ಭದ್ರಾವತಿ ನಗರದ ಜೆಪಿಎಸ್ ಕಾಲೋನಿ, ಮೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ರವರ ಕಛೇರಿ ವತಿಯಿಂದ ಆಯೋಜಿಸಲಾಗಿದ್ದ ೭೬ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಬಿ.ಎಸ್ ಪ್ರಕಾಶ್ ಧ್ವಜಾರೋಹಣ ನೆರವೇರಿಸಿದರು.
ಭದ್ರಾವತಿ: ನಗರದ ಜೆಪಿಎಸ್ ಕಾಲೋನಿ, ಮೆಸ್ಕಾಂ ಕಾರ್ಯ ಮತ್ತು ಪಾಲನಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ರವರ ಕಛೇರಿ ವತಿಯಿಂದ ಆಯೋಜಿಸಲಾಗಿದ್ದ ೭೬ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಬಿ.ಎಸ್ ಪ್ರಕಾಶ್ ಧ್ವಜಾರೋಹಣ ನೆರವೇರಿಸಿದರು.
ಭಾರತರತ್ನ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮಗಾಂಧಿಜೀಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಸೂಚಿಸಲಾಯಿತು. ಧ್ವಜಾರೋಹಣದ ನಂತರ ಸಿಹಿ ಹಂಚಲಾಯಿತು.
ಲೆಕ್ಕಾಧಿಕಾರಿ ಅಶ್ವಿನಿಕುಮಾರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಗಿರೀಶ್, ಹಿರಿಯ ಸಹಾಯಕಿ ನಾಗರತ್ನ ಸೇರಿದಂತೆ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
No comments:
Post a Comment