ಭದ್ರಾವತಿ: ರಂಗಪ್ಪ ವೃತ್ತದ ಜೈ ಭೀಮ್ ನಗರದಲ್ಲಿ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ನಿರ್ಮಿಸಿರುವ ವಸತಿ ಸಮುಚ್ಛಯಗಳನ್ನು ಭಾನುವಾರ ಗಣರಾಜ್ಯೋತ್ಸವ ದಿನದಂದು ಕರ್ನಾಟಕ ರಾಜ್ಯ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.

ಆರ್.ಜಿ.ಆರ್.ಎಚ್.ಸಿ.ಎಲ್ ವತಿಯಿಂದ ಒಟ್ಟು ೫.೬೦ ಕೋಟಿ ರು. ವೆಚ್ಚದಲ್ಲಿ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಯಡಿ ವಸತಿ ಸಮುಚ್ಛಯಗಳನ್ನು ನಿರ್ಮಿಸಲಾಗಿದ್ದು, ಒಟ್ಟು ೭೪ ಪೌರಕಾರ್ಮಿಕರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಹಿಂದೆ ನಗರಸಭೆ ಪೌರಾಯುಕ್ತರಾಗಿದ್ದ ಮನೋಹರ್‌ರವರ ಅವಧಿಯಲ್ಲಿಯೇ ವಸತಿ ಸಮುಚ್ಛಯಗಳು ನಿರ್ಮಾಣಗೊಂಡು ಪೂರ್ಣಗೊಂಡಿದ್ದವು. ಇದೀಗ ಪೌರಕಾರ್ಮಿಕರಿಗೆ ವಸತಿ ಗೃಹಗಳನ್ನು ಹಸ್ತಾಂತರಿಸಲಾಯಿತು.
ನಗರಸಭೆ ಅಧ್ಯಕ್ಷ ಎಂ. ಮಣಿ ಎಎನ್‌ಎಸ್, ಪೌರಾಯುಕ್ತ ಪ್ರಕಾಶ್ ಎಂ. ಚನ್ನಪ್ಪನವರ್, ಸ್ಥಾಯಿ ಸಮಿತಿ ಅಧ್ಯಕ್ಷ ಕಾಂತರಾಜ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಸೂಡಾ ಸದಸ್ಯ ಎಚ್. ರವಿಕುಮಾರ್ ಸೇರಿದಂತೆ ನಗರಸಭೆ ಚುನಾಯಿತ ಹಾಗು ನಾಮನಿರ್ದೇಶಿತ ಸದಸ್ಯರು ಉಪಸ್ಥಿತರಿದ್ದರು.
No comments:
Post a Comment