ಭದ್ರಾವತಿ ಕಾಗದನಗರ ೬ನೇ ವಾರ್ಡ್ ಶ್ರೀ ಚೌಡೇಶ್ವರಿ ದೇವಿ.
ಭದ್ರಾವತಿ: ಪ್ರತಿವರ್ಷದಂತೆ ಈ ಬಾರಿ ಸಹ ನಗರಸಭೆ ವ್ಯಾಪ್ತಿಯ ಕಾಗದನಗರ ೬ನೇ ವಾರ್ಡ್ ಶ್ರೀ ಚೌಡೇಶ್ವರಿ ದೇವಿಯ ಜಾತ್ರಾ ಮಹೋತ್ಸವ ಜ.೭ರ ಮಂಗಳವಾರ ಜರುಗಲಿದೆ.
ಬೆಳಿಗ್ಗೆ ೧೨.೩೦ಕ್ಕೆ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಲಿದ್ದು, ಸಂಜೆ ೬ ಗಂಟೆಗೆ ಆರತಿ ತರುವುದರ ಮೂಲಕ ದೇವಿಯ ಉತ್ಸವ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಯಶಸ್ವಿಗೊಳಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ: ೯೯೦೦೮೩೦೨೭೪ ಅಥವಾ ೯೯೪೫೯೯೮೫೭೨ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
ಶಕ್ತಿ ದೇವತೆ ಶ್ರೀ ಚೌಡೇಶ್ವರಿ :
ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆ ಆರಂಭದೊಂದಿಗೆ ಕಾಗದ ನಗರ ಸಹ ಜನ್ಮ ತಾಳಿದ್ದು, ಅದರಲ್ಲೂ ಕಾರ್ಮಿಕರು, ಕುಟುಂಬ ವರ್ಗದವರು ಈ ಭಾಗದಲ್ಲಿ ನೆಲೆ ನಿಂತಿರುವ ಶಕ್ತಿ ದೇವತೆ ಶ್ರೀ ಚೌಡೇಶ್ವರಿ ದೇವಿಯನ್ನು ಶ್ರದ್ಧಾ ಭಕ್ತಿಯಿಂದ ಸುಮಾರು ೭-೮ ದಶಕಗಳಿಂದ ಆರಾಧಿಸಿಕೊಂಡು ಬರುತ್ತಿದ್ದಾರೆ.
ಬೃಹತ್ ಮರದ ಪೊಟರೆಯಲ್ಲಿ ನಿಂತಿರುವ ದೇವಿಗೆ ಬಹಳ ವರ್ಷಗಳವರೆಗೆ ದೇವಸ್ಥಾನ ನಿರ್ಮಾಣವಾಗಿರಲಿಲ್ಲ. ಇತ್ತೀಚೆಗೆ ಸುಮಾರು ೨ ದಶಕಗಳ ಹಿಂದೆ ದೇವಸ್ಥಾನ ನಿರ್ಮಾಣಗೊಂಡಿದೆ. ಬೃಹತ್ ಮರದ ಸುತ್ತ ಕಾಂಕ್ರೀಟ್ ಕಟ್ಟಡ ನಿರ್ಮಾಣವಾಗಿದ್ದು, ಪ್ರತಿ ವರ್ಷ ನಿವಾಸಿಗಳು ವಿಜೃಂಭಣೆಯಿಂದ ಜಾತ್ರಾ ಮಹೋತ್ಸವ ನೆಡೆಸಿಕೊಂಡು ಬರುತ್ತಿದ್ದಾರೆ.
ದೇವಸ್ಥಾನ ಮುಂಭಾಗದಲ್ಲಿರುವ ಅರಳಿಕಟ್ಟೆ ಸಹ ಇದೀಗ ಮತ್ತಷ್ಟು ನವೀಕರಣಗೊಳ್ಳುತ್ತಿದ್ದು, ಭಕ್ತರು ಹಾಗು ದಾನಿಗಳು ನವೀಕರಣ ಕಾರ್ಯಗಳಲ್ಲಿ ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ. ಕಳೆದ ಸುಮಾರು ೯ ವರ್ಷಗಳಿಂದ ಕಾರ್ಖಾನೆ ಸ್ಥಗಿತಗೊಂಡಿದ್ದು, ಬಹುತೇಕ ಕಾರ್ಮಿಕರು ಹಾಗು ಕುಟುಂಬ ವರ್ಗದವರು ಊರು ತೊರೆದಿದ್ದಾರೆ. ಕೆಲವರು ಇಲ್ಲಿಯೇ ನೆಲೆ ನಿಂತಿದ್ದಾರೆ. ಕಾರ್ಮಿಕರು ಹಾಗು ಕುಟುಂಬ ವರ್ಗದವರಿಗಾಗಿ ನಿರ್ಮಿಸಲಾಗಿದ್ದ ವಸತಿ ಗೃಹಗಳು, ಶಾಲೆಗಳು, ಆಸ್ಪತ್ರೆ, ಕ್ರೀಡಾಂಗಣ, ಕಲ್ಯಾಣಮಂಟಪ, ಧಾರ್ಮಿಕ ಕೇಂದ್ರಗಳು, ಉದ್ಯಾನವನ ಎಲ್ಲವೂ ಪಾಳು ಬಿದ್ದಿದ್ದು, ಇದೀಗ ಕಾಗದನಗರದಲ್ಲಿ ಸ್ಮಶಾನ ಮೌನ ಆವರಿಸಿಕೊಂಡಿದೆ. ಈ ನಡುವೆಯೂ ಅಳಿದಿರುವ ಕಾರ್ಮಿಕರು, ಕುಟುಂಬ ವರ್ಗದವರು ಈ ಭಾಗದಲ್ಲಿ ಜಾತ್ರೆ, ಹರಿದಿನಗಳನ್ನು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಕೈಗೊಳ್ಳುತ್ತಿದ್ದಾರೆ.
No comments:
Post a Comment