎಂ.ಆರ್ ರೇವಣಪ್ಪ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
No comments:
Post a Comment