ಭದ್ರಾವತಿ: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಜ.೨೬ರ ಭಾನುವಾರ ಬೆಳಿಗ್ಗೆ ೯ ಗಂಟೆಗೆ ೭೬ನೇ ಗಣ ರಾಜ್ಯೋತ್ಸವ ನಡೆಯಲಿದೆ.
ಪ್ರತಿ ವರ್ಷದಂತೆ ಈ ಬಾರಿ ಸಹ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಂದ್ವಾನಿ ದ್ವಜಾರೋಹಣ ನೆರವೇರಿಸಲಿದ್ದು, ಕಾರ್ಖಾನೆ ಭದ್ರತಾ ಪಡೆ ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳ ತಂಡಗಳು ಪಥ ಸಂಚಲನದಲ್ಲಿ ಪಾಲ್ಗೊಳ್ಳಲಿವೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್. ಪ್ರವೀಣ್ ಕುಮಾರ್ ಕೋರಿದ್ದಾರೆ.
No comments:
Post a Comment