ಭದ್ರಾವತಿ ನಗರದ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ಛಲವಾದಿಗಳ ಸಮಾಜ(ಪ.ಜಾ)ದಲ್ಲಿ ಬುಧವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡ ಎನ್. ಶ್ರೀನಿವಾಸ್‌ರವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.
ಭದ್ರಾವತಿ: ನಗರದ ನ್ಯೂಟೌನ್ ಜಯಶ್ರೀ ವೃತ್ತದ ಸಮೀಪದಲ್ಲಿರುವ ಛಲವಾದಿಗಳ ಸಮಾಜ(ಪ.ಜಾ)ದಲ್ಲಿ ಬುಧವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಸಮಾಜದ ಮುಖಂಡ ಎನ್. ಶ್ರೀನಿವಾಸ್‌ರವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.
ಸಮಾಜದ ಅಧ್ಯಕ್ಷ ಚನ್ನಪ್ಪರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎನ್. ಶ್ರೀನಿವಾಸ್ ಸಮಾಜಕ್ಕೆ ಸಲ್ಲಿಸಿರುವ ಸೇವೆಯನ್ನು ಸ್ಮರಿಸಿದರು. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗು ಅವರ ಕುಟುಂಬ ವರ್ಗಕ್ಕೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿ, ಮೌನಾಚರಣೆ ನಡೆಸಲಾಯಿತು.
ಸಮಾಜದ ಪ್ರಮುಖರಾದ ನಿರ್ದೇಶಕರಾದ ಶಂಕರಯ್ಯ, ರಂಗಸ್ವಾಮಿ, ಚಂದ್ರಕುಮಾರ್, ಹುಚ್ಚಯ್ಯ, ಗೌರವಾಧ್ಯಕ್ಷ ಎಂ. ನಾಗರಾಜ್, ಕಾರ್ಯದರ್ಶಿ ಎಚ್.ಎಂ ಮಹಾದೇವಯ್ಯ, ರಾಮದಾಸ್, ಚಿಕ್ಕರಾಜು, ನೀಲಕಂಠಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment