ಸಾವಯವ ಮತ್ತು ಸಿರಿಧಾನ್ಯ, ರಾಜ್ಯ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯ ಸಿರಿಧಾನ್ಯ ಸಿಹಿ ಖಾದ್ಯ ವಿಭಾಗದಲ್ಲಿ ಭದ್ರಾವತಿ ನಗರದ ವಿದ್ಯಾಮಂದಿರ ನಿವಾಸಿ ಬಿ.ಎಂ ಪ್ರೇಮಲತಾ ೨ನೇ ಸ್ಥಾನ ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಿದರು.
ಭದ್ರಾವತಿ: ಕೃಷಿ ಇಲಾಖೆ ವತಿಯಿಂದ ಸ್ಲರ್ಪ್ ಕಲಿನರಿ ಅಕಾಡೆಮಿ ಸಹಯೋಗದೊಂದಿಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಅಂತರರಾರಾಷ್ಟ್ರೀಯ ವಾಣಿಜ್ಯ ಮೇಳ-೨೦೨೫, ಸಾವಯವ ಮತ್ತು ಸಿರಿಧಾನ್ಯ, ರಾಜ್ಯ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯ ಸಿರಿಧಾನ್ಯ ಸಿಹಿ ಖಾದ್ಯ ವಿಭಾಗದಲ್ಲಿ ನಗರದ ವಿದ್ಯಾಮಂದಿರ ನಿವಾಸಿ ಬಿ.ಎಂ ಪ್ರೇಮಲತಾ ೨ನೇ ಸ್ಥಾನ ಪಡೆದುಕೊಂಡಿದ್ದಾರೆ.
ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರದಾನ ಮಾಡಿದರು. ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭ ಕರಂದ್ಲಾಜೆ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ, ಸಚಿವರಾದ ಕೃಷ್ಣ ಬೈರೇಗೌಡ, ಬಿ.ಎಸ್ ಸುರೇಶ್, ಶಾಸಕ ಗೋವಿಂದಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಪ್ರೇಮಲತಾ ಅವರನ್ನು ನಗರದ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಅಭಿನಂದಿಸಿದ್ದಾರೆ.
No comments:
Post a Comment