ಭದ್ರಾವತಿ ತಾಲೂಕಿನ ವಿವಿಧ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಶಿಷ್ಟಾಚಾರ ಪಾಲನೆ ಪ್ರಕಾರ ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಗುದ್ದಲಿಪೂಜೆ ಹಾಗೂ ಉದ್ಘಾಟನೆ ಕಾರ್ಯಗಳನ್ನು ನೆರವೇರಿಸುವಂತೆ ಆಗ್ರಹಿಸಿ ನಗರದ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ವತಿಯಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಹೇಮಂತ್‌ರವರಿಗೆ ಮನವಿ ಸಲ್ಲಿಸಲಾಗಿದೆ.
ಭದ್ರಾವತಿ : ತಾಲೂಕಿನ ವಿವಿಧ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಶಿಷ್ಟಾಚಾರ ಪಾಲನೆ ಪ್ರಕಾರ ಗ್ರಾಮೀಣ ಕುಡಿಯುವ ನೀರಿನ ಯೋಜನೆಯ ಗುದ್ದಲಿಪೂಜೆ ಹಾಗೂ ಉದ್ಘಾಟನೆ ಕಾರ್ಯಗಳನ್ನು ನೆರವೇರಿಸುವಂತೆ ಆಗ್ರಹಿಸಿ ನಗರದ ಡಿ. ದೇವರಾಜ ಅರಸು ಜನಸ್ಪಂದನ ಸೇವಾ ಟ್ರಸ್ಟ್ ವತಿಯಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಹೇಮಂತ್‌ರವರಿಗೆ ಮನವಿ ಸಲ್ಲಿಸಲಾಗಿದೆ.
ಭದ್ರಾವತಿ ಹಾಗೂ ಶಿವಮೊಗ್ಗ ಗ್ರಾಮಾಂತರ ಪ್ರದೇಶ ವ್ಯಾಪ್ತಿಯ ಉಂಬ್ಳೆಬೈಲು ಹಾಗೂ ಕಲ್ಲಹಳ್ಳಿ ಗ್ರಾಮಪಂಚಾಯತಿ ಮತ್ತು ೨೮ ಹಳ್ಳಿಗಳಲ್ಲಿ ಹಾಗೂ ಸಿಂಗನಮನೆ ಗ್ರಾಮಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ, ಮಾರಶೆಟ್ಟಿಹಳ್ಳಿ ಗ್ರಾಮಪಂಚಾಯತಿ ವ್ಯಾಪ್ತಿಯ ಮತ್ತು ೨೩ ಹಳ್ಳಿಗಳಲ್ಲಿ, ಆನವೇರಿ ಗ್ರಾಮಪಂಚಾಯತಿ ಮತ್ತು ೩೭ ಹಳ್ಳಿಗಳಲ್ಲಿ ಕುಂಸಿ ಮತ್ತು ಗಾಜನೂರು ಗ್ರಾಮಪಂಚಾಯತಿ ಮತ್ತು ೮೯ ಹಳ್ಳಿಗಳಲ್ಲಿ ಬಹುಗ್ರಾಮ ಕುಡಿಯುವ ಯೋಜನೆಯ ನೀರಿನ ಟೆಂಡರ್ ಪ್ರಕ್ರಿಯೆ ಈಗಾಗಲೇ ಮುಗಿದಿರುವುದರಿಂದ ಶಿಷ್ಟಾಚಾರ ಪಾಲನೆ ಪ್ರಕಾರ ಗುದ್ದಲಿ ಪೂಜೆ ಕಾರ್ಯಕ್ರಮ ಕೈಗೆತ್ತಿಕೊಳ್ಳಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಕೋರಲಾಗಿದೆ.
ಅಂತರಗಂಗೆ ಮತ್ತು ೨೧ ಹಳ್ಳಿಗಳಿಗೆ, ದೊಡ್ಡೇರಿ ಮತ್ತು ಇತರೆ ೧೬ ಹಳ್ಳಿಗಳಲ್ಲಿ ಹಾಗೂ ತಡಸ ಮತ್ತು ೪ ಹಳ್ಳಿಗಳಲ್ಲಿ ಕುಡಿಯುವ ನೀರಿನ ಕಾಮಗಾರಿ ಯೋಜನೆ ಪೂರ್ಣಗೊಂಡಿರುವುದರಿಂದ ಶಿಷ್ಟಾಚಾರ ಪಾಲನೆ ಪ್ರಕಾರ ಯೋಜನೆಯ ಉದ್ಘಾಟನಾ ಕಾರ್ಯಕ್ರಮವನ್ನು ಕೈಗೆತ್ತಿಕೊಳ್ಳಲು ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಒತ್ತಾಹಿಸಲಾಗಿದೆ.
ಟ್ರಸ್ಟ್ ಛೇರ್‍ಮನ್ ಆರ್. ವೇಣುಗೋಪಾಲ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದ್ದು, ಮನವಿ ಸ್ವೀಕರಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್. ಹೇಮಂತ್‌ರವರು ತಕ್ಷಣ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ, ತುರ್ತು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ಆರ್. ಧರ್ಮಪ್ಪ ಉಪಸ್ಥಿತರಿದ್ದರು.
No comments:
Post a Comment