ಭದ್ರಾವತಿ ತಾಲೂಕಿನ ಅಂತರಗಂಗೆ ಕ್ಲಸ್ಟರ್, ಯರೇಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶಾರದಾ ಮಾತೆ ವಿಗ್ರಹ ಪ್ರತಿಷ್ಠಾಪನೆ ನೆರವೇರಿಸಲಾಯಿತು.
ಭದ್ರಾವತಿ: ತಾಲೂಕಿನ ಅಂತರಗಂಗೆ ಕ್ಲಸ್ಟರ್, ಯರೇಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶಾರದಾ ಮಾತೆ ವಿಗ್ರಹ ಪ್ರತಿಷ್ಠಾಪನೆ ನೆರವೇರಿಸಲಾಯಿತು.
ಶಾಲಾ ಮಕ್ಕಳ ಪೋಷಕರು, ಗ್ರಾಮಸ್ಥರು ಹಾಗು ಶಾಲಾಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಶಾರದಾ ಮಾತೆ ವಿಗ್ರಹ ಪ್ರತಿಷ್ಠಾಪಿಸಲಾಗಿದ್ದು, ಶಾಲೆಯ ಹಳೆಯ ವಿದ್ಯಾರ್ಥಿ, ಪುರೋಹಿತರಾದ ಲಕ್ಷ್ಮೀಕಾಂತ್ ಪ್ರತಿಷ್ಠಾಪನಾ ಧಾರ್ಮಿಕ ಆಚರಣೆಗಳ ನೇತೃತ್ವ ವಹಿಸಿದ್ದರು.
ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕೃಷ್ಣಮೂರ್ತಿ ಸೇರಿದಂತೆ ಸದಸ್ಯರು, ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಹಾಗು ಶಾಲೆಯ ಮುಖ್ಯ ಶಿಕ್ಷಕ ಮತ್ತು ಶಿಕ್ಷಕ ವೃಂದ, ಸಿಬ್ಬಂದಿ ವರ್ಗದವರು, ಪೋಷಕರು, ಶಾಲಾ ಮಕ್ಕಳು ಮತ್ತು ಗ್ರಾಮಸ್ಥರು ಪಾಲ್ಗೊಂಡಿದ್ದರು.
ಜ.೧೧ರಂದು ಶಾಲಾ ಹಬ್ಬ:
ಶಾಲಾ ಆವರಣದಲ್ಲಿ ಜ.೧೧ರಂದು ಸಂಜೆ ೪ ಗಂಟೆಗೆ ಶಾಲಾ ಹಬ್ಬ ನಡೆಯಲಿದ್ದು, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಣೆ ನಡೆಯಲಿದೆ. ಶಾಲಾ ಮಕ್ಕಳು ಮತ್ತು ಪೋಷಕರು ಹಾಗು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment