ಭದ್ರಾವತಿ ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಗುರುವಾರ ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಐದನೇ ಆರಾಧನೆ ಮಹೋತ್ಸವ ಜರುಗಿತು.
ಭದ್ರಾವತಿ : ಹಳೇನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಗುರುವಾರ ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ ಐದನೇ ಆರಾಧನೆ ಮಹೋತ್ಸವ ಜರುಗಿತು.
ಶ್ರೀ ಮಠದಲ್ಲಿ ಬೆಳಗ್ಗೆ ಪಂಚಾಮೃತ ಅಭಿಷೇಕ ಹಾಗೂ ಪವಮಾನ ಹೋಮ ನಡೆಯಿತು. ನಂತರ ಪೇಜಾವರ ಶ್ರೀಗಳ ಭಾವಚಿತ್ರದೊಂದಿಗೆ ಮೂರು ಪ್ರದಕ್ಷಿಣೆ ಜರುಗಿತು. ಮಧ್ಯಾಹ್ನ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ನೆರವೇರಿತು.
ವೇ||ಬ್ರ|| ಶ್ರೀ ಗೋಪಾಲಚಾರ್, ಶ್ರೀ ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರಳಿಧರ ತಂತ್ರಿ, ಉಪಾಧ್ಯಕ್ಷರಾದ ಸುಮಾ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ಜಿ. ರಮಾಕಾಂತ್, ಖಜಾಂಚಿ ನಿರಂಜನಚಾರ್, ಸತ್ಯನಾರಾಯಣಚಾರ್, ಮಾಧುರಾವ್, ಶುಭ ಗುರುರಾಜ್, ಮಾಧ್ವ ಮಂಡಳಿ ಅಧ್ಯಕ್ಷ ಜಯತೀರ್ಥ, ಕೆ.ಎಸ್ ಸುಧೀಂದ್ರ, ವಿದ್ಯಾನಂದನಾಯಕ, ಪ್ರಶಾಂತ್, ಪ್ರಮೋದ್ ಕುಮಾರ್ ಹಾಗೂ ಪವನ್ ಕುಮಾರ್ ಉಡುಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment