ಕೊಟ್ರಪ್ಪ
ಭದ್ರಾವತಿ: ತಾಲೂಕಿನ ಗೊಂದಿ ಬಲದಂಡೆ ನಾಲೆ ಕಾಮಗಾರಿಗೆ ಸಂಬಂಧಿಸಿಂತೆ ಇ-ಟೆಂಡರ್ ವಿಚಾರದಲ್ಲಿ ಕಾಮಗಾರಿ ಬಿಲ್ ಮಂಜೂರು ಮಾಡುವ ಸಂಬಂಧ ಗುತ್ತಿಗೆದಾರನಿಂದ ಲಂಚದ ಹಣ ಪಡೆಯುವಾಗ ಕಂಪ್ಯೂಟರ್ ಆಪರೇಟರ್ ಮತ್ತು ಸೆಕ್ಷನ್ ಆಫೀಸರ್ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.
ಕರ್ನಾಟಕ ನೀರಾವರಿ ನಿಗಮ ನಿಯಮಿತ ಭದ್ರಾ ಯೋಜನಾ ವೃತ್ತ, ಬಿಆರ್‌ಪಿ ವ್ಯಾಪ್ತಿಯ ತಾಲೂಕಿನ ಗೊಂದಿ ಬಲದಂಡೆ ನಾಲೆಯಲ್ಲಿ ಶಿಲ್ಟ್ ತಗೆಯಲು ಇ-ಟೆಂಡರ್ ಕರೆದಿದ್ದು, ಅದರಂತೆ ಲೋಕೋಪಯೋಗಿ ದ್ವಿತೀಯ ದರ್ಜೆ ಗುತ್ತಿಗೆದಾರ (ಪಿಡಬ್ಲ್ಯೂಡಿ ಕ್ಲಾಸ್-೦೨) ವಿ. ರವಿ ಎಂಬುವರು ೨೦೨೩ನೇ ಸಾಲಿನ ಡಿಸೆಂಬರ್ ತಿಂಗಳಲ್ಲಿ ಇ-ಟೆಂಡರ್ ಪಡೆದಿರುತ್ತಾರೆ. ಈ ಕಾಮಗಾರಿ ಒಟ್ಟು ಮೊತ್ತ ಜಿಎಸ್‌ಟಿ ಸೇರಿ ೯,೧೬,೯೯೯ ರು. ಗಳಾಗಿದ್ದು, ೨೦೨೩ನೇ ಡಿಸೆಂಬರ್ ತಿಂಗಳಲ್ಲಿ ಕೆಲಸ ಪ್ರಾರಂಭಿಸಿ, ೨೦೨೪ನೇ ಜನವರಿ ತಿಂಗಳಲ್ಲಿ ಕಾಮಗಾರಿ ಮುಕ್ತಾಯ ಮಾಡಿದ್ದರು.
ಕಾಮಗಾರಿ ಬಿಲ್ ಮಂಜೂರು ಮಾಡುವಂತೆ ಕಚೇರಿಗೆ ಹಲವಾರು ಬಾರಿ ರವಿಯವರು ಅಲೆದಾಡಿದ್ದು, ಆದರೆ ಟೆಂಡರ್ ಹಣ ಬಿಡುಗಡೆ ಆಗಿರುವುದಿಲ್ಲ. ಡಿ.೨೭ ರಂದು ಡಿ.ಬಿ ಹಳ್ಳಿಯ ಕರ್ನಾಟಕ ನೀರಾವರಿ ನಿಗಮ ನಿಯಮಿತ ಕಛೇರಿಗೆ ಹೋಗಿ ಕಛೇರಿಯಲ್ಲಿದ್ದ ಸೆಕ್ಷನ್ ಆಫೀಸರ್ ಟಿ. ಕೊಟ್ರಪ್ಪರವರನ್ನು ಭೇಟಿ ಮಾಡಿ, ತಮ್ಮ ಕಾಮಗಾರಿ ಬಿಲ್ ಮಂಜೂರು ಮಾಡುವಂತೆ ರವಿಯವರು ಕೇಳಿದ್ದಾರೆ. ಆದರೆ ಕೊಟ್ರಪ್ಪರವರು ಬಿಲ್ ಮಂಜೂರು ಮಾಡಲು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.
ಆರವಿಂದ್
೧,೨೦,೦೦೦ ರು. ಗಳನ್ನು ನೀಡಿದರೆ ಮಾತ್ರ ಮಂಜೂರು ಮಾಡುವುದಾಗಿ ಕೊಟ್ರಪ್ಪ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಈ ಸಂಬಂಧ ಲೋಕಾಯುಕ್ತರ ತಂಡ ರಚಿಸಲಾಗಿತ್ತು. ಬುಧವಾರ ಸಂಜೆ ಸುಮಾರು ೪.೩೦ರ ಸಮಯದಲ್ಲಿ ಕೊಟ್ರಪ್ಪ(ಪ್ರಬಾರ ಎ.ಇ.ಇ) ಮತ್ತು ಅವರ ಕಛೇರಿಯ ಕಂಪ್ಯೂಟರ್ ಆಪರೇಟರ್ ಅರವಿಂದ್‌ರವರು ೧,೨೦,೦೦೦ ರು. ಲಂಚದ ಹಣ ಕಚೇರಿಯಲ್ಲಿ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ.
ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಚ್ ಮಂಜುನಾಥ ಚೌದರಿ ನೇತೃತ್ವದ ತಂಡ ಕಾರ್ಯಾಚರಣೆ ಕೈಗೊಂಡಿತ್ತು. ಲೋಕಾಯುಕ್ತ ಪೊಲೀಸ್ ಠಾಣೆ ನಿರೀಕ್ಷಕರಾದ ವೀರಬಸಪ್ಪ.ಎಲ್.ಕುಸಲಾಪುರ, ಎಚ್.ಎಸ್ ಸುರೇಶ್, ಪ್ರಕಾಶ್, ಸಿಬ್ಬಂದಿಗಳಾದ ಯೋಗೇಶ್, ಟೀಕಪ್ಪ, .ಸುರೇಂದ್ರ, ಎಂ. ಮಂಜುನಾಥ್, ಪ್ರಶಾಂತ್ ಕುಮಾರ್, ಚೆನ್ನೇಶ್, ಅರುಣ್ ಕುಮಾರ್, ದೇವರಾಜ್, ಪ್ರಕಾಶ್, ಆದರ್ಶ, ಎನ್. ಪುಟ್ಟಮ್ಮ., ಅಂಜಲಿ, ಗಂಗಾಧರ ಮತ್ತು ಪ್ರದೀಪ್‌ರವರು ಪಾಲ್ಗೊಂಡಿದ್ದರು.
No comments:
Post a Comment